ಮಂಗಳೂರು | ದ್ವೇಷ ಭಾಷಣಕಾರರಿಗೆ ಸರ್ಕಾರ ಕಡಿವಾಣ ಹಾಕದ ಪರಿಣಾಮ ಅಮಾಯಕನ ಕೊಲೆ: ಎಸ್‌ಡಿಪಿಐ ಮುಖಂಡ ಜಲೀಲ್ ಕೃಷ್ಣಾಪುರ

Date:

ಕರಾವಳಿ ಜಿಲ್ಲೆಗಳಲ್ಲಿ ಸಂಘಪರಿವಾರದ ದ್ವೇಷ ಭಾಷಣಕಾರರಿಗೆ ಸರ್ಕಾರ ಕಡಿವಾಣ ಹಾಕದ ಪರಿಣಾಮ ಇಂದು ಅಮಾಯಕ ಯುವಕ ರಹೀಂ ಅವರ ಕೊಲೆಯಾಗಿದೆ. ಇದಕ್ಕೆ ಸರ್ಕಾರವೇ ನೇರವಾದ ಹೊಣೆ ಎಂದು ಎಸ್‌ಡಿಪಿಐ ಮಂಗಳೂರು ನಗರ ಜಿಲ್ಲಾಧ್ಯಕ್ಷ ಜಲೀಲ್ ಕೃಷ್ಣಾಪುರ ಆಕ್ರೋಶ ಹೊರಹಾಕಿದ್ದಾರೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಮಂಗಳೂರಿನ ಕೊಳತ್ತಮೊಗರು ಬಳಿಯ ಸಂಘಪರಿವಾರದ ಭಯೋತ್ಪಾದಕರಿಂದ ನಡೆದ ದಾಳಿಯಲ್ಲಿ ಅಮಾಯಕ ಮುಸ್ಲಿಂ ಯುವಕರಾದ ಅಬ್ದುಲ್ ರಹಿಮಾನ್ ಸಾವನ್ನಪ್ಪಿದ್ದಾರೆ ಮತ್ತು ಕಲಂದರ್ ಶಾಪಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ದುರ್ಘಟನೆಗೆ ಸಂಘಪರಿವಾರದ ಕೆಲವು ವ್ಯಕ್ತಿಗಳಾದ ಭರತ್ ಕುಮ್ಡೇಲು, ಶಿವಾನಂದ ಮೆಂಡನ್ ಮತ್ತು ಶ್ರೀಕಾಂತ್ ಶೆಟ್ಟಿಯವರ ಪ್ರಚೋದನಾತ್ಮಕ ಹೇಳಿಕೆಗಳು ನೇರ ಕಾರಣವಾಗಿವೆ. ಈ ವ್ಯಕ್ತಿಗಳ ಭಾಷಣಗಳು ಸಮಾಜದಲ್ಲಿ ದ್ವೇಷ ಮತ್ತು ಹಿಂಸೆಯನ್ನು ಉತ್ತೇಜಿಸಿದ್ದು, ಸರಕಾರ ಈ ಸಂಘಿಗಳ ವಿರುದ್ಧ ತಕ್ಷಣ ಕಾನೂನು ಕ್ರಮ ಕೈಗೊಂಡಿದ್ದರೆ ಈ ದುರಂತವನ್ನು ತಡೆಗಟ್ಟಬಹುದಿತ್ತು” ಎಂದು ತಿಳಿಸಿದ್ದಾರೆ.

ಈ ಘಟನೆಗೆ ರಾಜ್ಯ ಸರಕಾರದ ವೈಫಲ್ಯವೇ ಮೂಲ ಕಾರಣವಾಗಿದೆ. ರೌಡಿಶೀಟರ್ ಹತ್ಯೆಯ ನಂತರ ಬಂದ್ ಕರೆ ನೀಡಿದ ಶರಣ್ ಪಂಪ್ವೆಲ್ ಮೇಲೆ ಯಾವುದೇ ಕ್ರಮ ಕೈಗೊಳ್ಳದೇ ಇರುವುದು ಗೃಹ ಕೂಡಾ ಕಾರಣವಾಗಿದೆ ಸಚಿವ ಜಿ. ಪರಮೇಶ್ವರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಈ ಘಟನೆಯ ಸಂಪೂರ್ಣ ಹೊಣೆಯನ್ನು ಹೊತ್ತುಕೊಳ್ಳಬೇಕು. ಹಾಗೂ ತಕ್ಷಣ ಮಂಗಳೂರಿಗೆ ಭೇಟಿ ನೀಡಿ, ದಾಳಿಯ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಮುಂದಾಗಬೇಕು. ಜೊತೆಗೆ, ಈ ರೀತಿಯ ಘಟನೆಗಳು ಮರುಕಳಿಸದಂತೆ ತಡೆಗಟ್ಟಲು ಕಟ್ಟುನಿಟ್ಟಾದ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಘಪರಿವಾರದಿಂದ ಮುಸ್ಲಿಂ ಸಮುದಾಯದ ವಿರುದ್ಧ ಸತತವಾಗಿ ನಡೆಯುತ್ತಿರುವ ದಾಳಿಗಳು ಮತ್ತು ದ್ವೇಷದ ಭಾಷಣಗಳು ಶಾಂತಿಯುತ ಸಮಾಜಕ್ಕೆ ಧಕ್ಕೆ ತರುತ್ತಿವೆ. ಸರಕಾರ ಈ ಭಯೋತ್ಪಾದಕ ಗುಂಪುಗಳನ್ನು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ನಮ್ಮ ಪಕ್ಷವು ಈ ಘಟನೆಯನ್ನು ತೀವ್ರವಾಗಿ ಖಂಡಿಸುತ್ತದೆ ಮತ್ತು ರಾಜ್ಯ ಸರಕಾರವು ತನ್ನ ಜವಾಬ್ದಾರಿಯನ್ನು ನಿರ್ವಹಿಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯನ್ನು ಖಾತ್ರಿಪಡಿಸಬೇಕೆಂದು ಒತ್ತಾಯಿಸುತ್ತೇವೆ ಎಂದು ಜಲೀಲ್ ಕೃಷ್ಣಾಪುರ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಮಂಗಳೂರು | ಯುವಕ ರಹಿಮಾನ್ ಕೊಲೆ ಪ್ರಕರಣ: ಸ್ಥಳೀಯ ಇಬ್ಬರು ಸೇರಿ 15 ಮಂದಿಯ ವಿರುದ್ಧ ಎಫ್‌ಐಆರ್

ನಾವು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಶಾಂತಿ ಕಾಪಾಡಿಕೊಳ್ಳಲು ಮನವಿ ಮಾಡುತ್ತೇವೆ ಮತ್ತು ಈ ರೀತಿಯ ದ್ವೇಷದ ರಾಜಕೀಯಕ್ಕೆ ಒಗ್ಗದಂತೆ ಕರೆ ನೀಡುತ್ತೇವೆ. ಸರಕಾರ ತಕ್ಷಣ ಕ್ರಮ ಕೈಗೊಂಡು ನ್ಯಾಯ ಒದಗಿಸದಿದ್ದರೆ, ಎಸ್‌ಡಿಪಿಐ ಕಾನೂನು ಬದ್ಧವಾಗಿ ಜನಾಂದೋಲನವನ್ನು ತೀವ್ರಗೊಳಿಸಲಿದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...