ಬೀದರ್‌ | ಸರ್ಕಾರದ ಭರವಸೆ : ಕಾರಂಜಾ ಸಂತ್ರಸ್ತರ 926 ದಿನಗಳ ಹೋರಾಟ ಅಂತ್ಯ

Date:

ಬೀದರ್‌ ಜಿಲ್ಲೆಯ ಜೀವನಾಡಿ ಕಾರಂಜಾ ಜಲಾಶಯ ಯೋಜನೆಯಲ್ಲಿ ಭೂಮಿ ಕಳೆದುಕೊಂಡು ವೈಜ್ಞಾನಿಕ ಪರಿಹಾರಕ್ಕೆ ಒತ್ತಾಯಿಸಿ ಕಳೆದ 926 ದಿನಗಳಿಂದ ನಡೆಯುತ್ತಿದ್ದ ಕಾರಂಜಾ ಸಂತ್ರಸ್ತರ ಅಹೋರಾತ್ರಿ ಧರಣಿ ಶನಿವಾರ ಅಂತ್ಯಗೊಂಡಿತು.

ನಗರದ ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಲಯ ಮುಂಭಾಗದಲ್ಲಿ ಕಾರಂಜಾ ಸಂತ್ರಸ್ತರು ನಡೆಸುತ್ತಿದ್ದ ಧರಣಿ ಸ್ಥಳದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರ ಸಮ್ಮುಖದಲ್ಲಿ ಪ್ರತಿಭಟನಾ ನಿರತ ಸಂತ್ರಸ್ತರು ಕಬ್ಬಿನ ಹಾಲು ಕುಡಿದು ಧರಣಿ ಅಂತ್ಯಗೊಳಿಸಲಾಯಿತು.

ಕಾರಂಜಾ ನೀರಾವರಿ ಯೋಜನೆಯ ಅಡಿ ಮುಳುಗಡೆಗೊಂಡ ಸಂತ್ರಸ್ತರ ಸಮಸ್ಯೆಗಳ ಪರಿಹಾರಕ್ಕೆ ಶೀಘ್ರ ಕ್ರಮಕೈಗೊಳ್ಳುವ ನಿರ್ಧಾರಕ್ಕೆ ರಾಜ್ಯ ಸರ್ಕಾರ ಸಮ್ಮತಿಸಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರ ಭರವಸೆ ಮೇರೆಗೆ ಸಂತ್ರಸ್ತರು ಹೋರಾಟ ಹಿಂಪಡೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮಾತನಾಡಿ, ʼದೀರ್ಘಕಾಲದಿಂದ ನಡೆಯುತ್ತಿರುವ ಕಾರಂಜಾ ಮುಳುಗಡೆ ಸಂತ್ರಸ್ತರ ಹೋರಾಟಕ್ಕೆ ನ್ಯಾಯ ಒದಗಿಸಲು ಸರ್ಕಾರ ಬದ್ಧವಾಗಿದೆ. ಸಂತ್ರಸ್ತರ ಬೇಡಿಕೆಗಳನ್ನು ಸಂಪೂರ್ಣವಾಗಿ ಈಡೇರಿಸಲು ಸರ್ಕಾರದಿಂದ ಶೀಘ್ರದಲ್ಲಿ ತಾಂತ್ರಿಕ ಸಮಿತಿ ರಚಿಸಲಾಗುತ್ತಿದ್ದು, ಸಮಿತಿಯ ವರದಿ ಆಧರಿಸಿ ಸಂತ್ರಸ್ತರ ಬೇಡಿಕೆ ಈಡೇರಿಸಲಾಗುವುದುʼ ಎಂದು ಭರವಸೆ ನೀಡಿದರು.

ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ, ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಡಾ.ಲಕ್ಷ್ಮಣ ದಸ್ತಿ, ಹಿರಿಯ ಚಿಂತಕ ಆರ್.ಕೆ.ಹುಡುಗಿ ಅವರು ಮಾತನಾಡಿದರು.

https://www.facebook.com/share/v/15nYKziJmp/

ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಪಾಟೀಲ್‌ ಹೊಚಕನಳ್ಳಿ ಮಾತನಾಡಿ,ʼಕಾರಂಜಾ ಸಂತ್ರಸ್ತರ ಬೇಡಿಕೆ ಈಡೇರಿಕೆಗೆ ಸರ್ಕಾರ ಭರವಸೆ ನೀಡಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ನಿರ್ದೇಶನದ ಮೇರೆಗೆ ಕಾರಂಜಾ ಹೋರಾಟ ಸಮಿತಿಯ ಸರ್ವ ಸದಸ್ಯರ ಒಪ್ಪಿಗೆ ಪಡೆದು ಅಹೋರಾತ್ರಿ ಸತ್ಯಾಗ್ರಹ ಹಿಂಪಡೆಯುತ್ತಿದ್ದೇವೆʼ ಎಂದು ಪ್ರಕಟಿಸಿದರು.

ಈ ಸುದ್ದಿ ಓದಿದ್ದೀರಾ? ಕೇರಳ | ಬಾಲಕಿ ಮೇಲೆ 64 ಕಾಮುಕರಿಂದ ಲೈಂಗಿಕ ದೌರ್ಜನ್ಯ

ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಅರವಿಂದ ಕುಮಾರ ಅರಳಿ, ಬುಡಾ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ,‌ ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ಜಿಲ್ಲಾ ಪಂಚಾಯತ್‌ ಸಿಇಒ ಡಾ.ಗಿರೀಶ ಬದೋಲೆ, ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಬಸವರಾಜ ದೇಶಮುಖ, ಪ್ರೊ. ಬಸವರಾಜ ಕುಮ್ನೂರ ಹಾಗೂ ಮುಖಂಡರಾದ ಅಬ್ದುಲ್ ಮನ್ನಾನ್ ಶೇಠ ಸೇರಿದಂತೆ ಸಮಿತಿಯ ಪ್ರಮುಖರಾದ ವಿನಯ ಮಾಳಗೆ, ರೋಹನಕುಮಾರ, ಕೇದಾರನಾಥ ಪಾಟೀಲ್, ಮಹೇಶ ಮೂಲಗೆ, ಭೀಮರೆಡ್ಡಿ ಬೆಳ್ಳೂರೆ ಕಾರಂಜಾ ಸಂತ್ರಸ್ತರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...