ಚಿಕ್ಕಮಗಳೂರು | ಶೂನ್ಯ ಬಡ್ಡಿ ದರದಲ್ಲಿ ರೈತರಿಗೆ ಸಾಲ; ಪ್ರಣಾಳಿಕೆ ಭರವಸೆ ಮರೆತ ಸರ್ಕಾರ

Date:

  • ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ರೈತ ಸಂಘದ ಮುಖಂಡರ ಆರೋಪ
  • ಸಚಿವರು 0% ಬಡ್ಡಿ ದರದಲ್ಲಿ 5 ಲಕ್ಷ ರೂ. ಸಾಲ ನೀಡುವುದಾಗಿ ಹೆಳಿದ್ದಾರೆ

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ರಾಜ್ಯದ ರೈತರಿಗೆ ಸಹಕಾರ ಸಂಘದಲ್ಲಿ 10 ಲಕ್ಷ ರೂ.ವರೆಗೂ ಶೂನ್ಯ ಬಡ್ಡಿದರದಲ್ಲಿ ಸಾಲ ಕೊಡುವುದಾಗಿ ತನ್ನ ಪ್ರಣಾಳಿಕೆಯಲ್ಲಿ ತಿಳಿಸಿತ್ತು. ಆದರೆ, ಈಗ ಭರವಸೆ ಈಡೇರಿಸುವ ಯೋಚನೆ ಮಾಡುತ್ತಿಲ್ಲ ಎಂದು ರೈತ ಸಂಘದ ಮೂಡಿಗೆರೆ ತಾಲೂಕು ಮುಖಂಡ ಡಿ ಎಸ್ ರಮೇಶ್ ದಾರದಹಳ್ಳಿ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಕಾಂಗ್ರೆಸ್‌ ನೇತೃತ್ವದ ಸರ್ಕಾರ ಅಧಿಕಾರಕ್ಕೂ ಮೊದಲು ತನ್ನ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯನ್ನು ಮರೆತಂತೆ ತೋರುತ್ತಿದೆ. ಇತ್ತೀಚೆಗೆ ಸಹಕಾರ ಸಚಿವರು ನೀಡಿರುವ ಪತ್ರಿಕಾ ಹೇಳಿಕೆಯಲ್ಲಿ 5 ಲಕ್ಷ ರೂ. ವರೆಗೂ 0% ಬಡ್ಡಿ ದರದಲ್ಲಿ ಸಾಲ ಕೊಡುವ ಹೇಳಿಕೆ ನೀಡಿ ರೈತರಿಗೆ ಸಾಲ ಕೊಡುವ ಸಮಯವನ್ನು ತಿಳಿಸಿಲ್ಲ ಮತ್ತು ಸಾಲ ಕೊಡುವುದಕ್ಕೂ ಷರತ್ತು ಹಾಕಿದ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಅಸಮಧಾನ ವ್ಯಕ್ತಪಡಿಸಿದರು.

