ರಾಯಚೂರು | ಖಾಸಗಿ ಕ್ಷಣಗಳನ್ನು ವಿಡಿಯೋ ಮಾಡಿಟ್ಟುಕೊಂಡಿದ್ದ ವಿಕೃತ ಸರ್ಕಾರಿ ಅಧಿಕಾರಿ; ಪತ್ನಿಗೆ ಬ್ಲ್ಯಾಕ್‌ಮೇಲ್

Date:

ತಮ್ಮ ಖಾಸಗಿ ಸಮಯವನ್ನು ವಿಡಿಯೋ ಮಾಡಿಟ್ಟುಕೊಂಡಿದ್ದ ಸರ್ಕಾರಿ ಅಧಿಕಾರಿಯೊಬ್ಬ ತನ್ನ ಪತ್ನಿಗೆ ನಿರಂತರವಾಗಿ ಬ್ಲ್ಯಾಕ್‌ಮೇಲ್ ಮಾಡಿರುವ ಪ್ರಕರಣ ರಾಯಚೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಜಿಲ್ಲೆಯ ಮಾನ್ವಿ ಪೊಲೀಸ್‌ ಠಾಣೆಯಲ್ಲಿ ಮಹಿಳೆಯೊಬ್ಬರು ಸರ್ಕಾರಿ ಅಧಿಕಾರಿಯಾಗಿರುವ ತನ್ನ ಪತಿ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.

ಇಂಧನ ಇಲಾಖೆಯಲ್ಲಿ ಮೇಲ್ವಿಚಾರಕ ಅಧಿಕಾರಿ ಕಾರ್ಯ ನಿರ್ವಹಿಸುತ್ತಿರುವ ಗುರುರಾಜ್ ಎಂಬಾತನ ವಿರುದ್ಧ ಆತನ ಪತ್ನಿ ದೂರು ದಾಖಲಿಸಿದ್ದಾರೆ. “ಆತ ನನಗೆ ಗೊತ್ತಿಲ್ಲದಂತೆ ನಮ್ಮಿಬ್ಬರ ಖಾಸಗಿ ಕ್ಷಣಗಳನ್ನು ವಿಡಿಯೋ ಮಾಡಿಕೊಟ್ಟುಕೊಂಡಿದ್ದಾನೆ. ತನ್ನ ವಿರುದ್ಧ ಮಾತನಾಡಿದರೆ, ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾನೆ” ಎಂದು ಮಹಿಳೆ ದೂರಿನಲ್ಲಿ ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಿಳೆಗೆ ಆರೋಪಿ ಗುರುರಾಜ್ ಮ್ಯಾಟ್ರಿಮೋನಿಯಲ್ಲಿ ಪರಿಚಿತನಾಗಿದ್ದ. ಸಭ್ಯನಂತೆ ನಡೆದುಕೊಳ್ಳುತ್ತಿದ್ದ. ಆತನನ್ನು ನಂಬಿದ ಮಹಿಳೆ ಇತ್ತೀಚೆಗೆ ಆತನೊಂದಿಗೆ ವಿವಾಹವಾಗಿದ್ದರು. ಆದರೆ, ವಿವಾಹವಾದ ಬಳಿಕ ಆತನ ವಿಕೃತಿ ಬಗ್ಗೆ ಮಹಿಳೆಗೆ ಗೊತ್ತಾಗಿದೆ. ಆತ ತಮ್ಮ ಖಾಸಗಿ ಕ್ಷಣಗಳ ವಿಡಿಯೋವನ್ನು ತನ್ನ ಕಾರು ಚಾಲಕನೂ ಸೇರಿದಂತೆ ಹಲವರಿಗೆ ತೋರಿಸಿದ್ದಾನೆ ಎಂದೂ ಮಹಿಳೆ ಆರೋಪಿಸಿದ್ದಾರೆ.

ಮಾತ್ರವಲ್ಲದೆ, ಹಲವಾರು ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಯುವತಿಯರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಸಂದೇಶಗಳನ್ನು ಕಳಿಸಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...