ಗುಬ್ಬಿ | ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತ ಸಂಘದಿಂದ ಗಟ್ಟಿ ಹೋರಾಟ : ರೈತ ಸಂಘದ ಜಿಲ್ಲಾಧ್ಯಕ್ಷ ಗೋವಿಂದರಾಜು

Date:

ರೈತರ ಸಮಸ್ಯೆ ಆಲಿಸಿದ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ಹಾಗೂ ರೈತರ ವಿದ್ಯುತ್ ಸಮಸ್ಯೆ, ನೀರಾವರಿ ಸಮಸ್ಯೆ, ಭೂ ಮಂಜೂರು ಹಾಗೂ ರೈತ ವಿರೋಧಿ ಕಾಯ್ದೆ ಹಿಂಪಡೆಯುವಂತೆ ಒತ್ತಾಯಿಸಿ ಶೀಘ್ರದಲ್ಲಿ ರೈತ ಸಂಘ ಸಾವಿರಾರು ರೈತರ ಜೊತೆಗೂಡಿ ಗಟ್ಟಿ ಹೋರಾಟ ನಡೆಸಲಿದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ರೈತರ ಸಭೆಯ ನಂತರ ಮಾತನಾಡಿದ ಅವರು ಪಾಕಿಸ್ತಾನದ ವಿರುದ್ಧ ಯುದ್ದ ನಡೆಯುತ್ತಿರುವ ಹಿನ್ನಲೆ ಹೋರಾಟವನ್ನು ಕೆಲ ದಿನಗಳ ಕಾಲ ಮುಂದೂಡಿ ನಂತರ ದಿನಾಂಕ ನಿಗದಿ ಮಾಡಿ ಬೃಹತ್ ಮಟ್ಟದ ಗಟ್ಟಿ ಹೋರಾಟ ಕೈಗೊಳ್ಳುತ್ತೇವೆ ಎಂದು ಹೇಳಿದರು.

ನಿರೀಕ್ಷೆಯಂತೆ ಯಾವುದೇ ಬದಲಾವಣೆ ತಾರದ ಕಾಂಗ್ರೆಸ್ ಸರ್ಕಾರ ಅಕ್ರಮ ಸಕ್ರಮ ಯೋಜನೆಯಲ್ಲಿ ರೈತರಿಗೆ ಯಾವ ಕೆಲಸ ಮಾಡಿಕೊಟ್ಟಿಲ್ಲ. ಬಗರ್ ಹುಕುಂ ಸಮಿತಿಯ ರೈತರ ಅರ್ಜಿ ವಜಾಗೊಳಿಸಿ ಹತ್ತಾರು ವರ್ಷದಿಂದ ಅನುಭವದಲ್ಲಿದ್ದ ರೈತರಿಗೆ ಅನ್ಯಾಯ ಮಾಡಿದ್ದೀರಿ, ಬೆಸ್ಕಾಂ ಕಚೇರಿಯತ್ತ ರೈತರು ಹೋಗಲು ಭಯ ಪಡುವ ಸ್ಥಿತಿ ತರಲಾಗಿದೆ. ಪರಿವರ್ತಕ ಅಳವಡಿಕೆಗೆ ಲಕ್ಷ ಲಕ್ಷ ಹಣ ತೆತ್ತೆಬೇಕಿದೆ. ಈ ಮೊದಲೇ ಇದ್ದ ಹಳೆಯ ನಿಯಮ ಪಾಲಿಸಿ ರೈತರಿಗೆ ಉಚಿತ ಪರಿವರ್ತಕ, ಕಂಬ, ತಂತಿಗಳನ್ನು ನೀಡಬೇಕು ಎಂದು ಆಗ್ರಹಿಸಿದ ಅವರು ರೈತರ ಪಂಪ್ ಸೆಟ್ ಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಕೆ ವಿಚಾರ ಕೈಬಿಡಬೇಕು. ರೈತರಿಗೆ ಈಗಲೇ ಬೆಳೆದ ಬೆಳೆಗೆ ವೈಜ್ಞಾನಿಕ ಮಾರುಕಟ್ಟೆ, ಬೆಲೆ ಎರಡೂ ಇಲ್ಲ. ಇರುವ ನೀರು ರೈತರಿಗೆ ಕೃಷಿಗೆ ಸಿಗುತ್ತಿಲ್ಲ. ಇಷ್ಟಾದರೂ ಸ್ಮಾರ್ಟ್ ಮೀಟರ್ ಅಳವಡಿಕೆ ಸರಿಯಲ್ಲ ಎಂದು ಗುಡುಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತುಮಕೂರು ಜಿಲ್ಲೆಯ ನಾಲ್ಕು ತಾಲ್ಲೂಕಿಗೆ ಜೀವನಾಡಿ ಹೇಮಾವತಿ ನೀರು ಮಾಗಡಿಯತ್ತ ಕದ್ದೊಯ್ಯುವ ಪ್ರಭಾವಿ ಸಚಿವರ ಹುನ್ನಾರ ರೈತರನ್ನು ಕೆರಳಿಸಿದೆ. ಅವೈಜ್ಞಾನಿಕವಾಗಿ ಪೈಪ್ ಲೈನ್ ನಿರ್ಮಿಸಿ ನೀರು ಕಳ್ಳತನ ಮಾಡುವ ಬಗ್ಗೆ ಈಗಾಗಲೇ ರೈತರು ಎಚ್ಚರಿಕೆ ನೀಡಿದ್ದರೂ ಕೆಲಸ ಮಾಡಲು ಅಧಿಕಾರಿಗಳು ಬರುತ್ತಿದ್ದಾರೆ. ಮುಂದಿನ ಆಗು ಹೋಗುಗಳಿಗೆ ಅಧಿಕಾರಿಗಳು ಹೊಣೆ ಆಗುತ್ತಾರೆ ಎಂದು ಎಚ್ಚರಿಸಿದ ಅವರು ಮುಖ್ಯ ನಾಲೆಯನ್ನು ಅತ್ಯಾಧುನಿಕವಾಗಿ ಮಾರ್ಪಾಡು ಮಾಡಲಾಗಿದೆ. ಕುಣಿಗಲ್ ಗೆ 3 ಟಿಎಂಸಿ ನೀರು ಹಾಗೂ ಮಾಗಡಿಗೆ 66 ಎಂಸಿಟಿಎಫ್ ಮುಖ್ಯ ನಾಲೆಯಲ್ಲಿ ಹರಿಸಿಕೊಳ್ಳಲಿ. ಈ ಬಗ್ಗೆ ಯಾವ ಶಾಸಕರು ಮಾತನಾಡುತ್ತಿಲ್ಲ. ಕಾಂಗ್ರೆಸ್ ಶಾಸಕರು, ಸಚಿವರು ಕೂಡಾ ತುಟಿ ಬಿಚ್ಚಿಲ್ಲ. ಈ ಮೌನವೇ ನಾಲ್ಕು ತಾಲ್ಲೂಕಿಗೆ ಮರಣ ಶಾಸನ ಆಗಲಿದೆ ಎಂದು ಎಚ್ಚರಿಸಿದರು.

