‘ಫಿಟ್ ಮೈಸೂರು’ ವಾಕಥಾನ್ ಯಶಸ್ಸಿಗೆ ಕಾರಣರಾದವರಿಗೆ ಕೃತಜ್ಞತೆ

Date:

ಮೈಸೂರು ವಿಶ್ವವಿದ್ಯಾನಿಲಯದ ನೇತೃತ್ವದಲ್ಲಿ ಇತ್ತೀಚೆಗೆ ನಡೆಸಲಾದ ‘ಫಿಟ್‌ ಮೈಸೂರು’ ವಾಕಥಾನ್‌ ಯಶಸ್ಸಿಗೆ ಕಾರಣರಾದವರಿಗೆ, ಮಾನಸ ಗಂಗೋತ್ರಿಯ ವಿಜ್ಞಾನ ಭವನದಲ್ಲಿ ನಡೆದ ಸಮಾರಂಭದಲ್ಲಿ ಎಲ್ಲಾ ರೀತಿಯಲ್ಲೂ ಸಹಕರಿಸಿದ ಹಲವು ಪ್ರಮುಖರು ಹಾಗೂ ವಿವಿಧ ಸಂಘ-ಸಂಸ್ಥೆಗಳಿಗೆ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎನ್‌.ಕೆ. ಲೋಕನಾಥ್‌ ಪ್ರಶಂಸನಾ ಪತ್ರವನ್ನು ನೀಡಿ ಕೃತಜ್ಞತೆ ಸಲ್ಲಿಸಿದರು.

ಕುಲಪತಿ ಪ್ರೊ. ಎನ್‌.ಕೆ. ಲೋಕನಾಥ್‌ ಮಾತನಾಡಿ, “ಮೈಸೂರು ನಗರವನ್ನು ಸ್ವಚ್ಛ, ಹಸಿರು ಹಾಗೂ ಸಮರ್ಥ ನಗರವನ್ನಾಗಿಸಲು ಎಲ್ಲರ ಸಹಕಾರ ಅಗತ್ಯವಿದೆ. ಈ ನಿಟ್ಟಿನಲ್ಲಿ ‘ಫಿಟ್‌ ಮೈಸೂರು’ ವಾಕಥಾನ್‌ ಮೂಲಕ ಮೊದಲ ಹೆಜ್ಜೆ ಇರಿಸಿದ್ದು, ಇದೇ ಪ್ರಥಮ ಬಾರಿಗೆ ಮೈಸೂರು ವಿವಿ ಹಲವು ಸಂಘ ಸಂಸ್ಥೆಗಳ ಸಹಕಾರದಿಂದ ಇಂತಹದೊಂದು ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿದೆ. ಮುಂದೆ ‘ಹಸಿರು ಮೈಸೂರು’, ಜೂ.21ಕ್ಕೆ ‘ಯೋಗ ಮೈಸೂರು’ ಸೇರಿದಂತೆ ಮೈಸೂರು ವಿವಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲು ಸನ್ನದ್ಧವಾಗಿದೆ” ಎಂದು ಹೇಳಿದರು.

ಮೈಸೂರು ವಿವಿ ಕುಲಸಚಿವೆ ಎಂ.ಕೆ. ಸವಿತಾ ಮಾತನಾಡಿ, ಫಿಟ್‌ ಮೈಸೂರು ವಾಕಥಾನ್‌ ಯಶಸ್ವಿಗೆ ಸಂಘ-ಸಂಸ್ಥೆಗಳೊಂದಿಗೆ ಜನಪ್ರತಿನಿಧಿಗಳು, ಅಧಿಕಾರಿಗಳ ಪ್ರೋತ್ಸಾಹ ಕಾರಣವಾಗಿದ್ದು, ಪ್ರಕೃತಿ ಕೂಡ ನಮಗೆ ಸಾಥ್‌ ನೀಡಿತು. ಮುಂದೆಯೂ ಈ ದಿನಗಳಲ್ಲೂ ಹಲವು ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಎಸ್‌ಎಸ್‌ ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ಶ್ರೀಹರಿ ದ್ವಾರಕನಾಥ್‌ ಮಾತನಾಡಿ, ಮೈಸೂರಿನಲ್ಲಿ ಶುಚಿ, ಆರೋಗ್ಯವಂತ ಸಮಾಜವನ್ನು ನಿರ್ಮಿಸುವ ಹಲವು ವರ್ಷಗಳ ಕನಸನ್ನು ಫಿಟ್‌ ಮೈಸೂರು ವಾಕಥಾನ್‌ ಮೂಲಕ ಮೈಸೂರು ವಿಶ್ವವಿದ್ಯಾನಿಲಯ ನನಸಾಗಿದೆ ಎಂದು ಹೇಳಿದರು.

ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಶೇಖ್‌ ತನ್ವೀರ್‌ ಆಸೀಫ್‌ ಮಾತನಾಡಿ, ಫಿಟ್‌ ಮೈಸೂರು ಯಶಸ್ವಿಯಾಗಿದ್ದು, ಜನರ ಆರೋಗ್ಯ ಕಾಪಾಡುವ ಹಾಗೂ ಸ್ವಚ್ಛತೆ ಕಾಪಾಡುವಲ್ಲಿ ಪ್ರತಿ ವಾರ್ಡ್‌ಗಳಲ್ಲಿ ಕಾರ್ಯಕ್ರಮ ರೂಪಿಸಲಾಗುವುದು ಎಂದರು.

ಈ ವಿಶೇಷ ಸುದ್ದಿ ಓದಿದ್ದೀರಾ? ‘ಬೃಹತ್ ಮೈಸೂರು ಮಹಾನಗರ ಪಾಲಿಕೆ’ ಪ್ರಸ್ತಾವಿತ ಯೋಜನೆಯ ಸಾಧಕ-ಬಾಧಕಗಳೇನು?

ಕಾರ್ಯಕ್ರಮದಲ್ಲಿ ಮೈಸೂರು ವಿವಿ ಕುಲಸಚಿವ ಎಸ್‌. ನಾಗರಾಜು, ಜಿಮ್‌ ಅಸೋಸಿಯೇಷನ್‌ನ ಹರ್ಷ, ಜಿಎಸ್‌ಎಸ್‌ ಸಂಸ್ಥೆಯ ಶ್ರೀರಾಮ್‌, ಮೈಸೂರು ವಿವಿಯ ವಿವಿಧ ವಿಭಾಗದ ನಿರ್ದೇಶಕಿ ಜ್ಯೋತಿ, ಅಮೃತೇಶ್‌, ಮಂಟೇಲಿಂಗಸ್ವಾಮಿ, ಗುರುಲಿಂಗ ಸಿದ್ದಯ್ಯ, ಸಂಘ ಸಂಸ್ಥೆಗಳ ಪ್ರಮುಖರಾದ ಸಮರ್ಥ್‌, ಶ್ರೀವತ್ಸ ಮಂಜುನಾಥ್‌, ವೆಂಕಟೇಶ್‌, ಪ್ರತಿನಿಧಿ ದಿನಪತ್ರಿಕೆ ಪ್ರಧಾನ ಸಂಪಾದಕ ಸಿ.ಕೆ. ಮಹೇಂದ್ರ, ಕಾರ್ಯ‌ನಿರ್ವಾಹಕ ಸಂಪಾದಕ ಧರ್ಮಾಪುರ ನಾರಾಯಣ್, ಜಿಎಸ್‌ಎಸ್‌ನ ರೂಪಶ್ರೀ, ಸರಳ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...