ರಾಯಚೂರು | ಪದವೀಧರರು ಈಶಾನ್ಯ ಪದವೀಧರ ಮತದಾರರ ಪಟ್ಟಿಯಲ್ಲಿ‌ ಹೆಸರು ನೋಂದಾಯಿಸಿ : ಜಿ.ಪಂ. ಸಿಇಒ ರಾಹುಲ್‌ ತುಕಾರಾಂ

Date:

ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದ್ದು, ಪದವೀಧರ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಸದಲ್ಲಿ ಚುನಾವಣೆ ಯಶಸ್ವಿಯಾಗಲು ಸಾಧ್ಯವೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಾಂ ಪಾಂಡ್ವೆ ಹೇಳಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಸಂಯುಕ್ತಾಶ್ರಯದಲ್ಲಿ‌ ನಡೆದ ಈಶಾನ್ಯ ಕರ್ನಾಟಕ ಮತಕ್ಷೇತ್ರದ ಮತದಾರರ ವಿಶೇಷ ನೋಂದಣಿ ಅಭಿಯಾನ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ಈಶಾನ್ಯ ಪದವೀಧರ ಮತಕ್ಷೇತ್ರಕ್ಕೆ ಚುನಾವಣೆ ಸಿದ್ಧತೆ ಈಗಾಗಲೇ ಆರಂಭವಾಗಿದ್ದು, ಪದವೀಧರ ಮತದಾರರನ್ನು ಹೆಚ್ಚಾಗಿ ನೋಂದಣಿ ಮಾಡಿಸುವುದರ ಜೊತೆಗೆ ಎಲ್ಲರೂ ಚುನಾವಣೆಯಲ್ಲಿ ಭಾಗಿಯಾಗಿದಾಗ ಮಾತ್ರ ಯಶಸ್ವಿಯಾಗಲು ಸಾಧ್ಯ. ಈ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ಜವಾಬ್ದಾರಿಯಿಂದ ಕೆಲಸ ಮಾಡಬೇಕಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಲ್ಲಾ ಚುನಾವಣೆಗಿಂತ ಈ ಚುನಾವಣೆ ವಿಭಿನ್ನ, ಪದವೀಧರ ಮತದಾರರೇ ಇಲ್ಲಿ ಪ್ರಮುಖ ಪಾತ್ರ, ಆದ್ದರಿಂದ ನೋಂದಣಿ ಮಾಡಿಸದ ಹೊಸ ಪದವೀಧರನ್ನು  ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸುವಂತೆ ತಿಳಿಸಿ ಅವರು ಎಲ್ಲಿ ಮತದಾನ ಮಾಡಬೇಕೆಂಬುವ ಬಗ್ಗೆ ಮಾಹಿತಿ ನೀಡಬೇಕು. ಪದವೀಧರ ಚುನಾವಣೆಗೆ ಸಂಬಂಧಿಸಿದಂತೆ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಚುನಾವಣೆ ಆಯೋಗ ಸೂಚಿಸಿದ ಮಾರ್ಗಸೂಚಿ ಮತ್ತು ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು” ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಹಮಾಸ್ ನೆಪ ಮಾತ್ರವಷ್ಟೇ, ಪ್ಯಾಲೆಸ್ತೀನ್‌ ಇಲ್ಲವಾಗಿಸುವುದು ಇಸ್ರೇಲ್ ಗುರಿ: ಚಿಂತಕ ಶಿವ ಸುಂದರ್

ಈ ಸಂದರ್ಭದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರಾಜಶೇಖರ ಹೊಕ್ರಾಣ , ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸುರೇಶ ಉಗ್ಗಿ, ಬಿಎನ್ ವಾಲ್ಮಿಕಿ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.

ವರದಿ : ಸಿಟಿಜನ್‌ ಜರ್ನಲಿಸ್ಟ್‌, ಹಫೀಜುಲ್ಲ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...