ಗುಂಡ್ಲುಪೇಟೆ | ಗುಂಪು ಬೇಸಾಯದಿಂದ ರಾಸಾಯನಿಕ ಮುಕ್ತ ಆಹಾರ ನೀಡಲು ಸಾಧ್ಯ: ಶ್ರೀರೂಪ

Date:

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕು, ಕಡತಾಳಕಟ್ಟೆಹುಂಡಿ (ಮೂಡ್ಲುಹುಂಡಿ) ಗ್ರಾಮದ ರೈತ ಮಹಾದೇವ ಪ್ರಸಾದ್ ರ ಭೂಮಿಯಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರುಸೇನೆ ಮತ್ತು ನಮ್ದು ರೈತೋತ್ಪಾದಕ ಕಂಪೆನಿ ವತಿಯಿಂದ ನಡೆದ ರೈತರ ಗುಂಪು ಬೇಸಾಯದ ಪ್ರಾತ್ಯಕ್ಷಿಕೆ ಉದ್ಘಾಟಸಿ ಮಾತನಾಡಿದ ಜಿಲ್ಲಾಧಿಕಾರಿ ಶ್ರೀರೂಪ, ‘ಗುಂಪು ಬೇಸಾಯದಿಂದ ರಾಸಾಯನಿಕ ಮುಕ್ತ ಆಹಾರ ನೀಡಲು ಸಾಧ್ಯ’ ಎಂದು ಹೇಳಿದರು.

ಗುಂಪು ಬೇಸಾಯ ಪ್ರಸ್ತುತ ಮಾದರಿ ಬೇಸಾಯವಾಗಿದ್ದು, ವಿಷಮುಕ್ತ ಆಹಾರ ಬೆಳೆವ ಸಲುವಾಗಿ ಕಬ್ಬು, ಬಾಳೆ, ತರಕಾರಿ, ಸೊಪ್ಪು, ಹಣ್ಣು, ಅರಿಶಿನ ಸೇರಿದಂತೆ ಹಲವು ಮಿಶ್ರಿತ ಬೆಳೆ ಬೆಳೆದು, ತಮ್ಮ ಅಗತ್ಯತೆ ಪೂರೈಸಿಕೊಳ್ಳುವುದರ ಜತೆಗೆ ಆರ್ಥಿಕವಾಗಿ ಉಳಿದ ಆಹಾರ ಪದಾರ್ಥಗಳನ್ನು ಮೌಲ್ಯವರ್ಧನೆಯ ಮೂಲಕ ನೇರ ಮಾರುಕಟ್ಟೆ ಸೃಷ್ಟಿಸಿ ಮಾರಾಟ ಮಾಡಬಹುದು. ಇದರಿಂದ ಹೆಚ್ಚು ಲಾಭಗಳಿಸಲು ಸಾಧ್ಯವಾಗುತ್ತದೆ, ರೈತರು ಸಹ ಸದೃಢರಾಗಬಹುದು ಎಂದು ಹೇಳಿದರು.

