ಹಾವೇರಿ | ಸರ್ಕಾರ ರೈತರ ಸಂಪೂರ್ಣ ಸಾಲಮನ್ನಾ ಘೋಷಿಸಲಿ: ರೈತ ಸಂಘ ಒತ್ತಾಯ

Date:

  • ರೈತರ ಅಲ್ಪ ಪ್ರಮಾಣದ ಸಾಲ ವಸೂಲಿಗಾಗಿ ಬ್ಯಾಂಕ್ ಅಧಿಕಾರಿಗಳು ನಿರಂತರ ಕಿರುಕುಳಕ್ಕೆ ನೀಡುತ್ತಿದ್ದಾರೆ.
  • ರಾಜ್ಯ ಸರ್ಕಾರ ರೈತರ ಬೇಡಿಕೆ ಈಡೇರಿಸದಿದ್ದರೆ ಉಗ್ರ ಹೋರಾಟ ಕೈಗೊಳ್ಳಲಾಗುವುದು.

ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ರೈತರು ಆತ್ಮಹತ್ಯೆಗೆ ಶರಣಾಗುವ ಪರಿಸ್ಥಿತಿ ಬಂದಿದ್ದು, ಸರ್ಕಾರ ರೈತರ ಬೆಳೆ ಸಾಲ ಸೇರಿದಂತೆ ಸಂಪೂರ್ಣ ಸಾಲಮನ್ನಾ ಕೈಗೊಂಡು ರೈತರ ಜೀವದಾನಕ್ಕೆ ಮುಂದಾಗಬೇಕೆಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಶಿಗ್ಗಾವಿ-ಸವಣೂರ ತಾಲೂಕು ಘಟಕದ ಕಾರ್ಯಕರ್ತರು ಒತ್ತಾಯಿಸಿದರು.

ಈ ಕುರಿತು ರೈತ ಸಂಘದ ಹಾವೇರಿ ಜಿಲ್ಲಾಧ್ಯಕ್ಷ ಎಮ್.ಎನ್.ನಾಯ್ಕ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಮೆರವಣಿಗೆ ನಡೆಸಿ ಮುಖ್ಯಮಂತ್ರಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಶಿಗ್ಗಾವಿ-ಸವಣೂರ ಅಸಿಸ್ಟೆಂಟ್ ಕಮಿಷನರ್‌ ಅವರಿಗೆ ಸಲ್ಲಿಸಿದರು.

“ಬ್ಯಾಂಕ್ ಅಧಿಕಾರಿಗಳು, ಎಸ್ಕಾಂ ಇಲಾಖೆ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ರೈತರನ್ನು ಸಣ್ಣಪುಟ್ಟ ವಿಷಯಗಳಿಗೆ ಅಪರಾಧಿಗಳಂತೆ ಕಾಣುತ್ತಿರುವುದು ವಿಷಾದನೀಯ ಸಂಗತಿಯಾಗಿದೆ. ರೈತರ ಅಲ್ಪ ಪ್ರಮಾಣ ಸಾಲ ಮೊತ್ತ ವಸೂಲಿಗಾಗಿ ಬ್ಯಾಂಕ್ ಅಧಿಕಾರಿಗಳು ರೈತರಿಗೆ ನಿರಂತರ ಕಿರುಕುಳಕ್ಕೆ ನೀಡುತ್ತಿದ್ದಾರೆ. ಕೂಡಲೇ ಸರ್ಕಾರ ಇದಕ್ಕೆ ಕಡಿವಾಣ ಹಾಕಬೇಕು” ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರೈತರ ಸಾಮೂಹಿಕ ಮನವಿಗೆ ಸ್ಪಂದಿಸಿ ಸರ್ವ ಬೇಡಿಕೆ ಈಡೇರಿಸಲು ರಾಜ್ಯ ಸರ್ಕಾರ ಮುಂದಾಗಗಬೇಕು. ಇಲ್ಲವಾದಲ್ಲಿ ಮುಂದಿನ ದಿನಮಾನದಲ್ಲಿ ಸರ್ಕಾರಕ್ಕೆ ಹಾಗೂ ಜಿಲ್ಲೆಯ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಸವಣೂರು ಕಂದಾಯ ಇಲಾಖೆ ಕಚೇರಿ ಎದುರುಗಡೆ ಸಾವಿರಾರು ರೈತರು ಸಮ್ಮುಖದಲ್ಲಿ ಉಗ್ರ ಹೋರಾಟ ಕೈಗೊಳ್ಳಲಾಗುವುದು” ಎಂದು ಎಚ್ಚರಿಸಿದರು.

