ಗುಬ್ಬಿ | ಪರಿಸರ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಿ : ತಾಪಂ ಇಓ ಎಸ್.ಶಿವಪ್ರಕಾಶ್

Date:

ಗುಬ್ಬಿ ತಾಲ್ಲೂಕಿನ ಕಸಬಾ ಹೋಬಳಿ ಎಂ.ಎಚ್.ಪಟ್ಟಣ ಗ್ರಾಮ ಪಂಚಾಯಿತಿ ಸಹಯೋಗದಿಂದ ಏರ್ಪಡಿಸಿದ ಸ್ವಚ್ಛ ಈ ಸೇವಾ ಕಾರ್ಯಕ್ರಮವನ್ನು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಶಿವಪ್ರಕಾಶ್ ಉದ್ಘಾಟಿಸಿ ನಮ್ಮ ಸುತ್ತಲಿನ ಪರಿಸರದ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು ಎಂದು ಕರೆ ನೀಡಿದರು.

ಪಂಚಾಯಿತಿ ಆವರಣದಲ್ಲಿ ಸ್ವಚ್ಚತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶಾಲಾ ಮಕ್ಕಳ ಜೊತೆ ಗ್ರಾಮದಲ್ಲಿ ಸ್ವಚ್ಚತಾ ಬಗ್ಗೆ ಜಾಗೃತಿ ಜಾಥಾ ನಡೆಸಿ ತಾಲ್ಲೂಕಿನ 34 ಗ್ರಾಮ ಪಂಚಾಯಿತಿಯಲ್ಲಿ ಏಕ ಕಾಲಕ್ಕೆ ಸ್ವಚ್ಚೋತ್ಸವ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಲಾಗಿದೆ. ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲೂ ಸ್ವಚ್ಛತೆ ಬಗ್ಗೆ ಅರಿವು ಹಾಗೂ ಸಮುದಾಯ ಜೊತೆ ಸ್ವಚ್ಚತಾ ಕಾರ್ಯವನ್ನು ಹದಿನೈದು ದಿನಗಳ ಕಾಲ ಗಾಂಧಿ ಜಯಂತಿಯವರೆಗೆ ಪಾಕ್ಷಿಕ ಆಂದೋಲನ ರೀತಿ ನಡೆಸಲಾಗುವುದು ಎಂದರು.

1002066805

ನಮ್ಮ ಮನೆಯ ಸುತ್ತಮುತ್ತಲಿನ ವಾತಾವರಣವನ್ನು ಸ್ವಚ್ಛತೆಯಿಂದ ಕಾಪಾಡಿಕೊಂಡರೆ ಗ್ರಾಮವನ್ನೇ ಸ್ವಚ್ಛತೆಯಾಗಿ ಇಟ್ಟುಕೊಂಡಂತೆ ನಾವು ಪ್ರತಿದಿನ ಬಳಸುವ ಪ್ಲಾಸ್ಟಿಕ್ ನಮ್ಮ ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಮ ಬಗ್ಗೆ ಯಾರಿಗೂ ಮಾಹಿತಿ ಇಲ್ಲ ಪ್ಲಾಸ್ಟಿಕ್ ನಿಂದ ಕ್ಯಾನ್ಸರ್ ಸಹ ಬರಬಹುದು. ನಾವು ಮುಂದಿನ ಪೀಳಿಗೆಗೆ ಏನಾದರೂ ನೀಡುತ್ತೇವೆ ಎಂದರೆ ಉತ್ತಮ ಪರಿಸರ ಹಾಗೂ ಸ್ವಚ್ಛತೆ. ಈ ದಿನದಿಂದ ಗುಬ್ಬಿ ತಾಲೂಕಿನ ಎಲ್ಲಾ 34 ಗ್ರಾಮ ಪಂಚಾಯಿತಿಗಳಲ್ಲಿ ಸ್ವಚ್ಛ ಈ ಸೇವಾ ಕಾರ್ಯಕ್ರಮವನ್ನು ಆರಂಭ ಮಾಡಲಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಿಡಿಓ ಕೆ.ಎಂ.ಶೇಖರ್ ಮಾತನಾಡಿ ಆರೋಗ್ಯ ಗ್ರಾಮ ಎನಿಸಲು ಮೊದಲು ಉತ್ತಮ ಪರಿಸರ ಸೃಷ್ಟಿಯಾಗಬೇಕು. ದೈಹಿಕ ಮತ್ತು ಮಾನಸಿಕ ಆರೋಗ್ಯ ಸ್ವಾಸ್ಥ್ಯ ಸಮಾಜದಿಂದ ಸಿಗುತ್ತದೆ. ಈ ನಿಟ್ಟಿನಲ್ಲಿ ನಮ್ಮ ಮನೆ ಸುತ್ತಲಿನ ನೈರ್ಮಲ್ಯ ದೂರ ಮಾಡಬೇಕು. ಉತ್ತಮ ಪರಿಸರ ರೂಡಿಸುವುದು ನಮ್ಮ ಕೈಯಲ್ಲಿದೆ. ಪಂಚಾಯಿತಿ ನಡೆಸುವ ಪಾಕ್ಷಿಕ ಆಂದೋಲನ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಭಾಗವಹಿಸಿ ಆರೋಗ್ಯ ಸಮಾಜ ಕಟ್ಟೋಣ ಎಂದು ಕರೆ ನೀಡಿದರು.

ಈ ವೇಳೆ ಎಂ. ಎಚ್.ಪಟ್ಟಣ ಗ್ರಾಮ ಪಂಚಾಯಿತಿ ಸಮುದಾಯ ಭವನದ ಹತ್ತಿರ ಶಾಲಾ ಮಕ್ಕಳು ಮುಖ್ಯೋಪಾಧ್ಯಾಯರು ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದವರೊಂದಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು. ಮಕ್ಕಳಿಗೆ ಸಿಹಿಯನ್ನು ವಿತರಣೆ ಮಾಡಲಾಯಿತು. ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಸ್ವಚ್ಛತೆಯನ್ನು ಮಾಡಲಾಯಿತು.

ಈ ವೇಳೆ ಸಹಾಯಕ ನಿರ್ದೇಶಕ ಜೆ.ಬಿ.ರಂಗನಾಥ್, ಗ್ರಾಪಂ ಅಧ್ಯಕ್ಷ ಎಸ್.ಜೆ.ಯೋಗೀಶ್, ಉಪಾಧ್ಯಕ್ಷೆ ಭಾಗ್ಯಮ್ಮ, ಸರ್ವ ಸದಸ್ಯರು, ಐಇಸಿ ತಾಲ್ಲೂಕು ಸಂಯೋಜಕ ರಾಘವೇಂದ್ರ, ಗುಮಾಸ್ತೆ ಕೆ.ಎನ್.ಗೀತಾ ಹಾಗೂ ಪಂಚಾಯಿತಿ ಸಿಬ್ಬಂದಿ ವರ್ಗದವರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...