ಗೃಹಲಕ್ಷ್ಮಿ | ಸ್ವತಂತ್ರ, ಸ್ವಾವಲಂಬಿ ಬದುಕಿಗೆ ಮಹಿಳೆಯರು ಪಾದಾರ್ಪಣೆ‌ ಮಾಡಲಿದ್ದಾರೆ: ಸಿಎಂ

Date:

  • ಮನೆ ಯಜಮಾನಿಗೆ 2000 ರೂ. ನೇರವಾಗಿ ವರ್ಗಾವಣೆ’
  • ‘ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಇಂದು ಚಾಲನೆ ಸಿಗಲಿದೆ’

ವೈಯಕ್ತಿಕ ಆಸೆ, ಆಕಾಂಕ್ಷೆ, ಅವಶ್ಯಕತೆಗಳನ್ನು ತ್ಯಾಗ ಮಾಡಿ ಕುಟುಂಬಕ್ಕಾಗಿ ತಮ್ಮ ಬದುಕನ್ನೇ ಸಮರ್ಪಿಸಿಕೊಂಡಿರುವ ನಾಡಿನ ಕೋಟ್ಯಂತರ ತಾಯಂದಿರು ಇಂದು ನಮ್ಮ “ಗೃಹಲಕ್ಷ್ಮಿ” ಯೋಜನೆಯಿಂದ ಸ್ವತಂತ್ರ, ಸ್ವಾವಲಂಬಿ ಬದುಕಿಗೆ ಪಾದಾರ್ಪಣೆ‌ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

“ಗೃಹಲಕ್ಷ್ಮಿ” ಯೋಜನೆ ಅನುಷ್ಠಾನ ಹಿನ್ನೆಲೆಯಲ್ಲಿ ಟ್ವೀಟ್‌ ಮಾಡಿರುವ ಅವರು, “ನಮ್ಮ ಸರ್ಕಾರ ರಾಜ್ಯದ ಪ್ರತಿಯೊಬ್ಬ ಮನೆ ಯಜಮಾನಿಯ ಬ್ಯಾಂಕ್ ಖಾತೆಗೆ 2000 ರೂಪಾಯಿಗಳನ್ನು ನೇರವಾಗಿ ವರ್ಗಾವಣೆ ಮಾಡಿ ನುಡಿದಂತೆ ನಡೆಯಲಿದೆ” ಎಂದಿದ್ದಾರೆ.

“ಇದೊಂದು ಐತಿಹಾಸಿಕ ದಿನ. ಕಾರ್ಯಕ್ರಮದ ಚಾಲನೆಗೆ ಇನ್ನೇನು ಕೆಲವೇ ನಿಮಿಷಗಳು ಉಳಿದಿರುವ ಈ ಹೊತ್ತಿನಲ್ಲಿ ನಾಡಿನ ತಾಯಂದಿರ ಮುಖದಲ್ಲಿ ಮೂಡುವ ನೆಮ್ಮದಿಯ ನಗೆ ಕಾಣಲು ಉತ್ಸುಕನಾಗಿದ್ದೇನೆ. ಮಹಿಳೆಯರ ಸಬಲೀಕರಣದಿಂದ ಬಲಿಷ್ಠ ಸಮಾಜ ನಿರ್ಮಾಣ. ಮಹಿಳಾ ಸಮಾನತೆಯಿಂದ ಸಮ‌ ಸಮಾಜ ಸ್ಥಾಪನೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರಕ್ಕೆ ನೂರು, ಸಮಸ್ಯೆ ನೂರಾರು

“ಕುಟುಂಬ ನಿರ್ವಹಣೆಯ ಹೊಣೆಹೊತ್ತ ನಾಡಿನ ಕೋಟಿಗೂ ಅಧಿಕ ಮಹಿಳೆಯರಿಗೆ ಆರ್ಥಿಕ ನೆರವು ನೀಡಿ, ಬೆಲೆಯೇರಿಕೆಯ ಸಂಕಷ್ಟಗಳ ನಡುವೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವ ಅವರ ಕನಸನ್ನು ಗೃಹಲಕ್ಷ್ಮಿ ಯೋಜನೆ ನನಸಾಗಿಸಲಿದೆ” ಎಂದು ತಿಳಿಸಿದ್ದಾರೆ.

ಬುಧವಾರ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಸಿಗಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯಸಿಎ, ಡಿಸಿಎಂ ಡಿಕೆ ಶಿವಕುಮಾರ್‌ ಹಾಗೂ ರಾಹುಲ್‌ ಗಾಂಧಿ ಭಾಗಿಯಾಗಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...