ಕಾಂಗ್ರೇಸ್ 2023ರ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಸಹಕಾರಿ ಸಂಘಗಳಲ್ಲಿ ರೈತರಿಗೆ ಬಡ್ಡಿರಹಿತ ಸಾಲದ ಮೊತ್ತವನ್ನು ಈಗಿನ ರೂ. 3 ಲಕ್ಷದಿಂದ ರೂ. 10 ಲಕ್ಷಕ್ಕೆ ಏರಿಸುವ ಮತ್ತು ಶೇಕಡಾ 3 ರ ಬಡ್ಡಿಯಲ್ಲಿನ ಸಾಲದ ಮೊತ್ತವನ್ನು ರೂ. 15 ಲಕ್ಷಕ್ಕೆ ಏರಿಸುವುದಾಗಿ ಭರವಸೆ ನೀಡಿತ್ತು. ಆದರೆ ಈಗ ತನ್ನ ಭರವಸೆಯನ್ನು ಸರ್ಕಾರ ಮರೆತಿದೆ ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿಂದಿನ ಸರ್ಕಾರ 2023ರ ಮಾರ್ಚ್‌ 08ರಲ್ಲಿ ಮಂಡಿಸಿದ್ದ ಬಜೆಟ್‍ನಲ್ಲಿ 5 ಲಕ್ಷದವರೆಗೂ ಸಹಕಾರ ಸಂಘದಲ್ಲಿ 0% ಬಡ್ಡಿ ದರದಲ್ಲಿ ಸಾಲ ನೀಡುವುದಾಗಿ ಘೋಷಣೆ ಮಾಡಿದ್ದರು. ರೈತರಿಗೆ ಸಾಲ ನೀಡಲು ಸಹಕಾರ ಸಂಘಕ್ಕೆ ಇಲ್ಲಿಯವರೆಗೂ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ. ರಾಜ್ಯದ ರೈತರಿಗೆ ಈ ಮುಂಗಾರು ಹಂಗಾಮಿನಲ್ಲಿ ಸಾಲ ನೀಡಬೇಕಾಗಿದೆ. ರೈತರಿಗೆ ಕೃಷಿ ಅಭಿವೃದ್ಧಿಗೆ ಸಾಲ ನೀಡಿದರೆ ದೇಶದಲ್ಲಿ ಆಹಾರ ಭದ್ರತೆ ಆಗಲಿದೆ ಮತ್ತು ದೇಶದ ಅಭಿವೃದ್ಧಿಗೆ ನೆರವಾಗಲಿದೆ. ಆದರೆ, ಎಲ್ಲ ಸರ್ಕಾರಗಳು ರೈತರಿಗೆ ಸಾಲದ ವಿಚಾರವನ್ನು ಕೇವಲ ರಾಜಕಾರಣಕ್ಕೆ ಬಳಸಿಕೊಳ್ಳುತ್ತೇವೆ ಎಂದು ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ಪಡಿತರದಲ್ಲಿ ಅಕ್ಕಿ ಜೊತೆಗೆ ರಾಗಿ, ಜೋಳ ನೀಡಲಿ: ರೈತ ಮುಖಂಡ ಬಡಗಲಪುರ ನಾಗೇಂದ್ರ ಆಗ್ರಹ

ಹಿಂದಿನ ಸರ್ಕಾರ ಕೂಡ ಸಹಕಾರ ಸಂಘದಲ್ಲಿ ರೈತರಿಗೆ ಸಕಾಲದಲ್ಲಿ ಸಾಲ ನೀಡಿಲ್ಲ. ಕಾರಣ ಸಹಕಾರ ಸಂಘಕ್ಕೆ ಸಾಲ ಕೊಡುವುದಕ್ಕೆ ಡಿ.ಸಿ.ಸಿ. ಬ್ಯಾಂಕುಗಳು ಮಧ್ಯಸ್ಥಿಕೆ ವಹಿಸುತ್ತಿವೆ, ಆದರೆ ಡಿ.ಸಿ.ಸಿ. ಬ್ಯಾಂಕ್‍ಗಳು ರೈತರ ಸಾಲ ನೀಡುವ ವಿಚಾರದಲ್ಲಿ ದಲ್ಲಾಳಿಗಳ ರೀತಿಯಲ್ಲಿ ಸಾಲ ಕೊಡುವುದನ್ನು ವಿಳಂಬ ಮಾಡುತ್ತಿವೆ. ಡಿ.ಸಿ.ಸಿ.ಬ್ಯಾಂಕ್‍ಗಳಲ್ಲಿ ರಾಜಕೀಯ ಒತ್ತಡ ಗುಂಪುಗಾರಿಕೆಯಿಂದ ಗೊಂದಲ ಉಂಟಾಗಿದೆ. ಆದ್ದರಿಂದ ಈಗಿನ ಕಾಂಗ್ರೆಸ್‌ ಸರ್ಕಾರ ಕೂಡಲೇ ಸಹಕಾರ ಸಂಘದಲ್ಲಿ ರೈತರಿಗೆ ಕೊಡುವ ಬೆಳೆ ಸಾಲವನ್ನು ಚುನಾವಣಾ ಪ್ರಣಾಳಿಕೆ ಭರವಸೆಯಂತೆ 10 ಲಕ್ಷದವರೆಗಿನ 0% ಸಾಲವನ್ನು ಕೊಡುವ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ರೈತ ಮುಖಂಡ ಪ್ರಕಾಶ್ ಸತ್ತಿಗನಹಳ್ಳಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...