ಗುಬ್ಬಿ | ಕೊಪ್ಪ ಗ್ರಾಮದಲ್ಲಿ ರಾಜ್ಯ ರೈತ ಸಂಘದ ಗ್ರಾಮ ಶಾಖೆ ಉದ್ಘಾಟಿಸಿದ ಎ ಗೋವಿಂದರಾಜು

Date:

 ಕೇಂದ್ರ ಸರ್ಕಾರಕ್ಕಾಗಲಿ ರಾಜ್ಯ ಸರ್ಕಾರಕ್ಕಾಗಲಿ ರೈತರ ಹಿತ ಕಾಯುವ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಎ ಗೋವಿಂದರಾಜು ಕಿಡಿಕಾರಿದರು.

 ಗುಬ್ಬಿ   ತಾಲೂಕಿನ ಕಡಬ ಹೋಬಳಿಯ ಕೊಪ್ಪ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ನೂತನ ಗ್ರಾಮ ಶಾಖೆ ಉದ್ಘಾಟಿಸಿ ಮಾತನಾಡಿದ ಅವರು, ದೆಹಲಿಯಲ್ಲಿ ರೈತರು ಮಾಡಿದ್ದ ನಿರಂತರ ಹೋರಾಟದಿಂದಾಗಿ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಹಿಂಪಡೆದಿತ್ತು. ಆದರೆ ಈಗ ರೈತನ ಪಂಪ್ ಸೆಟ್ ಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಸಲು ಹೊರಟಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ರೈತರ ಜೇಬಿಗೆ ಕತ್ತರಿಯನ್ನು ಹಾಕುತ್ತಿದೆ. ಈ ಬೆಳವಣಿಗೆಯ ಬಗ್ಗೆ ರೈತರು ಧ್ವನಿಯೆತ್ತಬೇಕಿದೆ. ಇಂದು ಕೊಪ್ಪ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಗ್ರಾಮ ಶಾಖೆಯ ಸ್ಥಾಪನೆಯಾಗಿರುವುದು ರೈತರನ್ನು ಸಂಘಟಿಸುವುದು ಅನಿವಾರ್ಯವಾಗಿದೆ ಹಾಗೂ ಕೃಷಿ ಸಂಕಷ್ಟದಲ್ಲಿದೆ. ರೈತರು ಬೆಳೆದ ಕೃಷಿ ಉತ್ಪನ್ನಗಳಿಗೆ ಸರ್ಕಾರ ಬೆಂಬಲ ಬೆಲೆಯನ್ನು ನೀಡಿದರೆ ರೈತರು ಸಾಲಗಾರಾಗುವ ಅವಶ್ಯಕತೆ ಇರುವುದಿಲ್ಲ. ರೈತರು ಬೆಳೆದ ಬೆಳೆಗಳಿಗೆ ಸರ್ಕಾರ ಉತ್ತಮ ಬೆಲೆ ನಿಗದಿ ಮಾಡಿದರೆ ರಾಷ್ಟ್ರದಲ್ಲಿ ಆರ್ಥಿಕತೆಯು ಹೆಚ್ಚಾಗುತ್ತದೆ. ಯಾವುದು ಸುಮ್ಮನೆ ನಮ್ಮ ಬಳಿ ಬರುವುದಿಲ್ಲ ಎಲ್ಲವನ್ನು ಹೋರಾಟದ ಮೂಲಕ ಚಳುವಳಿಯ ಮೂಲಕವೇ ಪಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ರೈತರು ಸಂಘಟಿತರಾದರೆ ಬಂಡವಾಳ ಶಾಹಿ ಸರ್ಕಾರಗಳನ್ನು ಎಚ್ಚರಿಸಬಹುದು ಎಂದು ತಿಳಿದರು.

1001090407

ರೈತ ಸಂಘದ ತಾಲೂಕು ಅಧ್ಯಕ್ಷ ವೆಂಕಟೇಗೌಡ ಮಾತನಾಡಿ ರೈತರು ಬೆಳೆದ ಬೆಳೆಗಳಿಗೆ ಮಾರುಕಟ್ಟೆಯಲ್ಲಿ ಮದ್ಯವರ್ತಿ ಬಂದು ಬೆಲೆ ನಿಗದಿ ಮಾಡುತ್ತಾನೆ. ರೈತರು ಬೆಳೆದ ಬೆಳೆಗಳಿಗೆ ರೈತನೇ ಬೆಲೆ ನಿಗದಿ ಮಾಡಿ ಮಾರಾಟ ಮಾಡಬೇಕು. ಇದರಿಂದ ರೈತರ ಜೀವನ ಮಟ್ಟ ಹಾಗೂ ಆರ್ಥಿಕತೆ ಸುಧಾರಿಸುತ್ತದೆ. ಇಂದು ಜನರು ಆರಿಸಿರುವ ಸರ್ಕಾರಗಳು ನಗರಗಳನ್ನು ವೈಭವೀಕರಿಸುತ್ತಿವೆ. ನಗರಗಳ ಅಭಿವೃದ್ಧಿಗೆ ಆದ್ಯತೆ ನೀಡುತ್ತಿವೆ ಯುವಕರು ಕೃಷಿ ಮಾಡುವುದನ್ನು ಬಿಟ್ಟು ನಗರಗಳತ್ತ ವಲಸೆ ಹೋಗುತ್ತಿದ್ದಾರೆ ಇದನ್ನು ಮನಗಂಡು ಸರ್ಕಾರಗಳು ಹಳ್ಳಿಗಳ ಅಭಿವೃದ್ಧಿಗೆ ಹೆಚ್ಚು ಹೆಚ್ಚು ಯೋಜನೆಗಳನ್ನು ರೂಪಿಸಬೇಕಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ಸಂದರ್ಭದಲ್ಲಿ ರೈತ ಸಂಘದ ಕಾರ್ಯಾಧ್ಯಕ್ಷ ಗುರು ಚನ್ನಬಸಪ್ಪ, ಪ್ರಧಾನ ಕಾರ್ಯದರ್ಶಿ ಸಿ ಜಿ ಲೋಕೇಶ್, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಗಿರಿಜಮ್ಮ, ಪಿ ಟಿ ಕುಮಾರ್, ಸಿದ್ದಲಿಂಗಪ್ಪ,

ರೈತ ಸಂಘದ ತಾಲ್ಲೂಕು ಉಪಾಧ್ಯಕ್ಷ ಬಸವರಾಜಪ್ಪ ಹೋಬಳಿ ಅಧ್ಯಕ್ಷ ಯತೀಶ್ ವೆಂಕಟೇಶ್, ಲೋಕೇಶ್, ಸೇರಿದಂತೆ ಕೊಪ್ಪ ಗ್ರಾಮ ಶಾಖೆಯ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...