ಗುಬ್ಬಿ | ಡಿವೈಡರ್ ಗೆ ಕಾರು ಡಿಕ್ಕಿ : 8 ವರ್ಷದ ಮಗು ಸಾವು

Date:

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದು 8 ವರ್ಷದ ಹೆಣ್ಣು ಮಗು ಶಾಲಿನಿ ಸ್ಥಳದಲ್ಲಿಯೇ ಮೃತಪಟ್ಟಿದ್ದು ಮತ್ತೊಂದು ಮಗು ಚಿಂತಾಜನಕ ಸ್ಥಿತಿಗೆ ತಲುಪಿರುವ ಹೃದಯ ವಿದ್ರಾವಕ ಘಟನೆ ಗುಬ್ಬಿ ತಾಲ್ಲೂಕಿನ ದೊಡ್ಡಗುಣಿ ಸಮೀಪದ ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ನಡೆದಿದೆ.

ಹೋಂಡೈ ವೆನ್ಯೂ ಹೆಸರಿನ ಕೆ ಎ 06 ಎಂ ಬಿ ಕಾರಿನಲ್ಲಿ ಚಾಲಕ ಮಲ್ಲಿಕಾರ್ಜುನಯ್ಯ ಮಕ್ಕಳಾದ ಶಾಲಿನಿ, ಬಸವೇಶ್, ಗಗನ್, ಕರಣ್, ಸೇರಿದಂತೆ ಶ್ರೇಯಸ್ ಪ್ರಯಾಣಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಓರ್ವ ಮಗುವಿನ ಸ್ಥಿತಿ ಗಂಭೀರವಾಗಿದ್ದು ಇನ್ನು 3 ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿದೆ ಜೊತೆಗೆ ಹಿಂಬದಿಯ ಕಾರಿನಲ್ಲಿ ಮಕ್ಕಳ ಪೋಷಕರು ಪ್ರಯಾಣ ಮಾಡುತ್ತಿದ್ದರು ಎನ್ನಲಾಗಿದೆ.

WhatsApp Image 2024 09 15 at 8.43.09 PM 1

5 ಮಕ್ಕಳ ಪೈಕಿ ಎಲ್ಲರೂ 8 ಮತ್ತು 5 ವರ್ಷದ ಮಕ್ಕಳಾಗಿದ್ದು 4 ಮಂದಿ ಗಂಡು ಮಕ್ಕಳು ಒಬ್ಬಳು ಮಾತ್ರ ಹೆಣ್ಣು ಮಗು ಆಗಿದ್ದು ಇವರೆಲ್ಲ ಗುಬ್ಬಿ ತಾಲ್ಲೋಕಿನ ಕೆ ಮತ್ತಿಘಟ್ಟ ಮತ್ತು ಕಲ್ಲೂರು ಕ್ರಾಸ್ ಗ್ರಾಮದವರಾಗಿದ್ದು ಮಕ್ಕಳನ್ನೆಲ್ಲ ಒಂದು ಕಾರಿನಲ್ಲಿ ಕೂರಿಸಿ ದೊಡ್ಡವರೆಲ್ಲ ಮತ್ತೊಂದು ಕಾರಿನಲ್ಲಿ ಪ್ರಯಾಣ ಬೆಳೆಸುತ್ತಿದ್ದ ಮನೆ ದೇವರಾದ ಕಾರೆಗುರ್ಚಿ ಬಳಿಯ ಗಂಗಾ ಕ್ಷೇತ್ರಕ್ಕೆ ಕುಟುಂಬದೊಂದಿಗೆ ತೆರಳಿ ದೇವರ ದರ್ಶನ ಪಡೆದು ವಾಪಸ್ ಊರಿಗೆ ಬರುವಾಗ ಈ ದುರ್ಘಟನೆ ಸಂಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನಾ ಸ್ಥಳಕ್ಕೆ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುಮಾರ್ ಕೆವಿ ಭೇಟಿ ನೀಡಿದ್ದು ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...