ಗುಬ್ಬಿ | ಕುರ್ಚಿಗಾಗಿ ಕಿತ್ತಾಡುವ ಕಾಂಗ್ರೆಸ್ ಸರ್ಕಾರಕ್ಕೆ ಸ್ಥಳೀಯ ಚುನಾವಣೆಗೆ ಧೈರ್ಯವಿಲ್ಲ : ನಿಖಿಲ್ ಕುಮಾರಸ್ವಾಮಿ

Date:

 ಕಳೆದೆರಡು ವರ್ಷದಿಂದ ಯಾವುದೇ ಅಬಿವೃದ್ದಿ ಸಾಕ್ಷಿ ಗುಡ್ಡೆ ಇಲ್ಲದ ಕಾಂಗ್ರೆಸ್ ಸರ್ಕಾರ ಕೇವಲ ಕುರ್ಚಿ ಉಳಿಸಿಕೊಳ್ಳಲು ಹಾಗೂ ಕಸಿದುಕೊಳ್ಳಲು ಸರ್ಕಸ್ ಮಾಡುತ್ತಿದೆ. ಈ ಮಧ್ಯೆ ಸ್ಥಳೀಯ ಚುನಾವಣೆ ನಡೆಸುವ ಧೈರ್ಯವಿಲ್ಲದಂತಾಗಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವ್ಯಂಗ್ಯವಾಡಿದರು.

ತಾಲ್ಲೂಕಿನ ಕಡಬ ಹೋಬಳಿ ಬೆಲವತ್ತ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶ್ರೀ ಭದ್ರಕಾಳಮ್ಮ, ಶ್ರೀ ವೀರಭದ್ರಸ್ವಾಮಿ ಮತ್ತು ಬಿಸಿಲು ಮಾರಮ್ಮದೇವಿ ದೇವಾಲಯ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಗ್ಯಾರಂಟಿ ಯೋಜನೆ ಹೆಸರಲ್ಲಿ ಸ್ವೇಚ್ಛಾಚಾರ ಲೂಟಿ ನಡೆದಿದೆ. ಉಳಿದ ಎರಡೂವರೆ ವರ್ಷದಲ್ಲಿ ಅಭಿವೃದ್ದಿ ಕೆಲಸ ಮಾಡುತ್ತಾರೆ ಎಂಬ ನಂಬಿಕೆ ಜನರಲ್ಲಿ ಇಲ್ಲವಾಗಿದೆ ಎಂದು ಕುಟುಕಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರ ಉಳಿಸಿಕೊಳ್ಳಲು ಕಿತ್ತಾಟ ನಡೆಸುತ್ತಿರುವುದು ಜನರಿಗೆ ತಿಳಿದಿದೆ. ಅಭಿವೃದ್ದಿ ಎಂಬುದು ಶೂನ್ಯ. ಹತ್ತು ರೂಪಾಯಿ ಕೂಡಾ ಕ್ಷೇತ್ರಗಳಿಗೆ ನೀಡಲಾಗುತ್ತಿಲ್ಲ. ಹತ್ತು ಕೋಟಿ ಎಂದು ಹೇಳಿದ್ದಷ್ಟೇ ಇನ್ನೂ ಯಾವ ಕೆಲಸಕ್ಕೂ ಚಾಲನೆ ಸಿಕ್ಕಿಲ್ಲ. ಆದರೆ ಜನರಿಗೆ ಮಂಕು ಬೂದಿ ಎರಚಲು ಕೇವಲ ಭರವಸೆ ನೀಡುತ್ತಾ ಕಾಂಗ್ರೆಸ್ ಸರ್ಕಾರ ಘೋಷಣೆಯ ಸರ್ಕಾರ ಎಂದು ಲೇವಡಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಧಾರ್ಮಿಕ ಕಾರ್ಯಕ್ರಮ ಪಕ್ಷಾತೀತವಾಗಿ ನಡೆದಿದೆ. ಬೆಲವತ್ತ ಗ್ರಾಮ ದೇವೇಗೌಡರು ಹಾಗೂ ಕುಮಾರಣ್ಣ ಅವರ ಅಭಿಮಾನಿಗಳ ಗ್ರಾಮವಾಗಿದೆ. ಇಲ್ಲಿನ ಅಭಿಮಾನಕ್ಕೆ ಕುಮಾರಣ್ಣ ದೆಹಲಿಯಲ್ಲಿ ಒತ್ತಡವಿದ್ದರೂ ನನ್ನನ್ನು ಕಳುಹಿಸಿಕೊಟ್ಟಿದ್ದಾರೆ ಎಂದ ಅವರು ಜೆಡಿಎಸ್ ಪಕ್ಷದ ಕಾರ್ಯಕರ್ತರು ಗುಬ್ಬಿ ಕ್ಷೇತ್ರದಲ್ಲಿ ಬಲಿಷ್ಠವಾಗಿ ಸಂಘಟನೆ ಮಾಡುತ್ತಿದ್ದಾರೆ. ಈ ಹಿಂದೆ ನಾಗರಾಜು ಅವರಿಗೆ 40 ಸಾವಿರ ಮತ ನೀಡಿದ್ದಾರೆ. ಯಾರೋ ಒಬ್ಬರಿಂದ ಪಕ್ಷ ನಡೆಯಲ್ಲ. ಸದೃಢ ಕಾರ್ಯಕರ್ತರು ಇಂದಿಗೂ ಕ್ಷೇತ್ರದಲ್ಲಿ ಓಡಾಟ ನಡೆಸಿದ್ದಾರೆ. ಕೆಲವು ಮಾತಿಗೆ ಉತ್ತರ ಕೊಡುವ ಸಮಯ ಸಮೀಪಿಸುತ್ತಿದೆ. ಮೈತ್ರಿ ಎಲ್ಲಡೆ ಬಲಗೊಂಡಿದೆ. ಇಲ್ಲೂ ಸಹ ನಾಗರಾಜು ಹಾಗೂ ಬಿಜೆಪಿ ಮುಖಂಡರು ಓಡಾಟ ನಡೆಸಿದ್ದಾರೆ. ಟಿಕೆಟ್ ವಿಚಾರ ವರಿಷ್ಠರು ಚುನಾವಣಾ ಸಮಯದಲ್ಲಿ ಹೇಳುತ್ತಾರೆ ಎಂದರು.

