‘ಗ್ರೇಟರ್ ಮೈಸೂರು’ ನಗರದ ಘನತೆ, ಸಂಸ್ಕೃತಿ, ವಿಶಾಲತೆಗೆ ಧಕ್ಕೆಯಾಗಬಾರದು; ಸಿಎಂ ಸಿದ್ದರಾಮಯ್ಯ

Date:

ಮೈಸೂರಿನ ಪಾಲಿಕೆ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆದ ಮೊದಲ ‘ಗ್ರೇಟರ್ ಮೈಸೂರು’ ಸಭೆಯಲ್ಲಿ ಮಾತನಾಡಿ, ಮೈಸೂರಿನ ಘನತೆಗೆ, ಸಂಸ್ಕೃತಿಗೆ, ವಿಶಾಲತೆಗೆ ಧಕ್ಕೆಯಾಗದಂತೆ ಗ್ರೇಟರ್ ಮೈಸೂರು ಆಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

“ಬೆಂಗಳೂರಿನ‌ ರೀತಿ ಟ್ರಾಫಿಕ್ ಸಮಸ್ಯೆ, ಒಳಚರಂಡಿ, ಫುಟ್ ಪಾತ್, ಕುಡಿಯುವ ನೀರು, ಎಸ್‌ಟಿಪಿ ಯಾವುದರ ಸಮಸ್ಯೆಯೂ ಇರದಂತೆ ಜಿಲ್ಲಾಡಳಿತವು ಸ್ಪಷ್ಟವಾದ, ವೈಜ್ಞಾನಿಕವಾದ ಬ್ಲೂ ಪ್ರಿಂಟ್ ಸಿದ್ಧಪಡಿಸಿ, ಅನುಷ್ಠಾನ ಮಾಡಬೇಕು. ಗ್ರೇಟರ್ ಮೈಸೂರು ಸುಸಜ್ಜಿತವಾಗಿರಬೇಕು ಮತ್ತು ವ್ಯವಸ್ಥಿತವಾಗಿರಬೇಕು. ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಾಗ ಈಗಿನ ಜನಸಂಖ್ಯೆಗೆ ಅನುಗುಣವಾಗಿ ಯೋಜನೆ ರೂಪಿಸದೆ, ಮುಂದಿನ 15-20 ವರ್ಷಗಳ ಮುಂದಾಲೋಚನೆಯಿಂದ ವೈಜ್ಞಾನಿಕ ಯೋಜನೆ ರೂಪಿಸಬೇಕು” ಎಂದು ಸ್ಪಷ್ಟ ಪರಿಕಲ್ಪನೆಗಳನ್ನು ವಿವರಿಸಿ ನಿರ್ದೇಶನ ನೀಡಿದರು.

ಸಿಎಂ ಸಭೆಯಲ್ಲಿ ನೀಡಿದ ಸೂಚನೆಗಳು:

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
  • ಟ್ರಾಫಿಕ್ ಸಮಸ್ಯೆ ಯಾವುದೇ ಕಾರಣಕ್ಕೂ ಇರಬಾರದು.
  • ಉದ್ಯೋಗ ಸೃಷ್ಟಿಯಿಂದ ಘನ ತ್ಯಾಜ್ಯ ನಿರ್ವಹಣೆವರೆಗೂ ಆಧುನಿಕ‌ ತಂತ್ರಜ್ಞಾನ ಬಳಕೆ ಮಾಡುವ ಬಗ್ಗೆ ಯೋಜನೆ ಸಿದ್ಧಪಡಿಸಿ, ಅನುಷ್ಠಾನ ಮಾಡಬೇಕು.
  • ತ್ಯಾಜ್ಯ ವಿಲೇವಾರಿ, ಕೈಗಾರಿಕಾ ತ್ಯಾಜ್ಯ ವಿಲೇವಾರಿ ಎಲ್ಲವೂ ವೈಜ್ಞಾನಿಕವಾಗಿರಬೇಕು.
  • ಬಡಾವಣೆಗಳ ನಿರ್ಮಾಣ ಆಗುವಾಗ ಚರಂಡಿ, ರಸ್ಯೆಗಳು, ಒಳಚರಂಡಿ, ನೀರು, ವಿದ್ಯುತ್ ಸಂಪರ್ಕದ ಜೊತೆಗೆ ಪಾರ್ಕ್ ಗಳು ಕೂಡ ವ್ಯವಸ್ಥಿತವಾಗಿರಬೇಕು.
  • ಮೈಸೂರಿಗೆ ಮತ್ತೊಂದು ಹೊರ ವರ್ತುಲ ರಸ್ತೆ ಅಗತ್ಯ ಬೀಳುತ್ತದೆ. ಇದಕ್ಕೆ ಈಗಲೇ ಯೋಜನೆ ಸಿದ್ಧ ಮಾಡಬೇಕು. ಆದಾಯವೂ ಹೆಚ್ಚಾಗಬೇಕು. ಇದಕ್ಕೆ ಸ್ಪಷ್ಟ ಅಂದಾಜು, ಯೋಜನೆ ರೂಪಿಸಿಕೊಳ್ಳಬೇಕು.
  • ವಿಶಾಲವಾದ ರಸ್ತೆಗಳು ಮೈಸೂರಿನ ಹೆಗ್ಗಳಿಕೆ, ಗ್ರೇಟರ್ ಮೈಸೂರು ಇನ್ನಷ್ಟು ಯೋಜನಾ ಬದ್ಧವಾಗಿರಬೇಕು.
  • ಜನಸಂಖ್ಯೆಗೆ ಅನುಗುಣವಾಗಿ ಪೌರ ಕಾರ್ಮಿಕರ ಸಂಖ್ಯೆ ಹೆಚ್ಚಾಗಬೇಕಿದೆ.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ವನ್ಯಜೀವಿ-ಮಾನವ ಸಂಘರ್ಷ ತಹಬಂದಿಗೆ ಬಾರದಿದ್ದರೆ ಸಫಾರಿ ಬಂದ್: ಈಶ್ವರ ಖಂಡ್ರೆ

ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ಸಚಿವ ಭೈರತಿ ಸುರೇಶ್, ಶಾಸಕರಾದ ತನ್ವಿರ್ ಶೇಟ್, ಜಿ.ಟಿ. ದೇವೇಗೌಡ, ಹರೀಶ್ ಗೌಡ, ಪರಿಷತ್ ಸದಸ್ಯರಾದ ಯತಿಂದ್ರ ಸಿದ್ದರಾಮಯ್ಯ, ಹೆಚ್ ವಿಶ್ವನಾಥ್, ಡಾ. ತಿಮ್ಮಯ್ಯ ಸೇರಿದಂತೆ ಜಿಲ್ಲಾಡಳಿತದ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...