ರೈತ ವಿರೋಧಿ ಕಾಯ್ದೆ ವಿಚಾರದಲ್ಲಿ ಸರ್ಕಾರ ಖಚಿತ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

  • ಶಾಸಕರಾದ ಬಿ ಆರ್‌ ಪಾಟೀಲ್, ದರ್ಶನ್ ಪುಟ್ಟಣ್ಣಯ್ಯ ಜೊತೆ ರೈತ ನಿಯೋಗ ಭೇಟಿ
  • ರೈತರ ಸಮಸ್ಯೆಗಳ ಬಗ್ಗೆ ವಿಸ್ತೃತ ಚರ್ಚೆ ಮಾಡಲು ಪ್ರತ್ಯೇಕ ಸಭೆ: ಸಿಎಂ ಭರವಸೆ

ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಸರ್ಕಾರ ಖಚಿತ ತೀರ್ಮಾನ ತೆಗೆದುಕೊಳ್ಳಲಿದೆ. ರೈತರ ಹಿತದೃಷ್ಟಿಯಿಂದ ಸರ್ಕಾರ ನಿರ್ಧಾರಗಳನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಶಾಸಕರಾದ ಬಿ ಆರ್‌ ಪಾಟೀಲ್ ಮತ್ತು ದರ್ಶನ್ ಪುಟ್ಟಣ್ಣಯ್ಯ ಅವರ ನೇತೃತ್ವದಲ್ಲಿ ರೈತ ಮುಖಂಡರ ನಿಯೋಗ ಸೋಮವಾರ ಮುಖ್ಯಮಂತ್ರಿ ಅವರನ್ನು ಭೇಟಿಯಾದ ಸಂದರ್ಭದಲ್ಲಿ ಅವರು ಮಾತನಾಡಿದರು.

“ಭೂ ಸುಧಾರಣಾ ಕಾಯ್ದೆ ಬಗ್ಗೆ ಚರ್ಚೆ ಆಗಿದ್ದು, ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಸ್ಪಷ್ಟ ತೀರ್ಮಾನಕ್ಕೆ ಬರಲಾಗುವುದು. ಎಪಿಎಂಸಿ ಕಾಯ್ದೆ ತಿದ್ದುಪಡಿ ಬಗ್ಗೆ ಇಂದು ಸದನದಲ್ಲಿ ಚರ್ಚೆ ನಡೆದಿದೆ. ರೈತರ ಸಮಸ್ಯೆಗಳ ಬಗ್ಗೆ ವಿಸ್ತೃತ ಚರ್ಚೆ ಮಾಡಲು ಪ್ರತ್ಯೇಕ ಸಭೆ ನಡೆಸಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಜೆಟ್‌ನಿಂದ ಹೊರಗುಳಿದಿರುವ ಕೆಲವು ವಿಚಾರಗಳ ಬಗ್ಗೆ ಚರ್ಚಿಸಬೇಕಿದೆ. ಸರ್ಕಾರ ಮಾರ್ಪಾಡು ಮಾಡಿರುವ ಎಪಿಎಂಸಿ ಕಾಯ್ದೆಯ ಬಗ್ಗೆಯೂ ಚರ್ಚಿಸಬೇಕಿದೆ” ಎಂದು ಶಾಸಕ ಬಿ ಆರ್ ಪಾಟೀಲ್ ತಿಳಿಸಿದರು.

ರೈತರಿಂದ ಸಲಹೆ

ಹೊಸ ಸರ್ಕಾರ 5 ಗ್ಯಾರಂಟಿಗಳನ್ನು ಜಾರಿಗೆ ತಂದಿರುವುದು ಎಪಿಎಂಸಿ ಕಾಯ್ದೆ ಮಾರ್ಪಾಡು ಮಾಡಿರುವುದು ಸ್ವಾಗತಾರ್ಹ. ಕೆಲವು ವಿಚಾರಗಳ ಬಗ್ಗೆ ಚರ್ಚೆ ಅಗತ್ಯವಿದೆ. ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯನ್ನು ವಾಪಸ್ಸು ಪಡೆಯಬೇಕು. ಆ ತಿದ್ದುಪಡಿ ಉಳುವವರ ಕೇಂದ್ರಿತವಾಗಿರಬೇಕು. ಜಾನುವಾರು ಹತ್ಯೆ ನಿಷೇಧ ಕೂಡ ವಾಪಸ್ ಪಡೆಯಬೇಕು. ಹಿಂದೆ ಕೃಷಿ ಬೆಲೆ ಆಯೋಗವನ್ನು ಘೋಷಣೆ ಮಾಡಲಾಗಿತ್ತು. ಅದಕ್ಕೆ ಶಾಸನಾತ್ಮಕ ರೂಪ ಕೊಟ್ಟು, ಆವರ್ತ ನಿಧಿ ನೀಡಬೇಕು. ಕೇಂದ್ರ ಸರ್ಕಾರ ಪಡಿತರ ವ್ಯವಸ್ಥೆಗೆ ಅಕ್ಕಿ ಕೊಡದೆ ರಾಜಕೀಯ ಮಾಡಿರುವುದನ್ನು ವಿರೋಧಿಸುತ್ತೇವೆ. ಪೌಷ್ಟಿಕ ಆಹಾರ ನೀಡಲು ಪಡಿತರ ವ್ಯವಸ್ಥೆಗೆ ರೈತರೆ ಆಹಾರ ಧಾನ್ಯ ಕೊಡುವ ವ್ಯವಸ್ಥೆ ಮಾಡಬಹುದು. ಆಗ ಸಮಸ್ಯೆಗಳು ಬಗೆಹರಿಯುತ್ತದೆ ಎಂದು ರೈತರು ಸಲಹೆ ನೀಡಿದರು.

ಕೃಷಿ ಸಚಿವ ಚಲುವರಾಯಸ್ವಾಮಿ, ತೋಟಗಾರಿಕಾ ಸಚಿವ ಎಸ್‌ ಎಸ್‌ ಮಲ್ಲಿಕಾರ್ಜುನ್ ಹಾಗೂ ರೈತ ಮುಖಂಡರು ಸಭೆಯಲ್ಲಿ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...