ಗೋಕರ್ಣ | ಕುಡ್ಲೆ ಬೀಚ್‌ನಲ್ಲಿ ಅಲೆಗಳ ಸೆಳೆತಕ್ಕೆ ಸಿಲುಕಿದ ಕಜಕಿಸ್ತಾನ ಮೂಲದ ಮಹಿಳೆ ರಕ್ಷಣೆ

Date:

ಗೋಕರ್ಣ: ಪ್ರಸಿದ್ಧ ಕುಡ್ಲೆ ಕಡಲ ತೀರದಲ್ಲಿ ಈಜಲು ಇಳಿದಿದ್ದ ಕಜಕಿಸ್ತಾನ ಮೂಲದ ಮಹಿಳೆಯೊಬ್ಬರು ಬೃಹತ್ ಅಲೆಗಳಿಗೆ ಸಿಲುಕಿ ಅಪಾಯದ ಸ್ಥಿತಿಯಲ್ಲಿ ಇದ್ದ ಸಮಯದಲ್ಲಿ, ಜೀವ ರಕ್ಷಕ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಮಹಿಳೆಯನ್ನು ದಡಕ್ಕೆ ಎಳೆದುಕೊಂಡು ಬಂದು ಅವರನ್ನು ಪ್ರಾಣಾಪಾಯದಿಂದ ಪಾರು ಮಾಡಿದ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ. ಈ ಅಪಘಾತದಲ್ಲಿ ಸಿಲುಕಿ ಪಾರಾಗಿರುವ ಪ್ರವಾಸಿಯ ಹೆಸರು ಐದಾಲಿ (25) ಎಂದು ಗುರುತಿಸಲಾಗಿದ್ದು, ಇವರು ತಮ್ಮ ಪತಿಯೊಂದಿಗೆ ಪ್ರವಾಸಕ್ಕಾಗಿ ಗೋಕರ್ಣಕ್ಕೆ ಆಗಮಿಸಿದ್ದರು ಎಂದು ತಿಳಿದುಬಂದಿದೆ.

ಸೋಮವಾರ ಬೆಳಿಗ್ಗೆ ಕುಡ್ಲೆ ಬೀಚ್‌ನಲ್ಲಿ ಈಜುತ್ತಿದ್ದ ವೇಳೆ ಹಠಾತ್ ಬಂದ ಬಲವಾದ ಅಲೆಯ ರಭಸಕ್ಕೆ ಸಿಲುಕಿ, ಸಮುದ್ರದ ಒಳಸೆಳೆತಕ್ಕೆ ಇವರು ಸಿಲುಕಿಕೊಂಡಿದ್ದರು. ಸ್ಥಳದಲ್ಲೇ ಇದ್ದು ಘಟನೆಯನ್ನು ಗಮನಿಸಿದ ಸ್ಥಳೀಯ ಜೀವ ರಕ್ಷಕ ಸಿಬ್ಬಂದಿಗಳಾದ ಮಂಜುನಾಥ ಹರಿಕಂತ್ರ, ಗಿರೀಶ ಗೌಡ, ನಾಗೇಂದ್ರ ಕುರ್ಲೆ ಹಾಗೂ ‘ಮೈ ಸ್ಟಿಕ್ ಗೋಕರ್ಣ ಅಡ್ವೆಂಚರ್’ನ ಸಿಬ್ಬಂದಿ ಲಕ್ಷ್ಮಿಕಾಂತ ಹರಿಕಂತ್ರ, ಜೊತೆಗೆ ಟೂರಿಸ್ಟ್ ಮಿತ್ರ ಶೇಖರ್ ಹರಿಕಂತ್ರ ಅವರು ತಕ್ಷಣವೇ ಅವರನ್ನು ರಕ್ಷಿಸಿ ಮಹಿಳೆಯನ್ನು ಸುರಕ್ಷಿತವಾಗಿ ದಡಕ್ಕೆ ಕರೆತಂದಿದ್ದಾರೆ.

ಗೋಕರ್ಣದ ಕಡಲ ತೀರಗಳು ಪ್ರವಾಸಿಗರನ್ನು ಸೆಳೆಯುವಂತೆಯೇ, ಇಲ್ಲಿನ ಸಮುದ್ರದ ಅಲೆಗಳು ಮತ್ತು ಒಳಸೆಳೆತಗಳು ಅಪಾಯಕಾರಿ ಸ್ವಭಾವ ಹೊಂದಿರುವುದರಿಂದ ಪ್ರವಾಸಿಗರು ಆದಷ್ಟು ಎಚ್ಚರಿಕೆಯಿಂದ ಇರುವುದು ಅವಶ್ಯಕ ಎಂದು ಪ್ರವಾಸೋದ್ಯಮ ಇಲಾಖೆ ಹಾಗೂ ಪೊಲೀಸ್ ಇಲಾಖೆ ಎಚ್ಚರಿಸಿದೆ. ಸಮುದ್ರ ಮೇಲ್ನೋಟಕ್ಕೆ ಶಾಂತವಾಗಿ ಕಾಣಿಸಿಕೊಂಡರೂ, ಒಳಗೆ ಬಲವಾದ ಸೆಳೆತಗಳು ಇರುವ ಸಾಧ್ಯತೆಯಿದ್ದು, ಪ್ರವಾಸಿಗರು ಆಳ ನೀರಿಗೆ ಇಳಿಯದಂತೆ ಸೂಚಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ನಿಷೇಧವಿದ್ದರೂ ನಿಲ್ಲದ ಮರಳು ದಂಧೆ; ಎನ್‌ಜಿಟಿ ಆದೇಶಕ್ಕೂ ಕಿಮ್ಮತ್ತಿಲ್ಲ

ಕಡಲ ತೀರದಲ್ಲಿ ಕೆಂಪು ಬಾವುಟ ಅಳವಡಿಸಿರುವ ಪ್ರದೇಶಗಳಿಗೆ ತೆರಳಬಾರದು ಎಂದು ಸೂಚಿಸಲಾಗಿದ್ದು, ಜೀವ ರಕ್ಷಕ ಸಿಬ್ಬಂದಿಗಳ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಜನತೆಗೆ ಮನವಿ ಮಾಡಲಾಗಿದೆ. ಮಕ್ಕಳೊಂದಿಗೆ ಬಂದಿರುವ ಕುಟುಂಬಗಳು ವಿಶೇಷ ನಿಗಾದೊಂದಿಗೆ ನೀರಿಗೆ ಇಳಿಯಬೇಕು. ನೀರಿನಲ್ಲಿ ಮಕ್ಕಳು ಮತ್ತು ವೃದ್ಧರನ್ನು ಒಂಟಿಯಾಗಿ ಬಿಡುವುದನ್ನು ತಪ್ಪಿಸುವಂತೆ ಅಧಿಕಾರಿಗಳು ತಿಳಿಸಿದ್ದಾರೆ. ಪ್ರವಾಸಿಗರು ಸುರಕ್ಷತೆಯನ್ನು ಮೊದಲ ಆದ್ಯತೆಯಾಗಿ ನೋಡಿಕೊಂಡರೆ ಅನಾಹುತಗಳನ್ನು ತಪ್ಪಿಸಬಹುದಾದ್ದರಿಂದ, ಎಲ್ಲರೂ ಜಾಗರೂಕತೆ ವಹಿಸಲು ಮನವಿ ಮಾಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...