ಕೋಲಾರ | ಕ್ಷೇತ್ರದ ಅಭಿವೃದ್ಧಿಗೆ ಸರಕಾರ ಬದ್ಧ : ಭೈರತಿ ಸುರೇಶ್

Date:

ಕೋಲಾರ ಕ್ಷೇತ್ರದ ಅಭಿವೃದ್ಧಿಗಾಗಿ ಈಗಾಗಲೇ ಸರಕಾರದಿಂದ 376 ಕೋಟಿ ‌ಅನುದಾನ ನೀಡಿದ್ದು, ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಸರಕಾರ ಅನುದಾನ ಬಿಡುಗಡೆಗೊಳಿಸಲು ಸಿದ್ಧ ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಸುರೇಶ್ ತಿಳಿಸಿದರು.

ತಾಲೂಕಿನ ನರಸಾಪುರ ಗ್ರಾಮದಲ್ಲಿ ಗುರುವಾರ ನಾಲ್ಕು ಪಥದ ರಸ್ತೆಗೆ 7 ಕೋಟಿ, ರಾಷ್ಟ್ರೀಯ ಹೆದ್ದಾರಿಯಿಂದ ಖಾಜಿಕಲ್ಲಹಳ್ಳಿ ಮಾರ್ಗದ ರಸ್ತೆಗೆ 5 ಕೋಟಿ ಹಾಗೂ ನರಸಾಪುರ ಸೊಸೈಟಿಯ ನೂತನ ಕಟ್ಟಡಕ್ಕೆ 1.5 ಕೋಟಿ ಸೇರಿದಂತೆ ಒಟ್ಟು 13.5 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಇಡೀ ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳ ಸರಮಾಲೆಯೇ ನಡೆಯುತ್ತಿದೆ. ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಅನುದಾನ ನೀಡಲು ಸರಕಾರದಲ್ಲಿ ಹಣವಿಲ್ಲ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ನಮ್ಮ ಸರಕಾರದ ಅಭಿವೃದ್ಧಿ ಜನರ ಕಣ್ಣಮುಂದಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
kotturu1

ಹಿಂದಿನ ಬಿಜೆಪಿ ಸರಕಾರದಲ್ಲಿ 40% ಕಮಿಷನ್ ನಿಂದ ಅಭಿವೃದ್ಧಿ ಶೂನ್ಯವಾಗಿತ್ತು. ನಮ್ಮ ಸರಕಾರವು ಯಾರಪ್ಪನ ಮನೆಯಿಂದ ಕೂಡ ಹಣ ತಂದಿಲ್ಲ. ಜನರ ದುಡ್ಡನ್ನೇ ಜನರಿಗೆ ಕೊಡುತ್ತಿದ್ದೇವೆ. ಜೆಡಿಎಸ್ ಮತ್ತು ಬಿಜೆಪಿ ಸರ್ಕಾರದಲ್ಲಿ ಅವರಿಗೆ ತಿನ್ನಲು ‌ಸಾಕಾಗಲಿಲ್ಲ, ಅದಕ್ಕೆ ಅಭಿವೃದ್ಧಿ ಶೂನ್ಯವಾಗಿತ್ತು. ನಾವು ರಾಜಕಾರಣವನ್ನು ಹೊಟ್ಟೆಪಾಡಿಗೆ, ವ್ಯಾಪಾರಕ್ಕೆ ಮಾಡಲು ಬಂದಿಲ್ಲ. ಜನರ ಸೇವೆ ಮಾಡಲು ಬಂದಿದ್ದು, ಅಭಿವೃದ್ಧಿಯೇ ನಮ್ಮ ಗುರಿ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ನುಡಿದಂತೆ ನಡೆದಿದ್ದೇವೆ. ಬಡವರಿಗೆ ಸಾಮಾನ್ಯ ಜನರ ಏಳಿಗೆಗಾಗಿ ಐದು ಗ್ಯಾರಂಟಿಗಳನ್ನು ಕೊಡುತ್ತಿದ್ದೇವೆ. ಚುನಾವಣೆ ಸಂದರ್ಭದಲ್ಲಿ ವಿರೋಧ ಪಕ್ಷದವರು ಹೇಳಿದ ಸುಳ್ಳಿನ ಸರಪಳಿಯನ್ನು ತುಂಡರಿಸಿದ್ದೇವೆ. ಜನ 136 ಸ್ಥಾನ ಕೊಟ್ಟು ಆಶೀರ್ವಾದ ಮಾಡಿದ್ದಾರೆ. ಸರ್ಕಾರವು ಬಿದ್ದು ಹೋಗುತ್ತದೆ ಎಂದು ಬಿಜೆಪಿ ಸುಳ್ಳು ಹೇಳುತ್ತಿದ್ದಾರೆ. ಜನಕ್ಕೆ ಅಭಿವೃದ್ಧಿ ಯಾರ ಮಾಡಿದ್ದಾರೆ ಎಂಬುದು ಗೊತ್ತಿದೆ ಎಂದರು.

ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಮಾತನಾಡಿ, ಅಭಿವೃದ್ಧಿಯನ್ನು ಜನರಿಗೆ ಅನುಕೂಲವಾಗುವಂತೆ ಮಾಡಿದ್ದೇವೆ. ಜನರೇ ಕೆಲಸ ಸರಿಯಾಗಿ ನಡೆಯುತ್ತಿದೆಯೇ ಇಲ್ಲವೇ ಎಂಬುದರ ಗುಣಮಟ್ಟದ ಪರೀಕ್ಷೆಯನ್ನು ಗಮನಿಸಬೇಕು. ಕಳಪೆ ಕೆಲಸವಾದರೆ ದೂರು ನೀಡಬೇಕು ಎಂದರು.

ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ, ಅಭಿವೃದ್ಧಿ ವಿಚಾರದಲ್ಲಿ ಯಾವುದೇ ತಾರತಮ್ಯ ಮತ್ತು ರಾಜಕೀಯ ಮಾಡಬಾರದು. ಜನರಿಂದ ಆಯ್ಕೆಯಾದ ಕಾಂಗ್ರೆಸ್ ಸರಕಾರವು ಪ್ರಾಮಾಣಿಕವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡತ್ತಿದ್ದು ಇನ್ನೂ ಕೆಲವು ಕಡೆಗಳಲ್ಲಿ ಟೆಂಡರ್ ನಡೆದಿದ್ದು ಉಳಿದ ರಸ್ತೆಗಳನ್ನು ಹಂತ ಹಂತವಾಗಿ ಅಭಿವೃದ್ಧಿ ಪಡಿಸಲಾಗುತ್ತದೆ ಎಂದು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಒಂದು ದೇಶ ಒಂದು ಚುನಾವಣೆ- ಒಕ್ಕೂಟ ವ್ಯವಸ್ಥೆ ಧ್ವಂಸಕ್ಕೆ ಅಡಿಗಲ್ಲು

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ಜಿಲ್ಲಾಧಿಕಾರಿ ಅಕ್ರಂ ಪಾಷ, ಎಸ್ಪಿ ಬಿ.ನಿಖಿಲ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ನರಸಾಪುರ ಗ್ರಾಪಂ ಅಧ್ಯಕ್ಷ ಕೃಷ್ಣಪ್ಪ, ಉಪಾಧ್ಯಕ್ಷೆ ಪದ್ಮಮ್ಮ, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಕೋಚಿಮುಲ್ ನಿರ್ದೇಶಕ ಷಂಷೀರ್, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಮುಖಂಡರಾದ ಮೈಲಾಂಡಹಳ್ಳಿ ಮುರಳಿ, ಮಂಜುನಾಥ್, ಎಂಟಿಬಿ ಶ್ರೀನಿವಾಸ್, ಶ್ರೀರಾಮಪ್ಪ, ಜಾಲಿ ಬಾಬು ಜನಪನಹಳ್ಳಿ ನವೀನ್ ಕುಮಾರ್, ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...