ರಾಯಚೂರು | ಜಿಲ್ಲೆಯಲ್ಲಿ ಕೈಗಾರಿಕೋದ್ಯಮ ಬಲವರ್ಧನೆಗೆ ಸರ್ಕಾರ ಬದ್ಧ: ಸಚಿವ ಬೋಸರಾಜು

Date:

ರಾಯಚೂರು ಜಿಲ್ಲೆಯಲ್ಲಿರುವ ವಾಣಿಜ್ಯೋದ್ಯಮಿಗಳ ಸಮಸ್ಯೆಗಳ ಕುರಿತು ಸಂಪೂರ್ಣ ಮಾಹಿತಿಯಿದೆ. ರಸ್ತೆ, ಚರಂಡಿ, ಬೀದಿ ದೀಪ, ಉದ್ಯಮಕ್ಕೆ ಸಮರ್ಪಕ ನೀರು ಸರಬರಾಜು, ಹೆಚ್ಚುವರಿ ವಿದ್ಯುತ್ ಹಾಗೂ ತೆರಿಗೆ ವಿನಾಯತಿ ಸೇರಿದಂತೆ ಕೈಗಾರಿಕೆಯ ಅನೇಕ ಮೂಲಭೂತ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನ ಮಾಡುತ್ತೇವೆ. ಜಿಲ್ಲೆಯಲ್ಲಿ ಕೈಗಾರಿಕೋದ್ಯಮ ಬಲವರ್ಧನೆಗೆ ಸರ್ಕಾರ ಬದ್ಧವಾಗಿದೆ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎ.ನ್ಎಸ್ ಬೋಸರಾಜು ತಿಳಿಸಿದರು.

ರಾಯಚೂರಿನಲ್ಲಿ ವಾಣಿಜ್ಯೋದ್ಯಮಿಗಳೊಂದಿಗೆ ನಡೆದ ಮುಕ್ತ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ರಾಯಚೂರಿನ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಹಾಗೂ ಸರಕು ಸಾಗಾಣಿಕೆಗೆ ಅನುಕೂಲ ಮಾಡಿಕೊಡಲು ನಗರದ ಕಲ್ಮಲಾ ಬೈಪಾಸ್ ಮೂಲಕ ಹಾದುಹೋಗುವ ಮಂತ್ರಾಲಯ ಹೆದ್ದಾರಿಯನ್ನು ಅಗಲೀಕರಣ ಮಾಡಲು ಅನುಮೋದನೆ ನೀಡುವಂತೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಮಾಡಲಾಗಿದೆ” ಎಂದು ತಿಳಿಸಿದರು.

ಸಂವಾದ ಕಾರ್ಯಕ್ರಮದಲ್ಲಿ ಉದ್ಯಮಿ ಸಾವಿತ್ರಿ ಪುರುಷೋತ್ತಮ ಮತನಾಡಿ, “ರಾಯಚೂರು ಜಿಲ್ಲೆಗೆ ಹೊಂದಿಕೊಂಡಂತೆ ಕೃಷ್ಣಾ ಮತ್ತು ತುಂಗಭದ್ರ ಎರಡು ನದಿಗಳಿವೆ. ಆದರೆ, ನಮಗೆ ಸರಿಯಾದ ನೀರು ದೊರೆಯುತ್ತಿಲ್ಲ. ನಾವು ವೈಟಿಪಿಎಸ್ ಮತ್ತು ಆರ್‌ಟಿಪಿಎಸ್ ನಿಂದ ರಾಜ್ಯಕೆ 40% ವಿದ್ಯುತ್ ನೀಡುತ್ತಿದ್ದೇವೆ. ಆದರೆ, ನಮಗೆ ಸರಿಯಾಗಿ ವಿದ್ಯುತ್ ನೀಡುತ್ತಿಲ್ಲ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ರೈತ ಸಂಘ ಹಸಿರು ಸೇನೆ ಅದ್ಯಕ್ಷರಾದ ಚಾಮರಸ ಮಾಲೀಪಾಟೀಲ್ ಮಾತನಾಡಿ, “ಎಪಿಎಂಸಿ ಕಾಯ್ದೆಯ ಕೆಲ ತಿದ್ದುಪಡಿಗಳನ್ನು ಹಿಂತೆಗೆದುಕೊಳ್ಳಲು ಸರ್ಕಾರ ಗಂಭಿರವಾಗಿ ಚರ್ಚಿಸಿ, ಕ್ರಮ ಕೈಗೊಳ್ಳಬೇಕು. ರೈತರ ಒತ್ತಾಯದ ಮೇರೆಗೆ ಎಲ್ಲರಿಗೂ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಬೇಕು” ಎಂದರು.

