ಬಳ್ಳಾರಿ | ಸರ್ಕಾರಿ ಬಸ್ ಪಲ್ಟಿ; 55 ಪ್ರಯಾಣಿಕರಿಗೆ ಗಾಯ

Date:

ಬಳ್ಳಾರಿ ಜಿಲ್ಲೆ ಸಂಡೂರು ತಾಲ್ಲೂಕಿನ ಕಾಟೀನ್‌ಕಂಬ ಬಳಿ ಸರಕಾರಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ ಶಾಲಾ ಮಕ್ಕಳು ಸೇರಿ 55 ಜನರಿಗೆ ಗಾಯವಾದ ಘಟನೆ ಬುಧವಾರ ನಡೆದಿದೆ.

ಗಾಯಗೊಂಡ ಪ್ರಯಾಣಿಕರಿಗೆ ಸಂಡೂರು ಸರ್ಕಾರಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಗಿದೆ. ಗಂಭೀರವಾಗಿ ಗಾಯಗೊಂಡ 11 ಜನರನ್ನು ಬಳ್ಳಾರಿಯ ವಿಮ್ಸ್‌ಗೆ ದಾಖಲಿಸಲಾಗಿದೆ. ಸಣ್ಣ ಪುಟ್ಟ ಗಾಯಗಳಾಗಿ ಕೆಲವರು ಬಿಡುಗಡೆ ಆಗಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ..

ತಾಲ್ಲೂಕಿನ‌ ಗಡಿ‌ಗ್ರಾಮ ಗಿರೇನಹಳ್ಳಿಯಿಂದ ಉತ್ತರ ಮಲೈ, ಕಾಟೀನ್‌ಕಂಬ ಮಾರ್ಗವಾಗಿ ಸಂಡೂರಿಗೆ ಬರುತ್ತಿದ್ದ ಬಸ್‌ನಲ್ಲಿ 25 ವಿದ್ಯಾರ್ಥಿಗಳು ಇದ್ದರು. ಚಾಲಕನ ನಿಯಂತ್ರಣ ತಪ್ಪಿದ್ದೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆಯಾದರೂ ಖಚಿತ ಮಾಹಿತಿ ತಿಳಿದು ಬಂದಿಲ್ಲ ಎಂದು ಬಸ್‌ ಡಿಪೊ ವ್ಯವಸ್ಥಾಪಕರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೀದರ್‌ | ಶಿಕ್ಷಕಿ ‘ದಲಿತೆ’ ಎಂಬ ಕಾರಣಕ್ಕೆ ಅಂಗನವಾಡಿ ಬಹಿಷ್ಕರಿಸಿದ ʼಪ್ರಬಲ ಜಾತಿʼ ಪೋಷಕರು

ಸ್ಥಳಕ್ಕೆ ಸಂಡೂರು ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಸಂಕನೂರು, ತಹಶೀಲ್ದಾರ್ ಅನಿಲ್ ಕುಮಾರ್ ಜಿ., ತಾಲ್ಲೂಕು ಪಂಚಾಯಿತಿ ಇಒ‌ ಷಡಕ್ಷರಿ, ಶಾಸಕ ತುಕಾರಾಂ ಅವರ ಪತ್ನಿ ಅನ್ನಪೂರ್ಣ‌ ತುಕಾರಾಮ್ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...