ತುಮಕೂರು ಸಂಸದ ಹಾಗೂ ಕೇಂದ್ರದ ಸಚಿವ ಸೋಮಣ್ಣ ಅವರು ಲಿಂಕ್ ಕೆನಾಲ್ ಬಗ್ಗೆ ಮಾತನಾಡುತ್ತಿಲ್ಲ. ಈ ಎಲ್ಲಾ ವಿಚಾರ ಚೆನ್ನಾಗಿ ತಿಳಿದ ಮಾಜಿ ಸಚಿವ ಮಾಧುಸ್ವಾಮಿ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕಿದೆ ಎಂದ ಅವರು ಕಳೆದ ಹತ್ತು ವರ್ಷದಿಂದ ನೆನೆಗುದಿಗೆ ಬಿದ್ದಿರುವ ಹಾಗಲವಾಡಿ ಕೆರೆ, ಬಿಕ್ಕೆಗುಡ್ಡ ಕೆರೆ ಯೋಜನೆ ಮುಂದಿನ ಎರಡು ತಿಂಗಳಲ್ಲಿ ಪೂರ್ಣ ಗೊಳಿಸಿ ಈ ಭಾಗದ ರೈತರ ಹಿತ ಕಾಯಬೇಕು. ಹೀಗೆ ಜಿಲ್ಲೆಯ ಅನೇಕ ರೈತರ ಸಮಸ್ಯೆ ಜೊತೆಗೆ ದೊಡ್ಡ ಹೋರಾಟವನ್ನು ಶೀಘ್ರದಲ್ಲಿ ದಿನಾಂಕ ನಿಗದಿ ಮಾಡಿ ಸಾವಿರಾರು ರೈತರ ಕೂಗು ಸರ್ಕಾರಕ್ಕೆ ಕೇಳುವಂತೆ ಮಾಡುತ್ತೇವೆ ಎಂದರು.

ಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಂಕರಪ್ಪ, ತಾಲ್ಲೂಕು ಅಧ್ಯಕ್ಷ ಕೆ.ಎನ್.ವೆಂಕಟೇಗೌಡ, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸಿ.ಜಿ.ಲೋಕೇಶ್, ಶಿರಾ ತಾಲ್ಲೂಕಿನ ಕೆಂಚಪ್ಪ, ತುಮಕೂರು ತಾಲ್ಲೂಕಿನ ಬೊರೇಗೌಡ, ತುರುವೇಕೆರೆ ತಾಲ್ಲೂಕಿನ ಶ್ರೀನಿವಾಸ್, ಮಧುಗಿರಿ ತಾಲ್ಲೂಕಿನ ರಮೇಶ್, ಜಿಲ್ಲಾ ಮುಖಂಡ ದೊಡ್ಡ ಮಾಳಯ್ಯ, ನಾಗರತ್ನಮ್ಮ, ಯತೀಶ್, ಗುರುಚನ್ನಬಸವಣ್ಣ, ಮೋಹನ್, ಮಾದೇವಣ್ಣ, ಸತ್ತಿಗಪ್ಪ, ಜಯಣ್ಣ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...