ಮಂಡ್ಯ| ಸರಕಾರ ಜಾನಪದ ಕಲಾವಿದರನ್ನು ಪ್ರೋತ್ಸಾಹಿಸಬೇಕಿದೆ : ಬಿ.ಎಂ.ಅಪ್ಪಾಜಪ್ಪ ಮನವಿ

Date:

ಪ್ರಸ್ತುತ ಜಾನಪದಕ್ಕೆ ಪ್ರೋತ್ಸಾಹ ಇಲ್ಲವಾಗುತ್ತಿದ್ದು, ಸರ್ಕಾರ ಕಲಾವಿದರನ್ನು ಪ್ರೋತ್ಸಾಹಿಸುವ ಕೆಲಸ ಮಾಡಬೇಕಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಕೋಶಾಧ್ಯಕ್ಷ ಬಿ.ಎಂ.ಅಪ್ಪಾಜಪ್ಪ ಮನವಿ ಮಾಡಿದರು.

ನಗರದ ಗಾಂಧಿ ಭವನದಲ್ಲಿ ಶನಿವಾರ ಶ್ರೀ ಮಲೆಮಹದೇಶ್ವರ ಜಾನಪದ, ಸುಗಮ ಸಂಗೀತ ಅಕಾಡೆಮಿ ತಂಡ(ಹೆಮ್ಮಿಗೆ), ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಜಾನಪದ ಸಂಗೀತೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಂಡ್ಯ ಜಿಲ್ಲೆ ಜನಪದ ಸಂಗೀತದ ತವರಾಗಿದ್ದು, ಜಾನಪದ ಜೀವನ ಶೈಲಿಯನ್ನು ಕಲಿಸುತ್ತದೆ. ಜಾನಪದ ತಮ್ಮ ಕಷ್ಟ ಸುಖಗಳನ್ನು ಹಂಚಿಕೊಳ್ಳುವ ಕಲೆಯಾಗಿದೆ ಎಂದು ಬಣ್ಣಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಸವೇಶ್ವರ ಆಗ್ರೋ ರೈಸ್‌ ಇಂಡಸ್ಟ್ರೀಸ್‌ ಮಾಲೀಕ ಎಸ್‌.ಸಿ.ಬಸವರಾಜು ಸಂಪಹಳ್ಳಿ ಮಾತನಾಡಿ, ಕೆಲ ಧಾರಾವಾಹಿಗಳು ಮನೆ ಮತ್ತು ಕುಟುಂಬದಲ್ಲಿನ ಜಗಳವನ್ನೇ ತೋರಿಸುತ್ತಿವೆ. ಇದರಿಂದ ಮನೆಗಳಲ್ಲಿ ಶಾಂತಿ ನೆಮ್ಮದಿ ಹಾಳು ಮಾಡುವ ಲಕ್ಷಣಗಳನ್ನೇ ಇದರಲ್ಲಿ ಪ್ರದರ್ಶಿಸಲಾಗುತ್ತಿದೆ ಎಂದು ಹೇಳಿದರು.

ಭತ್ತದ ಪೈರು ನಾಟಿ ಮಾಡುವಾಗ, ರಾಗಿ ಬೀಸುವಾಗ, ಸೋಬಾನೆ ಪದಗಳನ್ನು ಜಾನಪದ ಶೈಲಿಯಲ್ಲಿ ಹಾಡುವ ಮೂಲಕ ಬಾಯಿಂದ ಬಾಯಿಗೆ ಬಂದು ಗ್ರಾಮೀಣ ಭಾಗಗಳಲ್ಲಿ ಜಾನಪದ ಹುಟ್ಟಿಕೊಂಡಿತು. ಇದರಲ್ಲಿ ಅನಕ್ಷರಸ್ಥರು ಹೆಚ್ಚಾಗಿ ಜನಪದ ಹಾಡುಗಳನ್ನು ಹಾಡುವುದು ಸಾಮಾನ್ಯವಾಗಿದೆ ಎಂದರು.

ಮಂಡ್ಯ ೨

ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಸುರೇಶ್‌ ಮಾತನಾಡಿ, ಜಾನಪದ ಹಾಡುಗಳು ನಶಿಸುತ್ತಿವೆ. ಅವುಗಳನ್ನು ಶಾಲಾ ಮತ್ತು ಕಾಲೇಜು ಹಂತದಲ್ಲಿ ಉಳಿಸಿ ಬೆಳೆಸುವ ಕೆಲಸವನ್ನು ಮಾಡಬೇಕು. ಇದು ನಮ್ಮ ನಾಡಿನ ಸಂಸ್ಕೃತಿಯು ಹೌದು ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಮಂಡ್ಯ | ಜೀತಕ್ಕಿದ್ದ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಿದ ಜಿಲ್ಲಾಡಳಿತ

ಸಂಗೀತೋತ್ಸವದಲ್ಲಿ ತಾಲ್ಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ್ದ ಸ್ಪರ್ಧಿಗಳು ಜಾನಪದ ಹಾಡು ಹಾಡಿ ರಂಜಿಸಿದರು.

ಕಾರ್ಯಕ್ರಮದಲ್ಲಿ ಜಾನಪದ ಕಲಾವಿದರ ಒಕ್ಕೂಟದ ಮೈಸೂರು ವಿಭಾಗ ಅಧ್ಯಕ್ಷ ಆರ್‌.ಕೆ.ಸ್ವಾಮಿ, ಶ್ರೀ ಮಲೆಮಹದೇಶ್ವರ ಜಾನಪದ ಸುಗಮ ಸಂಗೀತ ಅಕಾಡೆಮಿ ಅಧ್ಯಕ್ಷೆ ದೇವೀರಮ್ಮ, ಕಾರ್ಯದರ್ಶಿ ಎಚ್‌.ಎಂ.ಮಹದೇವು, ಸೂನಗಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಶಿವಪ್ರಸಾದ್ ಸೇರಿದಂತೆ ಹಲವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...