ಬೀದರ್‌ | ಗ್ರಾ.ಪಂ. ನಲ್ಲಿ ಅವ್ಯವಹಾರ; ತನಿಖೆಗೆ ಆಗ್ರಹ

Date:

ಬೀದರ್‌ ತಾಲೂಕಿ ಮಾಳೆಗಾಂವ ಗ್ರಾಮ ಪಂಚಾಯತ್‌ನಲ್ಲಿ ವಿವಿಧ ಯೋಜನೆಯಡಿ ನಡೆಸಿರುವ ಅವ್ಯವಹಾರದ ಬಗ್ಗೆ ಸಮಗ್ರ ತನಿಖೆ ನಡೆಸಿ ಪಿಡಿಒ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯ ಕಾರ್ಯದರ್ಶಿ ಜಾನಸನ್‌ ಘೋಡೆ ಆಗ್ರಹಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹಕ್ಕೊತ್ತಾಯ ಪತ್ರ ಬರೆದಿರುವ ಅವರು, “ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಜೆಜೆಎಂ ಹಾಗೂ ಮನರೇಗಾ ಯೋಜನೆಯಡಿ ನಡೆದಿರುವ ಕಳಪೆ ಕಾಮಗಾರಿಗಳ ಬಗ್ಗೆ ತನಿಖೆ ನಡೆಸುವಂತೆ ಗ್ರಾಮಸ್ಥರು ಹಾಗೂ ವಿವಿಧ ಸಂಘಟನೆಗಳ ನೇತ್ರತ್ವದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ದೂರು ಸಲ್ಲಿಸಿದರೂ ಅಧಿಕಾರಿಗಳು ಕ್ರಮ ಕೈಗೊಳ್ಳಲು ವಿಫಲರಾಗಿದ್ದಾರೆ. ಈ ಅವ್ಯವಹಾರದಲ್ಲಿ ಮೇಲಾಧಿಕಾರಿಗಳೂ ಶಾಮೀಲಾಗಿರುವುದು ಮೇಲ್ನೋಟಕ್ಕೆ ಅನುಮಾನ ಬರುತ್ತಿದೆ” ಎಂದು ದೂರಿದರು.

ಗ್ರಾಮ ಪಂಚಾಯತ್‌ ವ್ಯಾಪ್ತಿಯ ಗ್ರಾಮಗಳ ಬಹುತೇಕ ಮನೆಗಳಿಗೆ ಕುಡಿಯುವ ನೀರು ಸರಬರಾಜು ಆಗದಿದ್ದರೂ ಕಾಮಗಾರಿ ಸಂಬಂಧಪಟ್ಟ ಗುತ್ತಿಗೆದಾರರಿಂದ ಹಣ ಪಡೆದು ಕಾಮಗಾರಿ ಹಸ್ತಾಂತರ ಮಾಡಿಕೊಂಡಿದ್ದಾರೆ. ಈ ಹಿನ್ನಲೆ ಗ್ರಾ.ಪಂ.ನಲ್ಲಿ ನಡೆದ ಅವ್ಯವಹಾರದ ಬಗ್ಗೆ ತಾಲೂಕು, ಜಿಲ್ಲಾ ಮಟ್ಟದ ಅಧಿಕಾರಿಗಳು ತನಿಖೆ ನಡೆಸದಿರುವುದು ಶೋಚನೀಯವಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರದ ಯೋಜನೆಗಳನ್ನು ಸಮಪರ್ಕವಾಗಿ ಅನುಷ್ಠಾನಗೊಳಿಸದೆ ಭಾರೀ ಅವ್ಯವಹಾರ ಎಸಗಿದ ಮಾಳೆಗಾಂವ್‌ ಗ್ರಾಮ ಪಂಚಾಯತ್‌ ಪಿಡಿಒ ಅವರನ್ನು ಕೂಡಲೇ ಅಮಾನತುಗೊಳಿಸಬೇಕು. ಈ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಿ ತಪ್ಪಿಸ್ಥ ಪಿಡಿಒ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಸಿಎಂ ಅವರಿಗೆ ಬರೆದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...