ಗುಬ್ಬಿ | ಕಂದಾಯ ಗ್ರಾಮ ರಚನೆಗೆ ದಾಖಲಾತಿ ಸಿದ್ದ : ಶಾಸಕ ಎಸ್.ಆರ್.ಶ್ರೀನಿವಾಸ್

Date:

 ಸರ್ಕಾರಿ ಜಮೀನು ಹಾಗೆಯೇ ಇಡುವಳಿ ಜಮೀನಿನಲ್ಲೂ ಸೃಷ್ಟಿಯಾಗಿದ್ದ ಮಜರೆ ಗ್ರಾಮಗಳನ್ನು ಕಂದಾಯ ಗ್ರಾಮವಾಗಿ ರಚನೆ ಮಾಡಲು ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪಟ್ಟ ಎರಡು ತಿಂಗಳ ಶ್ರಮದ ಫಲವಾಗಿ 300 ಕ್ಕೂ ಅಧಿಕ ಕಂದಾಯ ಗ್ರಾಮ ರಚನೆಯಾಗಲಿದೆ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದರು.

ತಾಲ್ಲೂಕಿನ ಚೇಳೂರು ಗ್ರಾಮದಲ್ಲಿ ನಿರ್ಮಿತಿ ಕೇಂದ್ರ ಕಟ್ಟಿದ ನೂತನ ನಾಡ ಕಚೇರಿ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು ದಾಖಲೆಗಳ ಸಂಗ್ರಹಕ್ಕೆ ಕಂದಾಯ ಇಲಾಖೆ ಎಲ್ಲಾ ಸಿಬ್ಬಂದಿಗಳು ಪಟ್ಟ ಶ್ರಮ ಸಾಕಷ್ಟಿದೆ. ರೈತರು ದಾಖಲೆ ಒದಗಿಸುವಲ್ಲಿ ವಿಳಂಬ ಮಾಡಿದರು. ಮಜರೆ ಗ್ರಾಮಗಳು, ಕಾಲೋನಿಗಳು ದಾಖಲೆ ಒದಗಿಸುವಲ್ಲಿ ಸಹಕಾರ ನೀಡಬೇಕು ಎಂದರು.

ತಾಲ್ಲೂಕಿನಲ್ಲಿ ಸಾರ್ವಜನಿಕರಿಗೆ ಹತ್ತಿರವಾಗಿ ಸಿಗುವ ನಾನು ಅಧಿಕಾರಿಗಳ ಸಂಪರ್ಕದಲ್ಲಿದ್ದೇನೆ. ಕಟ್ಟಕಡೆಯ ವ್ಯಕ್ತಿಗೂ ನೇರ ಸಿಗುವ ಮೂಲಕ ಅವರ ಸಮಸ್ಯೆ ಆಲಿಸಿದ್ದೇನೆ. ಅಧಿಕಾರಿಗಳು ಹಾಗೂ ಇಲಾಖೆಯ ದಾಖಲೆಗಳು ರೈತರಿಗೆ ಮನೆ ಬಾಗಿಲಿಗೆ ಸಿಗುವಂತೆ ಮಾಡಲು ನಾಡ ಕಚೇರಿ ಕಟ್ಟಲಾಗಿದೆ. ಉಳಿದಂತೆ ಕಡಬ, ನಿಟ್ಟೂರು ಹಾಗೂ ಕಸಬ ಹೋಬಳಿಗೆ ಕಟ್ಟಡಕ್ಕೆ ಜಾಗ ಗುರುತಿಸಲಾಗಿದೆ. ಶೀಘ್ರದಲ್ಲಿ ಕಟ್ಟಡ ನಿರ್ಮಾಣ ಆಗಲಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಸತಿ ಯೋಜನೆಯು ಕಳೆದ 7 ವರ್ಷದಿಂದ ಮನೆಗಳನ್ನು ನೀಡಿಲ್ಲ. ಈ ಬಾರಿ 4 ಸಾವಿರ ಮನೆಗಳು ಮಂಜೂರು ಆಗಲಿದೆ. ಪಂಚಾಯಿತಿಗಳಿಗೆ ಹಂಚಿಕೆ ಮಾಡಲಾಗುವುದು ಎಂದ ಅವರು ಚೇಳೂರು ಗ್ರಾಮದಲ್ಲಿ ಸರ್ಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಿ 30 ಹಾಸಿಗೆಯ ಹೈಟೆಕ್ ಆಸ್ಪತ್ರೆಗೆ ಮಂಜೂರಾತಿ ಸಿಗಲಿದೆ. ಈ ಜೊತೆಗೆ ಜಲ ಜೀವನ್ ಮಿಶನ್ ಯೋಜನೆ ಕೂಡಾ ಕಾಮಗಾರಿ ನಡೆಯಲಿದೆ. ಫುಟ್ ಪಾತ್ ಅಂಗಡಿಗಳ ತೆರವು ಮಾಡಲು ಸಾರ್ವಜನಿಕರಿಗೆ ತೊಂದರೆ ಆಗಿದ್ದಲ್ಲಿ ಮಾತ್ರ ಮಾಡಲು ಸೂಚಿಸಿದ್ದೇನೆ ಎಂದರು.

ಇದೇ ಸಂದರ್ಭದಲ್ಲಿ ನಾಡ ಕಚೇರಿಗೆ ಸ್ಥಳ ನೀಡಿದ ಗ್ರಾಮ ಪಂಚಾಯಿತಿ ಹಾಗೂ ಶ್ರಮಿಸಿದ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.

ವೇದಿಕೆಯಲ್ಲಿ ತಹಶೀಲ್ದಾರ್ ಆರತಿ.ಬಿ, ಗ್ರಾಪಂ ಉಪಾಧ್ಯಕ್ಷೆ ಸುಜಾತ, ಸದಸ್ಯೆ ಪದ್ಮ, ಉಪ ತಹಶೀಲ್ದಾರ್ ಆರ್.ಜಿ.ನಾಗಭೂಷಣ್, ಕಂದಾಯ ನಿರೀಕ್ಷಕ ಬಸವರಾಜ್, ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ತಾಲ್ಲೂಕು ಅಧ್ಯಕ್ಷೆ ಸುಮತಿ, ಗ್ರಾಮ ಲೆಕ್ಕಾಧಿಕಾರಿಗಳಾದ ಭಾನು, ಮಹೇಶ್, ತಾತಾನಾಯಕ್, ನಾಗಭೂಷಣ್, ಅನ್ಸರ್, ಶಿವಕುಮಾರಸ್ವಾಮಿ ಸೇರಿದಂತೆ ಸ್ಥಳೀಯ ಮುಖಂಡರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...