ಜೆಡಿಎಸ್ ಮುಖಂಡ ಬಿ.ಎಸ್.ನಾಗರಾಜು ಮಾತನಾಡಿ ಬೆಲವತ್ತ ಗ್ರಾಮದಲ್ಲಿ ದೇವೇಗೌಡರು ಹಾಗೂ ಕುಮಾರಣ್ಣ ಅವರ ಅಭಿಮಾನಿಗಳು ಹೆಚ್ಚಿದ್ದಾರೆ. ಈ ಹಿಂದೆ ದೇವೇಗೌಡರು ಈ ಗ್ರಾಮಕ್ಕೆ ಬಂದಿದ್ದರು. ಈ ಬಾರಿಯೂ ಅಪ್ಪಾಜಿ ಅವರನ್ನು ಕರೆತರಲು ಪ್ರಯತ್ನ ನಡೆಯಿತು. ಆರೋಗ್ಯ ಸಮಸ್ಯೆ ಹಿನ್ನಲೆ ನಿಖಿಲ್ ಅವರೇ ಆಗಮಿಸಿದ್ದಾರೆ. ಇಲ್ಲಿನ ರೈತರ ಅಭಿಮಾನಕ್ಕೆ ತಕ್ಕಂತೆ ದೇವೇಗೌಡರ ಕುಟುಂಬ ಗ್ರಾಮದ ಮೇಲೆ ಪ್ರೀತಿ ಇಟ್ಟುಕೊಂಡಿದೆ. ಜೆಡಿಎಸ್ ಪಕ್ಷಕ್ಕೆ ಹೆಚ್ಚಿನ ಆಶೀರ್ವಾದ ಮಾಡುವ ಗ್ರಾಮಕ್ಕೆ ಕುಮಾರಣ್ಣ ಮುಂದಿನ ದಿನಗಳಲ್ಲಿ ಆಗಮಿಸುತ್ತಾರೆ ಎಂದರು.

ಇದೇ ಸಂದರ್ಭದಲ್ಲಿ ಬಿ.ಕೋಡಿಹಳ್ಳಿ ಮಠದ ಶ್ರೀ ಬಸವ ಬೃಂಗೇಶ್ವರ ಸ್ವಾಮೀಜಿ, ತೆವಡೇಹಳ್ಳಿ ಶ್ರೀ ಗೋಸಲ ಚನ್ನಬಸವೇಶ್ವರ ಸ್ವಾಮೀಜಿ, ಜೆಡಿಎಸ್ ಜಿಲ್ಲಾಧ್ಯಕ್ಷ ಆರ್ .ಸಿ.ಅಂಜಿನಪ್ಪ, ಮುಖಂಡರಾದ ಕಳ್ಳಿಪಾಳ್ಯ ಲೋಕೇಶ್, ಜಿ.ಎನ್.ಬೆಟ್ಟಸ್ವಾಮಿ, ಜಿ.ಡಿ.ಸುರೇಶಗೌಡ, ಸಿದ್ದಗಂಗಮ್ಮ, ಜಿಪಂ ಮಾಜಿ ಸದಸ್ಯೆ ಗೌರಮ್ಮ, ವೀರೇಶ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...