ಗುಬ್ಬಿ | ಶಿಕ್ಷಣ, ಸಮಾಜ ಒಂದೇ ನಾಣ್ಯದ ಎರಡು ಮುಖಗಳು : ಸುಧಾ ಬರಗೂರು

Date:

ಸಮಾಜವನ್ನು ಬದಲಿಸುವ ಶಕ್ತಿ ಶಿಕ್ಷಣಕ್ಕಿದೆ. ಉತ್ತಮ ಆರಂಭ ಸಿಗುವ ಶಿಕ್ಷಕ ವೃತ್ತಿ ಹೆಮ್ಮೆ ತರುತ್ತದೆ. ಸ್ವಾಸ್ಥ್ಯ ಸಮಾಜದ ನಿರ್ಮಾಣ ಶಿಕ್ಷಣ ಮಾಡುವ ನಿಟ್ಟಿನಲ್ಲಿ ಸಮಾಜ ಶಿಕ್ಷಣ ಎರಡೂ ಒಂದೇ ನಾಣ್ಯದ ಎರಡು ಮುಖಗಳು ಎಂದು ಹಾಸ್ಯ ಕಲಾವಿದೆ ಸುಧಾ ಬರಗೂರು ತಿಳಿಸಿದರು.

ಗುಬ್ಬಿ ಪಟ್ಟಣದ ಎವಿಕೆ ಸಮುದಾಯ ಭವನದಲ್ಲಿ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಶಿಕ್ಷಣ ಇಲಾಖೆ ಹಾಗೂ ತಾಲ್ಲೂಕು ಶಿಕ್ಷಕರ ದಿನಾಚರಣೆ ಸಮಿತಿ ಸಹಯೋಗದಲ್ಲಿ ನಡೆದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ 138 ನೇ ಜಯಂತೋತ್ಸವ ಅಂಗವಾಗಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದ ಅವರು ವೃತ್ತಿಯನ್ನು ಪ್ರೀತಿಸದಿದ್ದರೆ ಜಗತ್ತನ್ನು ಪ್ರೀತಿಸಲು ಸಾಧ್ಯವಿಲ್ಲ. ಘನತೆ ಗೌರವ ಸಿಗುವ ಶಿಕ್ಷಕ ವೃತ್ತಿಯನ್ನು ಮೊದಲು ಶಿಕ್ಷಕರು ಪ್ರೀತಿಸಬೇಕು ಎಂದು ತಿಳಿಸಿದರು.

ಹುಟ್ಟುಹಬ್ಬ ಆಚರಣೆ ಇತ್ತೀಚಿಗೆ ಯಾವ ರೀತಿ ಆಚರಿಸುತ್ತಾರೆ ಎಂಬುದು ಎಲ್ಲರಿಗೂ ತಿಳಿದ ವಿಚಾರ. ಆದರೆ ಸಮಾಜಕ್ಕೆ ಸಮರ್ಪಣೆ ಮಾಡುವ ನಿಟ್ಟಿನಲ್ಲಿ ರಾಧಾಕೃಷ್ಣನ್ ಅವರು ಶಿಕ್ಷಕರಿಗಾಗಿ ದಿನಾಚರಣೆ ಮಾಡುವ ಮೂಲಕ ದೇಶ ಕಟ್ಟುವ ಕಾಯಕ ಮಾಡುವ ಶಿಕ್ಷಕರು ಸದೃಢ ಸಮಾಜ ನಿರ್ಮಾಣ ಮಾಡುತ್ತಾರೆ ಎಂದ ಅವರು ಸರ್ಕಾರದ ಕಾರ್ಯಕ್ರಮಗಳಾದ ಗಣತಿ, ಚುನಾವಣೆ ಹೀಗೆ ಅನೇಕ ಕೆಲಸಗಳಿಗೆ ಭಾಗಿಯಾಗುವ ಶಿಕ್ಷಕರು ಒತ್ತಡದ ಮಧ್ಯೆ ಕೆಲಸ ಮಾಡುವ ಜೊತೆಗೆ ಇಡೀ ಗ್ರಾಮವೇ ಶಾಲೆಯ ಚಟುವಟಿಕೆ ಬಗ್ಗೆ ಗಮನ ಹರಿಸುತ್ತದೆ. ಇಂತಹ ಸವಾಲಿನ ನಡುವೆ ಹಳ್ಳಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಜವಾಬ್ದಾರಿ ಶಿಕ್ಷಕರಿಗೆ ಇದೆ. ಹಾಗಾಗಿ ತಮ್ಮ ವೃತ್ತಿಯನ್ನು ಗೌರವಿಸಿ ಕೆಲಸ ಮಾಡಿ ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
IMG 20250905 WA04341

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ನಿವೃತ್ತಿ ಶಿಕ್ಷಕರಿಗೆ ಸನ್ಮಾನಿಸಿದ ಶಾಸಕ ಎಸ್.ಆರ್.ಶ್ರೀನಿವಾಸ್ ಮಾತನಾಡಿ ದೇಶ ನಿರ್ಮಾಣ ಮಾಡುವ ಶಿಕ್ಷಕರು ತಮ್ಮ ಕರ್ತವ್ಯ ಮರೆಯಬಾರದು. ಭ್ರಷ್ಟಾಚಾರ ಮುಕ್ತ ಹಾಗೂ ಸಹಿತ ಸಮಾಜ ನಿರ್ಮಾಣ ಹೊಣೆ ಅವರ ಮೇಲಿದೆ. ಗುಣಮಟ್ಟದ ಶಿಕ್ಷಣಕ್ಕೆ ಸರ್ಕಾರ ಒತ್ತು ನೀಡುತ್ತಿದೆ. ಇಂತಹ ಸಮಯದಲ್ಲಿ ಈ ಬಾರಿ ಪರೀಕ್ಷೆಯ ಫಲಿತಾಂಶ ಐದನೇ ಸ್ಥಾನಕ್ಕಿಳಿದಿದ್ದು ಬೇಸರ ಮೂಡಿಸಿದೆ. ಪ್ರಸಕ್ತ ವರ್ಷದಲ್ಲಿ ಫಲಿತಾಂಶ ಹೆಚ್ಚಿಸುವ ಭರವಸೆ ನೀಡಬೇಕು ಎಂದು ಸಲಹೆ ನೀಡಿದರು.

