ಗುಬ್ಬಿ | ತೊರೇಹಳ್ಳಿ ಅಣೆಯಲ್ಲಿ ಕೊಚ್ಚಿ ಹೋದ ಗೂಡ್ಸ್ ವಾಹನ : ಹೊರ ಜಿಗಿದು ಪಾರಾದ ಚಾಲಕ

Date:

ಗುಬ್ಬಿ ತಾಲೂಕಿನ ಕಸಬ ಹೋಬಳಿ ತೊರೇಹಳ್ಳಿ ಗ್ರಾಮದ ಬಳಿಯ ಅಣೆಯ ಮೇಲಿನ ರಸ್ತೆ ಮುಳುಗಿ ತುಂಬಿ ಹರಿದ ಮಳೆ ನೀರಿಗೆ ಗೂಡ್ಸ್ ವಾಹನ ಕೊಚ್ಚಿ ಹೋಗಿ ತಕ್ಷಣ ಎಚ್ಚೆತ್ತ ಚಾಲಕ ಹೊರ ಬಂದು ಪಾರಾದ ಘಟನೆ ಸೋಮವಾರ ರಾತ್ರಿ ನಡೆದಿದೆ.

ಮೂಲ ಶಿಂಷಾ ನದಿಯ ಈ ಹರಿವು ಪ್ರತಿ ವರ್ಷ ಮಳೆಗಾಲದಲ್ಲಿ ನಾಲ್ಕು ತಿಂಗಳು ಅತ್ಯಧಿಕ ನೀರು ಹರಿಯುತ್ತದೆ. ತೊರೇಹಳ್ಳಿ ಅಣೆ ತುಂಬಿ ರಸ್ತೆ ಸಂಚಾರವೇ ಸ್ಥಗಿತಗೊಳ್ಳಲಿದೆ. ಚಿಕ್ಕನಾಯಕನಹಳ್ಳಿ ಭಾಗದಿಂದ ಕಾರ್ಯ ನಿಮಿತ್ತ ಬಂದ ಟಾಟಾ ಏಸ್ ಗೂಡ್ಸ್ ವಾಹನ ಮಾಮೂಲಿ ರಸ್ತೆ ಎಂದೇ ನೀರಿಗೆ ಇಳಿದು ರಭಸಕ್ಕೆ ಕೊಚ್ಚಿ ಹೋಗಿದೆ. ಚಾಲಕ ಕೂಡಲೇ ದಡಕ್ಕೆ ಧಾವಿಸಿ ಅಪಾಯದಿಂದ ಪಾರಾಗಿದ್ದಾನೆ. ರಾತ್ರಿ ಮುಳುಗಡೆಯಾದ ವಾಹನ ಬೆಳಿಗ್ಗೆ ಕ್ರೇನ್ ಮೂಲಕ ಮೇಲೆತ್ತುವ ಕೆಲಸ ಮಾಡಲಾಯಿತು.

ನೀರಿನಲ್ಲಿದ್ದ ವಾಹನ ಹುಡುಕಿ ಹೊರ ತೆಗೆಯಲು ಗ್ರಾಮಸ್ಥರ ಸಹಕಾರದಿಂದ ಸತತ ನಾಲ್ಕೈದು ಗಂಟೆ ಕಾಲ ಕಾರ್ಯಾಚರಣೆ ಮಾಡಲಾಯಿತು. ಈ ಹಿಂದೆ ಬೈಕ್ ಗಳು ಕೊಚ್ಚಿ ಹೋದ ಘಟನೆಗಳನ್ನು ಸ್ಮರಿಸಿದ ಸ್ಥಳೀಯರು ಅಣೆ ಪಕ್ಕದ ನಮ್ಮ ತೋಟಗಳಿಗೆ ಹೊಸಹಳ್ಳಿ ಮಾರ್ಗವಾಗಿ ಹತ್ತು ಕಿಮೀ ಬಳಸಿ ಬರುವಂತ ದುಸ್ಥಿತಿ ಎದುರಾಗಿದೆ ಎಂದು ಅಳಲು ತೋಡಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎರಡು ದಶಕದಿಂದ ತೊರೇಹಳ್ಳಿ ಅಣೆಗೆ ಸೇತುವೆ ನಿರ್ಮಿಸಿಕೊಡಲು ಸ್ಥಳೀಯರು ಬೇಡಿಕೆ ಸಲ್ಲಿಸುತ್ತಲೇ ಬಂದಿದ್ದರು. ಅಧಿಕಾರಿಗಳು, ಜನ ಪ್ರತಿನಿಧಿಗಳು ಇತ್ತ ಕಡೆ ಗಮನಹರಿಸಿಲ್ಲ. ಪ್ರತಿ ವರ್ಷ ನಾಲ್ಕು ತಿಂಗಳು ವಾಹನ ಸಂಚಾರ ಸ್ಥಗಿತವಾಗಿ ತೊರೇಹಳ್ಳಿ ಸೇರಿದಂತೆ ಮಡೇನಹಳ್ಳಿ, ಗೋಳೆನಹಳ್ಳಿ, ಹೊನ್ನಶೆಟ್ಟಿಹಳ್ಳಿ ಮಾರ್ಗವಾಗಿ ಕಡಬ ಸೇರುವ ಈ ಮಾರ್ಗ ಸಂಪೂರ್ಣ ಸ್ಥಗಿತವಾಗುತ್ತದೆ. ವಾಹನಗಳು ಕೊಚ್ಚಿ ಹೋಗುವ ಅಣೆ ರಸ್ತೆಗೆ ಕೂಡಲೇ ಸೇತುವೆ ನಿರ್ಮಿಸಿ ಪ್ರಾಣ ಹಾನಿಗಳು ಆಗುವ ಮುನ್ನ ಎಚ್ಚರಿಕೆ ವಹಿಸುವಂತೆ ಹೇರೂರು ಗ್ರಾಪಂ ಮಾಜಿ ಅಧ್ಯಕ್ಷ ಟಿ. ಬಿ. ರಂಗನಾಥ್ ಅಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...