ಗುಬ್ಬಿ | ನಾಗರಿಕ ಹಕ್ಕುಗಳ ಮೌಲ್ಯ ತಿಳಿಸುವ ಸಂವಿಧಾನ : ಪಿಡಿಒ ಕೆ.ಎಂ.ಶೇಖರ್

Date:

 ರಾಷ್ಟ್ರದ ಪ್ರಜಾಸತ್ತಾತ್ಮಕ ಮೌಲ್ಯಗಳು ಹಾಗೂ ನಾಗರಿಕರ ಹಕ್ಕುಗಳ ಬಗ್ಗೆ ತಿಳಿದು ನಡೆಯಲು ಪ್ರತಿ ಪ್ರಜೆಗೂ ನ್ಯಾಯ, ಸ್ವಾತಂತ್ರ್ಯ, ಸಮಾನತೆ ಎಂಬ ಮೌಲ್ಯಗಳನ್ನು ನೆನಪಿಸಿಕೊಳ್ಳುವ ದಿನವಾಗಿ ಸಂವಿಧಾನ ದಿನಾಚರಣೆ ಮಾಡಲಾಗುತ್ತಿದೆ ಎಂದು ಎಂ.ಎಚ್.ಪಟ್ಟಣ ಗ್ರಾಪಂ ಪಿಡಿಒ ಕೆ.ಎಂ.ಶೇಖರ್ ತಿಳಿಸಿದರು.

ತಾಲ್ಲೂಕಿನ ಕಸಬ ಹೋಬಳಿ ಎಂ.ಎಚ್.ಪಟ್ಟಣ ಗ್ರಾಮ ಪಂಚಾಯಿತಿಯಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆಯಲ್ಲಿ ಮಾತನಾಡಿದ ಅವರು ಸಂವಿಧಾನ ದಿವಸ ಅಥವಾ ಭಾರತದ ಸಂವಿಧಾನ ದಿನವನ್ನು ಪ್ರತಿ ವರ್ಷ ನವೆಂಬರ್‌ 26 ರಂದು ಆಚರಿಸಲಾಗುತ್ತಿದೆ ಎಂದರು.

1949 ನವಂಬರ್ 26 ರಂದು ಭಾರತದ ಸಂವಿಧಾನ ಸಭೆಯು ನಮ್ಮ ಸಂವಿಧಾನವನ್ನು ಸ್ವೀಕರಿಸಿತು. ಇದು ವಿಶ್ವದ ಅತ್ಯಂತ ದೊಡ್ಡ ಮತ್ತು ಸಮಗ್ರ ಸಂವಿಧಾನಗಳಲ್ಲಿ ಒಂದಾಗಿದೆ. ದೇಶದ ಎಲ್ಲಾ ನಾಗರಿಕರಿಗೂ ಸಮಾನತೆ ಸಾರುವ ಕಾನೂನು ಚೌಕಟ್ಟು ಮಾನವೀಯ ಮೌಲ್ಯದೊಂದಿಗೆ ರಚಿತವಾಗಿದೆ. ವಿಶ್ವವೇ ಬೆರಗಾಗಿ ನೋಡುವ ಸಂವಿಧಾನ ರಚಿಸಿದ ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶಗಳನ್ನು ನಮ್ಮ ಯುವಕರು ಪಾಲಿಸಬೇಕಿದೆ. ಎಲ್ಲಾ ಧರ್ಮ ಜಾತಿ ಜನಾಂಗಕ್ಕೆ ಒಪ್ಪುವ ಸಂವಿಧಾನ ನಮ್ಮ ಮಹಾ ಗ್ರಂಥ ಎನ್ನಲಾಗುತ್ತಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಗ್ರಾಪಂ ಸದಸ್ಯ ಗಂಗಾಧರಯ್ಯ, ಎಸ್ ಡಿಎ ಗೀತಾ, ಅಂಗನವಾಡಿ ಕಾರ್ಯಕರ್ತೆ ರಾಧಾಮಣಿ, ಆರೋಗ್ಯ ಕಾರ್ಯಕರ್ತೆ ಜಯಶ್ರೀ ಹಾಗೂ ಗ್ರಾಮ ಪಂಚಾಯತಿ ಎಲ್ಲಾ ಸಿಬ್ಬಂದಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...