ಸರಿಪಡಿಸಲಾಗದ ದುಸ್ಥಿತಿಗೆ ಸಮಾಜ ಹೋಗುತ್ತಿದೆ. ಶಿಕ್ಷಣ ಇಲಾಖೆ ಸರಿ ಪಡಿಸುವ ಜವಾಬ್ದಾರಿ ಹೊರಬೇಕಿದೆ. ಸರ್ಕಾರ ಅವಶ್ಯ ಇರುವ 70 ಸಾವಿರ ಶಿಕ್ಷಕರ ಹುದ್ದೆ ನೇಮಕಾತಿ ಮಾಡಬೇಕಿದೆ. ತಮಿಳುನಾಡಿನಲ್ಲಿ ಶಿಕ್ಷಣ ಇಲಾಖೆ ನಿವೃತ್ತಿ ಸಮೀಪದ ಶಿಕ್ಷಕರ ಸ್ಥಾನಕ್ಕೆ ಒಂದು ವರ್ಷದ ಮುಂಚಿತವಾಗಿ ಮತ್ತೋರ್ವ ಅರ್ಹ ಶಿಕ್ಷಕನ ನೇಮಕ ಆಗುತ್ತದೆ. ಈ ಮಾದರಿ ನಮ್ಮಲ್ಲಿ ಅಳವಡಿಸಬೇಕಿದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜ್ ಮಾತನಾಡಿ ಪವಿತ್ರ ವೃತ್ತಿ ಶಿಕ್ಷಕ ಹುದ್ದೆಗೆ ಗೌರವ ತರುವಲ್ಲಿ ಶ್ರಮಿಸಿ ಶೈಕ್ಷಣಿಕ ಮಟ್ಟ ಹೆಚ್ಚಿಸಿ ಉತ್ತಮ ಫಲಿತಾಂಶ ತರಲು ಬದ್ದರಾಗಬೇಕು. ಸರ್ಕಾರ ಒದಗಿಸುವ ಸವಲತ್ತು ಬಳಸಿ ಕೆಲಸ ಮಾಡಿದ್ದಲ್ಲಿ ಪೋಷಕರ ಕನಸಿಗೆ ನೀರೆರದಂತೆ ಆಗುತ್ತದೆ. ಬದ್ಧತೆ ಮೊದಲು ಬೆಳೆಸಿಕೊಳ್ಳಿ ಎಂದು ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರಿಗೆ, ಕ್ರೀಡಾಕೂಟದಲ್ಲಿ ವಿಜೇತ ಶಿಕ್ಷಕರಿಗೆ ಹಾಗೂ ತಾಲ್ಲೂಕು ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಗಳಿಸಿದ ಶಿಕ್ಷಕರಿಗೆ ಸನ್ಮಾನಿಸಿ ಗೌರವಿಸಲಾಯಿತು.

ವೇದಿಕೆಯಲ್ಲಿ ಪಪಂ ಅಧ್ಯಕ್ಷೆ ಆಯಿಷಾ ತಾಸೀನ್, ತಹಶೀಲ್ದಾರ್ ಆರತಿ.ಬಿ, ತಾಪಂ ಇಓ ಎಸ್.ಶಿವಪ್ರಕಾಶ್, ಬಿಆರ್ ಸಿ ಮಧುಸೂದನ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಜಗದೀಶ್, ದೈಹಿಕ ಶಿಕ್ಷಣ ಪರಿವೀಕ್ಷಕ ರಮೇಶ್, ನೋಡಲ್ ಅಧಿಕಾರಿ ಲೋಕೇಶ್, ಡಯಟ್ ಉಪನ್ಯಾಸಕಿ ಪದ್ಮಜಾ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಆರ್.ವೆಂಕಟೇಶ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಉಮೇಶ್, ತಾಲ್ಲೂಕು ಅಧ್ಯಕ್ಷ ಬಿ.ಸಿ.ಶಿವಣ್ಣ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಜಿ.ಮಂಜುನಾಥ್, ಕಸಾಪ ತಾಲ್ಲೂಕು ಅಧ್ಯಕ್ಷ ಎಚ್.ಸಿ.ಯತೀಶ್, ವಿವಿಧ ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಜಯಣ್ಣ, ಸಂಗಮೇಶ್, ರಾಮಚಂದ್ರ, ಕೆ.ಎಂ.ರವೀಶ್, ಎಂ.ಬಿ.ಕುಮಾರಸ್ವಾಮಿ, ರಾಮಕೃಷ್ಣಯ್ಯ, ಎಸ್.ವಿ.ಲಕ್ಷ್ಮಿ, ಸೇರಿದಂತೆ ಪಪಂ ಎಲ್ಲಾ ಸದಸ್ಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...