ಹಾಸನ | ಲಂಚ ಪಡೆದಿದ್ದ ಅಪರಾಧ ಸಾಬೀತು: ಸರ್ಕಾರಿ ಕೆಲಸದಿಂದ ಉಪ ನೋಂದಣಾಧಿಕಾರಿ ವಜಾ

Date:

ಲಂಚ ಪಡೆದ ಪ್ರಕರಣದಲ್ಲಿ ನ್ಯಾಯಾಲಯವು ಶಿಕ್ಷೆ ವಿಧಿಸಿದ್ದ ಉಪ ನೋಂದಣಾಧಿಕಾರಿ ಭಾಸ್ಕ‌ರ್ ಸಿದ್ದರಾಮಪ್ಪ ಚೌರ ಅವರನ್ನು ಕರ್ತವ್ಯದಿಂದ ವಜಾ ಮಾಡಿ ನೋಂದಣಿ ಮತ್ತು ಮುದ್ರಾಂಕ ಆಯುಕ್ತ ದಯಾನಂದ ಕೆ.ಎ. ಆದೇಶ ಹೊರಡಿಸಿದ್ದಾರೆ.

ಪ್ರಸ್ತುತ ಹೊಳೆನರಸೀಪುರದಲ್ಲಿ ಉಪ ನೋಂದಣಾಧಿಕಾರಿಯಾಗಿರುವ ಭಾಸ್ಕರ ಎಸ್‌. ಚೌರ 2019ರಲ್ಲಿ ಜಾಲದಲ್ಲಿ ಉಪ ನೋಂದಣಾಧಿಕಾರಿ ಆಗಿದ್ದಾಗ ನಿವೇಶನದ ಕ್ರಯಪತ್ರ ನೋಂದಣಿ ಮಾಡಿಕೊಡಲು ₹15,000 ಲಂಚ ಪಡೆಯುತ್ತಿದ್ದ ವೇಳೆ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ಸಿಕ್ಕಿಬಿದ್ದಿದ್ದರು. ಲಂಚ ಪಡೆದಿರುವುದು ಸಾಬೀತಾಗಿದ್ದರಿಂದ ಹೆಚ್ಚುವರಿ ನಗರ ಸಿವಿಲ್ ನ್ಯಾಯಾಲಯವು ಶುಕ್ರವಾರ ಮೂರು ವರ್ಷಗಳ ಜೈಲು ಶಿಕ್ಷೆ, ₹5 ಲಕ್ಷ ದಂಡ ವಿಧಿಸಿತ್ತು.

ಶಿಕ್ಷೆಗೆ ಒಳಗಾಗಿರುವ ಭಾಸ್ಕರ ಎಸ್. ಚೌರ ಅವರನ್ನು ಕರ್ನಾಟಕ ನಾಗರಿಕ ಸೇವಾ ನಿಯಮಾವಳಿ 1957ರ ನಿಯಮ 8ರ ಅನ್ವಯ ತಕ್ಷಣವೇ ಜಾರಿಗೆ ಬರುವಂತೆ ಸರ್ಕಾರಿ ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಸಕ್ಷಮ ಪ್ರಾಧಿಕಾರಿಯೂ ಆಗಿರುವ ದಯಾನಂದ ಅವರ ಆದೇಶದಲ್ಲಿ ತಿಳಿಸಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...