ಗುಬ್ಬಿ | ಒಳಮೀಸಲಾತಿ ಜಾರಿಗೆ ದಸಂಸ ಒತ್ತಾಯ

Date:

ಜಾತಿಯ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹಂಚಿಕೆ ಮಾಡಬೇಕೆಂಬುದು ಅಂಬೇಡ್ಕರ್ ಅವರ ಸಂವಿಧಾನದ ಆಶಯವಾಗಿತ್ತು. ಅದಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರ ಕೂಡಲೇ ಒಳ ಮೀಸಲಾತಿಯನ್ನು ಜಾರಿ ಮಾಡಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ವೆಂಕಟೇಶ್ ಒತ್ತಾಯಿಸಿದರು. 

ಗುಬ್ಬಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,  ಪ್ರೊಫೆಸರ್ ಬಿ ಕೃಷ್ಣಪ್ಪ ಅವರ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಕಳೆದ 30 ವರ್ಷಗಳಿಂದ ಒಳ ಮೀಸಲಾತಿಗಾಗಿ ಲಕ್ಷಾಂತರ ಜನರು ಹೋರಾಟ ಮಾಡುತ್ತಾ ಬಂದಿದ್ದಾರೆ, ರಾಜ್ಯ ಸರ್ಕಾರ ಒಳ ಮೀಸಲಾತಿಯನ್ನು ಜಾರಿ ಮಾಡಿ ಸಾಮಾಜಿಕ ನ್ಯಾಯವನ್ನು ಒದಗಿಸಬೇಕು. ಕೆಲವು ಸಮುದಾಯಗಳು ಜಾತಿಗಣತಿಯನ್ನು ವಿರೋಧಿಸುತ್ತಿವೆ. ಜಾತಿಗಣತಿ ನಡೆದರೆ ದಲಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ದೊರಕುತ್ತದೆ ಎಂದ ಅವರು ಹತ್ತು ವರ್ಷಗಳ ಹಿಂದೆ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ಸವರ್ಣಿಯರಿಂದ ದಲಿತರ ಮೇಲೆ ಶೋಷಣೆ, ದಬ್ಬಾಳಿಕೆ ನಡೆದಿತ್ತು. ಈಗ ಕೊಪ್ಪಳ ಜಿಲ್ಲಾ ನ್ಯಾಯಾಲಯ ಅವರ ಮೇಲೆ ಐತಿಹಾಸಿಕ ತೀರ್ಪು ನೀಡಿದೆ ಈ ತೀರ್ಪನ್ನು ನಾವು ಗೌರವಿಸುತ್ತೇವೆ ಹಾಗೂ ಸ್ವಾಗತಿಸುತ್ತೇವೆ ಎಂದು ತಿಳಿಸಿದರು.

ಡಿಎಸ್ಎಸ್ ರಾಜ್ಯ ಸಮಿತಿಯ ಸಂಘಟನಾ ಸಂಚಾಲಕ ನೆಲಮಂಗಲ ಬಸವರಾಜು ಮಾತನಾಡಿ ಪ್ರೊ ಬಿ ಕೃಷ್ಣಪ್ಪನವರು ಡಿಎಸ್ಎಸ್ ಸಂಘಟನೆ ಸ್ಥಾಪಿಸುವ ಮೂಲಕ ಹೋರಾಟದ ಹಾದಿಯನ್ನು ಹಾಕಿ ಕೊಟ್ಟಿದ್ದು ರಾಜ್ಯ ಸಂಚಾಲಕರಾದ ಎಂ ಗುರುಮೂರ್ತಿಯವರ ಮಾರ್ಗದರ್ಶನದಲ್ಲಿ ಪ್ರತಿಯೊಬ್ಬರು ಸಂಘಟನೆ ಮಾಡುವ ಮೂಲಕ ಸಂಘಟನೆಗೆ ಹೆಚ್ಚಿನ ಶಕ್ತಿ ತುಂಬಬೇಕು ಎಂದು ಕರೆಕೊಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಡಿಎಸ್ಎಸ್ ಬೆಂಗಳೂರು ಜಿಲ್ಲಾ ಸಂಚಾಲಕ ರಾಮು, ತಾಲ್ಲೂಕು ಸಂಚಾಲಕ ಮಾರಶೆಟ್ಟಿಹಳ್ಳಿ ಬಸವರಾಜು, 

ಬಾಬು ಜಗಜೀವನ್ ರಾಮ್ ಆದಿಜಾಂಬವ ಯುವ ಬ್ರಿಗೇಡ್ ಅಧ್ಯಕ್ಷ ಗುಬ್ಬಿ ಬಸವರಾಜು,

ಸಂಘಟನಾ ಸಂಚಾಲಕ ಹರಿವೇಸಂದ್ರ ಕೃಷ್ಣಪ್ಪ, 

 ಕುಂದುಕೊರೆತೆ ವಿಭಾಗ ಅಧ್ಯಕ್ಷ ಸಿ ಎಸ್ ಪುರ ಬೆಟ್ಟಸ್ವಾಮಿ, ನರೇಂದ್ರಕುಮಾರ್, ಸುರೇಶ್ ಕುಂದರನಹಳ್ಳಿ, ಶಿವರಾಜ್ ಹಂಡನಹಳ್ಳಿ, ನರಸಿಂಹಮೂರ್ತಿ ಸೇರಿದಂತೆ ಡಿಎಸ್ಎಸ್ ಮುಖಂಡರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...