ಕೊರೋನ ಸಂದರ್ಭ ಸಾಕಷ್ಟು ಜನರಿಗೆ ಪಾಠ ಕಲಿಸಿದೆ. ಊರು ಬಿಟ್ಟು ಪಟ್ಟಣ ಸೇರಿದ್ದವರು. ಮರಳಿ ಊರಿನ ಕಡೆಗೆ ಮರುಳುವಂತೆ ಮಾಡಿದಲ್ಲದೆ, ಕೃಷಿ ಕಡೆಗೆ ಮುಖ ಮಾಡುವಂತೆ ಮಾಡಿತ್ತು. ಯುವಜನರು ರಾಸಾಯನಿಕ ಮುಕ್ತ ಆಹಾರ ಬೆಳೆದು ಪಟ್ಟಣಗಳಿಗೆ ತಲುಪಿಸುವ ನಿಟ್ಟಿನಲ್ಲಿಯೂ ಅರಿವು ಮೂಡಿಸಿಕೊಳ್ಳುತ್ತಿರುವುದು ಉತ್ತಮವಾದ ಸಂದರ್ಭವಾಗಿ ಪರಿಣಮಿಸಿದೆ. ಕಲಿಕೆ, ಅರಿವು ಕೃಷಿಯಲ್ಲಿ ಮಹತ್ವದ ಪಾತ್ರ ನಿರ್ವಹಿಸಲಿದೆ. ನೈಸರ್ಗಿಕ ಉತ್ಪನ್ನಗಳಿಗೆ ಇತ್ತೀಚಿಗೆ ಹೆಚ್ಚು ಬೇಡಿಕೆ, ಮಹತ್ವ ಪಡೆದುಕೊಂಡಿರುವುದು ಸಹ ಆರೋಗ್ಯಕರ ಬೆಳವಣಿಗೆಯಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾವಯವ ಉತ್ಪನ್ನಗಳಿಗೆ ಗ್ರಾಹಕರ ಸಂಖ್ಯೆ ಹೆಚ್ಚಿರುವ ಕಾರಣ, ಆನ್ಲೈನ್ ಖರೀದಿ ವ್ಯವಸ್ಥೆ ಇರುವ ಹಿನ್ನಲೆಯಲ್ಲಿ ಮಾರುಕಟ್ಟೆ ಸಮಸ್ಯೆ ಅಷ್ಟಾಗಿ ಎದುರಾಗಿಲ್ಲ. ಆರ್ಥಿಕವಾಗಿ ಲಾಭಧಾಯಕ ಆಗಿರುವುದರಿಂದ ಉತ್ತೇಜನ ದೊರೆತಂತಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ರಾಜ್ಯ ಸಮಿತಿ ಸದಸ್ಯರಾದ ಹೊನ್ನೂರು ಪ್ರಕಾಶ್ ಮಾತನಾಡಿ, ಸ್ಥಳೀಯ ಬಿತ್ತನೆ ಬೀಜಗಳ ಸಂರಕ್ಷಣೆಗೆ ಒತ್ತು ಕೊಟ್ಟವರು ಪ್ರೊ. ನಂಜುಂಡಸ್ವಾಮಿ. ಅದೇ ಹಾದಿಯಲ್ಲಿ ಸಾಮೂಹಿಕ ನಾಯಕತ್ವದ ರೈತ ಸಂಘ ಗುಂಪು ಬೇಸಾಯದ ಮೂಲಕ ರಾಸಾಯನಿಕ ಮುಕ್ತ ಆಹಾರ ಬೆಳೆಯುವುದರ ಕಡೆಗೆ ಮುಂದಾಗಿದೆ. ಪ್ರತಿ ಗ್ರಾಮಗಳಲಿ ಸಂಘಟನೆಯು ಈ ಬಗ್ಗೆ ಗಮನ ಹರಿಸಿ ರೈತರಿಗೆ ಅರಿವು ಮೂಡಿಸುವ ಮೂಲಕ ಗುಂಪು ಬೇಸಾಯಕ್ಕೆ ಮುಂದಾಗುವುದು, ಆರ್ಥಿಕವಾಗಿ ಸ್ವಾವಲಂಬನೆ, ನೇರ ಮಾರುಕಟ್ಟೆ, ಮೌಲ್ಯವರ್ಧನೆ ತಿಳುವಳಿಕೆ ಮೂಲಕ ಹೆಚ್ಚಿನ ಲಾಭದ ಕಡೆಗೆ ಹೊರಳುವಂತೆ ಮಾಡುವುದಾಗಿದೆ ಎಂದು ಹೇಳಿದರು.

ಈ ವಿಶೇಷ ಸುದ್ದಿ ಓದಿದ್ದೀರಾ? ‘ಬೃಹತ್ ಮೈಸೂರು ಮಹಾನಗರ ಪಾಲಿಕೆ’ ಪ್ರಸ್ತಾವಿತ ಯೋಜನೆಯ ಸಾಧಕ-ಬಾಧಕಗಳೇನು?

ಕಾರ್ಯಕ್ರಮದಲ್ಲಿ ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಸುಷ್ಮಾ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಬಾಸ್ಕರ್ ನಾಯಕ್, ಡಿವೈಎಸ್ಪಿ ಸ್ನೇಹರಾಜ್, ತೆರಕಣಾಂಬಿ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಎಂ. ಮಹೇಶ್, ಮುಖಂಡರಾದ ಮಂಜು ಕಿರಣ್, ಅಮೃತಭೂಮಿಯ ಎ. ಬಿ. ನಾಗೇಶ್ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...