ಜು. 23 ರಿಂದ ಕನಿಷ್ಠ ವೇತನ ಪಿಂಚಣಿ ಸೇರಿ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೆಂಗಳೂರಿನಲ್ಲಿ ಗ್ರಾ. ಪಂ. ನೌಕರರ ಧರಣಿ

Date:

“ಗ್ರಾಮ ಪಂಚಾಯತ್ ನೌಕರರಿಗೆ ಈವರೆಗೆ ನ್ಯಾಯಯುತ ವೇತನವಿಲ್ಲದೇ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಕೂಡಲೇ ಕನಿಷ್ಠ ವೇತನ ಜಾರಿ, ಪಿಂಚಣಿ ಒಳಗೊಂಡಂತೆ 19 ಬೇಡಿಕೆ ಈಡೇರಿಸಲು ಒತ್ತಾಯಿಸಿ ಜು. 23ರಿಂದ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಅನಿರ್ದಿಷ್ಟಾವಧಿ ಹೋರಾಟ ನಡೆಸಲಾಗುವುದು” ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ (ಸಿಐಟಿಯು) ನೌಕರರ ಸಂಘದ ರಾಜ್ಯ ಖಜಾಂಚಿ ಆರ್.ಎಸ್. ಬಸವರಾಜ್ ತಿಳಿಸಿದರು.

ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿ ಮಾತನಾಡಿದ ಅವರು, ಅಂದು ನಡೆಯುವ ಹೋರಾಟದಲ್ಲಿ ದಾವಣಗೆರೆ ಜಿಲ್ಲೆಯ ಒಂದು ಸಾವಿರ ನೌಕರರು ಸೇರಿದಂತೆ ಎಲ್ಲಾ ಜಿಲ್ಲೆಗಳ 30 ಸಾವಿರದಷ್ಟು ನೌಕರರು ಭಾಗವಹಿಸಲಿದ್ದಾರೆ. ಸರ್ಕಾರ ಎಲ್ಲ ಬೇಡಿಕೆ ಈಡೇರಿಸುವವರೆಗೆ ಹೋರಾಟ ಮುಂದುವರಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

2022 ರಿಂದಲೂ ಗ್ರಾಮ ಪಂಚಾಯತಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ನೀರಗಂಟಿ, ಬಿಲ್ ಕಲೆಕ್ಟರ್, ಕಂಪ್ಯೂಟರ್ ಆಪರೇಟರ್, ಜವಾನ, ಕ್ಲರ್ಕ್‌ಗಳಿಗೆ ಕನಿಷ್ಠ 31 ಸಾವಿರ ವೇತನ ನಿಗದಿ ಮಾಡಬೇಕು ಎಂದು ಒತ್ತಾಯಿಸಿ ಹೋರಾಟ ನಡೆಸಲಾಗುತ್ತಿದೆ. ಯಾವ ಸರ್ಕಾರವೂ ಈವರೆಗೆ ಬೇಡಿಕೆ ಈಡೇರಿಸಿಲ್ಲ. ಕಳೆದ ಜನವರಿಯಲ್ಲಿ ಹೋರಾಟ ನಡೆಸಿದ ಸಂದರ್ಭದಲ್ಲಿ ಸಚಿವ ಪ್ರಿಯಾಂಕ ಖರ್ಗೆಯವರೇ ಭೇಟಿ ನೀಡಿ, ಭರವಸೆ ನೀಡಿದ್ದರೂ ಜಾರಿಗೆ ಬಂದಿಲ್ಲ. ಹಾಗಾಗಿ ಬೇಡಿಕೆ ಈಡೇರಿಸುವ ತನಕ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿವೃತ್ತರಾದ ಗ್ರಾಮ ಪಂಚಾಯತಿ ನೌಕರರಿಗೆ ವರ್ಷಕ್ಕೆ 15 ದಿನಗಳ ವೇತನದ ಆಧರಿಸಿ ಪಿಂಚಣಿ ನೀಡಬೇಕು. ಆದರೆ, ಪಿಂಚಣಿ ನೀಡಲಾಗುತ್ತಿಲ್ಲ.ಕನಿಷ್ಠ ಆರು ಸಾವಿರ ಪಿಂಚಣಿ ನೀಡಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಜಿಲ್ಲಾ ಗೌರವಾಧ್ಯಕ್ಷ ಕೆ.ಎಚ್. ಆನಂದರಾಜ್, ಶ್ರೀನಿವಾಸಾಚಾರಿ, ಬಸವ ರಾಜ್ ಬೇತೂರು, ಚಂದ್ರಪ್ಪ ಮತ್ತು ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...