ಗೃಹ ಜ್ಯೋತಿ ಯೋಜನೆಗೂ ವಿದ್ಯುತ್ ದರ ಏರಿಕೆಗೂ ಯಾವುದೇ ಸಂಬಂಧವಿಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

Date:

  • ಕೈಗಾರಿಕೋದ್ಯಮಿಗಳ ಮನವಿಗೆ ಮುಖ್ಯಮಂತ್ರಿ ಸ್ಪಂದನೆ
  • ‘ಹಿಂದಿನ ಸರ್ಕಾರದ ಅವಧಿಯಲ್ಲಿ ವಿದ್ಯುತ್‌ ದರ ಏರಿಕೆ’

ಗೃಹ ಜ್ಯೋತಿ ಯೋಜನೆಗೂ ವಿದ್ಯುತ್ ದರ ಏರಿಕೆಗೂ ಯಾವುದೇ ಸಂಬಂಧವಿಲ್ಲ. ಗೃಹ ಜ್ಯೋತಿ ಹೊರೆಯನ್ನು ಕೈಗಾರಿಕೆಗಳ ಮೇಲೆ ಹಾಕಲಾಗಿದೆ ಎನ್ನುವುದು ಪರಮ ಸುಳ್ಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಅಧ್ಯಕ್ಷ ಬಿ ವಿ ಗೋಪಾಲ ರೆಡ್ಡಿ ಅವರ ನೇತೃತ್ವದ ನಿಯೋಗ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ ಸಂದರ್ಭದಲ್ಲಿ ಹಿಂದಿನ ಸರ್ಕಾರದ ಅವಧಿಯಲ್ಲಿ ವಿದ್ಯುತ್‌ ದರ ಏರಿಕೆ ಆಗಿದೆ ಎಂದು ಮನವರಿಕೆ ಮಾಡಿಸಿದರು.

“ಗೃಹ ಜ್ಯೋತಿ ಯೋಜನೆಯ ಹೊರೆಯನ್ನು ಯಾರ ಮೇಲೂ ಹಾಕುತ್ತಿಲ್ಲ. ಇದೊಂದು ತಪ್ಪು ಅಭಿಪ್ರಾಯ. ನಮ್ಮ ಸರ್ಕಾರ ವಿದ್ಯುತ್ ಶುಲ್ಕವನ್ನು ಏರಿಸುವ ನಿರ್ಧಾರ ಮಾಡಿಲ್ಲ. ಕೆಇಆರ್‌ಸಿಯು ಬೆಲೆ ಹೆಚ್ಚಳದ ನಿರ್ಧಾರವನ್ನು ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನವೇ ಕೈಗೊಂಡಿತ್ತು” ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಿಯೋಗವು ಮಾಡಿರುವ ಮನವಿಯ ಕುರಿತು ಆರ್ಥಿಕ, ಇಂಧನ ಇಲಾಖೆ, ಕಾಸಿಯಾ, ಎಫ್.ಕೆ.ಸಿ.ಸಿ ಐ ಅವರೊಂದಿಗೆ ಪ್ರತ್ಯೇಕ ಸಭೆ ಕರೆದು ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಇದೇ ವೇಳೆ ತಿಳಿಸಿದರು.

ಈ ಸುದ್ದಿ ಓದಿದದ್ದೀರಾ? ಗೃಹ ಸಚಿವರಿಗೆ ಕೆಲಸದ ಒತ್ತಡ ಜಾಸ್ತಿಯಾಗಿ ಖಾತೆಯನ್ನು ಮರಿ ಖರ್ಗೆಗೆ ವಹಿಸಿದ್ದಾರೆಯೇ: ನಳಿನ್‌ ಕುಮಾರ್‌ ಪ್ರಶ್ನೆ

ಕೆ.ಇ.ಆರ್.ಸಿ ತನ್ನ ಸುಂಕದ ಆದೇಶದಲ್ಲಿ ಉದ್ಯಮ ವಲಯಕ್ಕೆ ವಿದ್ಯುತ್ ದರವನ್ನು ಹೆಚ್ಚಿಸಿದ್ದು, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಹಾಗೂ ಹೆಚ್.ಟಿ ಕೈಗಾರಿಕೆಗಳ ಮೇಲೆ ವಿಧಿಸುವ ಶೇ 9 ರಷ್ಟು ವಿದ್ಯುತ್ ತೆರಿಗೆಯನ್ನು ಶೇ 3 ರಷ್ಟು ಇಳಿಸಬೇಕು. ಇಂಧನ ಶುಲ್ಕದಲ್ಲಿ ರಿಯಾಯಿತಿ ನೀಡಲು ಹಾಗೂ ಇತರೆ ರಾಜ್ಯಗಳಲ್ಲಿ ಎಂ.ಎಸ್.ಎಂ.ಇ ನೀತಿ ಹಾಗೂ ಕಾಯ್ದೆ ಇರುವಂತೆ ರಾಜ್ಯದಲ್ಲಿಯೂ ಕಾಯ್ದೆ ರಚನೆ ಮಾಡುವಂತೆ ಮನವಿ ಮಾಡಿದರು.

ಇಂಧನ ಸಚಿವ ಕೆ ಜೆ ಜಾರ್ಜ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹ್ಮದ್, ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಎಫ್.ಕೆ.ಸಿ.ಸಿ.ಐ ಪದಾಧಿಕಾರಿಗಳಾದ ರಮೇಶ್ ಚಂದ್ರ ಲಾಹೋಟಿ, ಎಂ.ಜಿ.ಬಾಲಕೃಷ್ಣ, ಡಾ. ಪ್ರಸಾದ್, ಬಿ.ಟಿ. ಮನೋಹರ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...