“ರೈತರು ಹತ್ತಿ, ಮೆಣಸಿನಕಾಯಿ, ತೊಗರಿ, ಭತ್ತ ಹಾಗೂ ಇತ್ತಿತರೆ ಬೆಳೆಗಳನ್ನು ಬೆಳೆದರೆ ಮಾತ್ರವೇ ಕೈಗಾರಿಕೆ ಉದ್ಯಮಗಳು ಉಳಿಯಲು ಸಾಧ್ಯ. ಹಾಗಾಗಿ, ರೈತರ ಸಂರಕ್ಷಣೆಗೆ ಸರ್ಕಾರದ ಜೊತೆ ಕೈಗಾರಿಕೋದ್ಯಮಿಗಳು ಕೆಲಸ ಮಾಡಬೇಕು” ಎಂದು ತಿಳಿಸಿದರು.

ಲಕ್ಷ್ಮೀ ರಡ್ಡಿ ಮಾತನಾಡಿ, “ಗಂಜ್ ವೃತ್ತದಿಂದ ಶಕ್ತಿನಗರದವರೆಗೆ ಭಾರಿ ಗಾತ್ರದ ವಾಹನಗಳು ಸಂಚರಿಸುತ್ತವೆ. ಹೀಗಾಗಿ, ರಸ್ತೆಗೆ ಡಿವೈಡರ್ ನಿರ್ಮಾಣ ಮಾಡಬೇಕು. ಇಂಡಸ್ಟ್ರೀಯಲ್ ಬಡವಾಣೆಗಳಲ್ಲಿ ಪ್ರತಿದಿನ ಅನೇಕ ಬೆಲೆ ಬಾಳುವ ವಸ್ತುಗಳು ಕಳ್ಳತನವಾಗುತ್ತಿವೆ. ಇದನ್ನು ತಡೆಗಟ್ಟಲು ಬಡವಾಣೆಯಲ್ಲಿ ಪ್ರತ್ಯೇಕ ಪೋಲೀಸ್ ಠಾಣೆ ನಿರ್ಮಿಸಬೇಕು. ರಾಯಚೂರಿನಲ್ಲಿ ಮೇಗಾ ಟೆಕ್ಸಟೈಲ್ ಪಾರ್ಕ್ ನಿರ್ಮಾಣಕ್ಕೆ 1,000 ಎಕರೆ ಜಾಗ ಮಾಂಜೂರು ಮಾಡಬೇಕು. ವಿವಿಧ ಇಂಡಸ್ರ‍್ಟೀಗಳಿಗೆ ನೀರಿನ ತೊಂದರೆಯಾಗುತ್ತಿದೆ ಸಮರ್ಪಕವಾಗಿ ನೀರು ಸರಬರಾಜು ಮಾಡಬೇಕಾಗಿದೆ” ಎಂದು ಒತ್ಥಾಯಿಸಿದರು.

ಸಭೆಯಲ್ಲಿ ವಾಣಿಜ್ಯೋದ್ಯಮಿ ವಿಷ್ಣುಕಾಂತ ಬುತುಡಾ, ರಾಮಚಂದ್ರ ಪ್ರಭು, ಶ್ರೀನಿವಾಸ್ ರಡ್ಡಿ, ಕಾಂಗ್ರೆಸ್ ನ ಹಿರಿಯರಾದ ಕೆ ಶಾಂತಪ್ಪ, ಜಯಣ್ಣ, ರುದ್ರಪ್ಪ ಅಂಗಡಿ, ಜಿ ಶಿವಮೂರ್ತಿ, ಬಸವರಾಜ್ ರಡ್ಡಿ, ಆಂಜನೇಯ್ಯ, ಸೇರಿದಂತೆ ಹಲವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...