ಕಾಸರಗೋಡು | ಗೂಗಲ್ ಮ್ಯಾಪ್ ಅವಾಂತರ: ನದಿಯಲ್ಲಿ ತೇಲಿದ ಕಾರು; ಅದೃಷ್ಟವಶಾತ್ ಇಬ್ಬರು ಪಾರು

Date:

ಗೂಗಲ್ ಮ್ಯಾಪ್ (Google Map) ನೋಡಿಕೊಂಡು ಚಲಿಸುತ್ತಿದ್ದ ಕಾರೊಂದು ಕಾಡಿನಲ್ಲಿನ ಒಳರಸ್ತೆಯಲ್ಲಿ ಪ್ರಯಾಣಿಸುತ್ತಿದ್ದ ವೇಳೆ ನದಿಗೆ ಬಿದ್ದು ನೀರಿನಲ್ಲಿ ಕೊಚ್ಚಿಹೋದ ಘಟನೆ ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ನಡೆದಿದೆ.

ಘಟನೆಯಲ್ಲಿ ಕಾರಿನೊಳಗಿದ್ದ ಚಾಲಕ ಹಾಗೂ ಸಹ ಪ್ರಯಾಣಿಕ ಇಬ್ಬರೂ ಕೂಡ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ.

ಕುಟ್ಟಿಕೋಲ್‌ನಿಂದ ಪಾಂಡಿಗೆ ಅರಣ್ಯದ ಮೂಲಕ ಹಾದು ಹೋಗುವ ರಸ್ತೆಯಲ್ಲಿ ಪಳಂಚಿ ಎಂಬಲ್ಲಿನ ಹಳೆ ಸೇತುವೆಯಲ್ಲಿ ಈ ಅವಘಡ ಸಂಭವಿಸಿದೆ. ಅಪಘಾತದಲ್ಲಿ ತೇಲಿದ ಕಾರಿನಲ್ಲಿದ್ದವರು ಕಾಞಂಗಾಡ್ ಅಂಬಲತ್ತರ ಮೂಲದವರಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದರು ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರಿನಲ್ಲಿದ್ದ ಪುಲ್ಲೂರಿನ ಅಂಚಿಲತ್ ಹೌಸ್‌ನ ನಿವಾಸಿ ತಸ್ರೀಫ್ (36) ಹಾಗೂ ಮುನಂಬಮ್ ಹೌಸ್‌ನ ನಿವಾಸಿ ಅಬ್ದುಲ್ ರಶೀದ್ (35) ಎಂಬುವವರು ಉಪ್ಪಿನಂಗಡಿಗೆ ತಲುಪಲು ಗೂಗಲ್ ಮ್ಯಾಪ್ ಹಾಕಿಕೊಂಡು ಪ್ರಯಾಣಿಸುತ್ತಿದ್ದರು. ಆದರೆ, ಕಾರು ಕಾಡಿನೊಳಗಿನ ಒಳರಸ್ತೆಯಲ್ಲಿರುವ ಹಳೆಯ ಸೇತುವೆಯ ಮೇಲೆ ಅಪಘಾತವಾಗಿದೆ.

ಅವಘಡಗೊಂಡ ಪ್ರದೇಶದಲ್ಲಿ ಬುಧವಾರ ತಡರಾತ್ರಿ ವಿಪರೀತ ಮಳೆಯಾಗಿತ್ತು. ಪ್ರಯಾಣಿಕರು ತಡೆಗೋಡೆ ಇಲ್ಲದೇ ಇದ್ದ ಸೇತುವೆ ಮೇಲೆ ಬಂದಾಗ ನೀರು ಉಕ್ಕಿ ಹರಿಯುತ್ತಿರುವುದು ಇವರಿಗೆ ತಿಳಿಯಲಿಲ್ಲ. ಹೀಗಾಗಿ, ಕಾರು ಮುಂದೆ ಚಲಾಯಿಸಿದ್ದಾರೆ. ಈ ವೇಳೆ ಕಾರು ನದಿಗೆ ಬಿದ್ದು ಸಂಪೂರ್ಣ ಮುಳುಗಡೆಯಾಗಿದೆ.

ಇದನ್ನು ಓದಿದ್ದೀರಾ? ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ನೂತನ ಅಧ್ಯಕ್ಷರಾಗಿ ಜಿ ಎಸ್ ಸಂಗ್ರೇಶಿ

ಈ ನಡುವೆ ಕಾರಿನೊಳಗಿನಿಂದ ಪವಾಡಸದೃಶ ರೀತಿಯಲ್ಲಿ ಹೊರಬಂದ ತಸ್ರೀಫ್ ಮತ್ತು ಅಬ್ದುಲ್ ರಶೀದ್ ನದಿಯಲ್ಲಿದ್ದ ಮರವೊಂದನ್ನು ಆಸರೆಯಾಗಿ ಹಿಡಿದುಕೊಂಡು, ಕೂಡಲೇ ಪೊಲೀಸರಿಗೆ ಕರೆ ಮಾಡಿದ್ದಾರೆ. ವಿಷಯ ತಿಳಿದ ನಂತರ ಸ್ಥಳೀಯರು ಹಾಗೂ ಅಗ್ನಿಶಾಮಕ ದಳ ಹಾಗೂ ಆದೂರು ಪೊಲೀಸರು ಸ್ಥಳಕ್ಕೆ ಆಗಮಿಸಿ, ಇಬ್ಬರನ್ನೂ ಹಗ್ಗದ ನೆರವಿನಿಂದ ರಕ್ಷಣೆ ಮಾಡಿರುವುದಾಗಿ ತಿಳಿದುಬಂದಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...