ಬೇಡಿಕೆಗಳು:

  1. ಬರಗಾಲ ಘೋಷಣೆಯೊಂದಿಗೆ ರೈತರಿಗೆ ಆತ್ಮಸ್ಥೈರ್ಯಕ್ಕಾಗಿ ಬಿತ್ತನೆ ಖರ್ಚು ಘೋಷಣೆ ಮಾಡಬೇಕು.
  2. ಅನಾವೃಷ್ಟಿಯಿಂದ ಬೆಳೆ ಹಾನಿ ಉಂಟಾದ ಹಿನ್ನೆಲೆಯಲ್ಲಿ ಕೂಡಲೇ ಬೆಳೆ ವಿಮಾ ಘೋಷಿಸಬೇಕು.
  3. ಕೃಷಿ ಚಟುವಟಿಕೆಗಾಗಿ ನಿರಂತರ ಮೂರು ಫೇಸ್ ವಿದ್ಯುತ್ ಸರಬರಾಜಿಗೆ ಸೂಕ್ತ ಕ್ರಮ ಕೈಗೊಂಡು ಒಣಗುತ್ತಿರುವ ಬೆಳೆಗಳಿಗೆ ಜೀವಕಳೆ ತುಂಬಲು ಮುಂದಾಗಬೇಕು.
  4. ರೈತರ ಬೆಳೆ ಸಾಲ ಸೇರಿದಂತೆ ಸಂಪೂರ್ಣ ಸಾಲ ಮನ್ನಾಕ್ಕೆ ಕ್ರಮ ಕೈಗೊಳ್ಳುವ ಮೂಲಕ ರೈತರಿಗೆ ಜೀವದಾನ ನೀಡಬೇಕು.
  5. ಸಾಲ ವಸೂಲಾತಿಗಾಗಿ ನಿರಂತರ ಕಿರುಕುಳ ನೀಡುತ್ತಿರುವ ಬ್ಯಾಂಕ್ ಅಧಿಕಾರಿಗಳಿಗೆ ಸೂಕ್ತ ಸೂಚನೆ ನೀಡುವುದು ಹಾಗೂ ರೈತರಿಗೆ ಸಾಲ ಮರುಪಾವತಿಗಾಗಿ ಸಮಯ ನೀಡಲು ಆದೇಶ ನೀಡಬೇಕು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬರ ಘೋಷಣೆಯಲ್ಲ, ಪೀಡಿತರಿಗೆ ಪರಿಹಾರ ಮುಟ್ಟಿಸುವುದು ಮುಖ್ಯ

  1. ರೈತರ ಕೃಷಿ ಚಟುವಟಿಕೆಗಾಗಿ ಹಾಗೂ ವಿದ್ಯುತ್ ಸಂಪರ್ಕ ನೀಡಲು ಸತಾಯಿಸುತ್ತಿರುವ ಹೆಸ್ಕಾಂ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿ ಪಾರದರ್ಶಕವಾಗಿ ಸರ್ಕಾರದ ಫೀಸ್ ಮಾತ್ರ ಪಡೆದು ವಿದ್ಯುತ್ ಸಂಪರ್ಕ ನೀಡಲು ಆದೇಶಿಸಬೇಕು.
  2. ರೈತರ ಬೇಡಿಕೆಗೆ ಅನುಗುಣವಾಗಿ ವಿದ್ಯುತ್ ಪ್ರವರ್ತಕ (ಟಿ ಸಿ) ನೀಡಲು ಸೂಚನೆ ನೀಡಬೇಕು.
  3. ಸರ್ಕಾರ ಹಾಗೂ ವಿವಿಧ ಇಲಾಖೆಯ ಮೆಲಾಧಿಕಾರಿಗಳು ರೈತರ ‌ ಅಹವಾಲು ಸ್ವೀಕಾರಕ್ಕಾಗಿ ಪ್ರತಿ ತಿಂಗಳು ಒಂದು ದಿನ ಸಮಯ ಮೀಸಲು ಇಡಬೇಕು. ಪ್ರತಿ ತಾಲೂಕು ಮಟ್ಟದಲ್ಲಿ ರೈತರ ಅಹವಾಲು ಸ್ವೀಕರಿಸಬೇಕು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...