ಕುಕ್ಕೆ ಸುಬ್ರಹ್ಮಣ್ಯ | ನಿಧಿಗಾಗಿ ರಸ್ತೆಯಲ್ಲಿ ಗುಂಡಿ ತೋಡಿದೆ ಸರ್ಕಾರ; ‘ರಸ್ತೆ ಗುಂಡಿ’ ಬಗ್ಗೆ ಗಮನ ಸೆಳೆದ ವಿಶಿಷ್ಟ ಬ್ಯಾನರ್

Date:

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ನಗರಗಳು ಮತ್ತು ಪ್ರಮುಖ ರಸ್ತೆಗಳಲ್ಲಿ ರಸ್ತೆ ಗುಂಡಿಗಳದ್ದೇ ಹಾವಳಿ ಹೆಚ್ಚಾಗಿದೆ. ಗುಂಡಿಗಳಿಲ್ಲದ ರಸ್ತೆಗಳಿಲ್ಲ ಎಂಬಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆ ಗುಂಡಿಗಳ ವಿರುದ್ಧ ಹಲವರು ನಾನಾ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಇದೀಗ, ರಸ್ತೆಯೊಂದರಲ್ಲಿ, ‘ಎಚ್ಚರಿಕೆ… ನಿಧಿ ಹುಡುಕಲು ರಸ್ತೆಯಲ್ಲಿ ಗುಂಡಿ ತೋಡಿದೆ ಸರ್ಕಾರ’ ಎಂಬ ಬರಹವುಳ್ಳ ಬ್ಯಾನರ್‌ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಮಣ್ಯ ಮತ್ತು ಕೈಕಂಬದ ನಡುವಿನ ರಸ್ತೆಯಲ್ಲಿ ರಸ್ತೆಗುಂಡಿಗಳೇ ಹೆಚ್ಚಾಗಿದ್ದು, ವಾಹನ ಸವಾರರು ವಾಹನ ಚಲಾಯಿಸಲು ಹರಸಾಹಸ ಪಡಬೇಕಾದ ಪರಿಸ್ಥಿತಿ ಇದೆ. ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಹಲವು ಬಾರಿ ಒತ್ತಾಯಿಸಿದರೂ ಯಾವುದೇ ಪ್ರಯೋಜವಾಗಿಲ್ಲ ಎಂಬ ಆರೋಪಗಳೂ ಇವೆ.

ಈ ಹಿನ್ನೆಲೆಯಲ್ಲಿ, ಬೇಸತ್ತ ಸ್ಥಳೀಯರು, “ಎಚ್ಚರಿಕೆಯ ಫಲಕ; ಯಾರೋ ಮಾಂತ್ರಿಕರು ಕೈಕಂಬದಿಂದ-ಕುಕ್ಕೆ ಸುಬ್ರಮಣ್ಯವರೆಗಿನ ರಸ್ತೆಯಲ್ಲಿ ನಿಧಿ ಇದೆ ಎಂದು ಹೇಳಿದ ಕಾರಣ ಎಚ್ಚೆತ್ತ ರಾಜ್ಯ ಸರ್ಕಾರ ಈ ರಸ್ತೆಯಲ್ಲಿ ನಿಧಿಯನ್ನು ಹುಡುಕಿಸುವ ಕಾರಣದಿಂದ ಅಲ್ಲಲ್ಲಿ ರಸ್ತೆ ಮಧ್ಯೆಯೇ ದೊಡ್ಡ ಹೊಂಡಗಳನ್ನು ತೋಡಿಸಿ ಹಾಗೆಯೇ ಬಿಟ್ಟಿದ್ದಾರೆ, ಹಾಗಾಗಿ ನಿಧಾನವಾಗಿ ಚಲಿಸಿ” ಎಂದು ಬರೆದಿರುವ ಬ್ಯಾನರ್‌ವೊಂದನ್ನು ರಸ್ತೆ ಬದಿಯಲ್ಲಿ ಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆ ಬ್ಯಾನರ್‌ನ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಲವರು ಪೋಸ್ಟ್‌ ಕಮೆಂಟ್‌ ಮಾಡಿದ್ದು, ʼನಿಧಿ ಇದ್ದರೂ ಇರಬಹುದುʼ ಎಂದು ಗೇಲಿ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...