ಗುಬ್ಬಿ | ಜೆಡಿಎಸ್ ಮುಖಂಡ ನಾಗರಾಜು ಹುಟ್ಟುಹಬ್ಬಕ್ಕೆ ಹೃದಯ ತಪಾಸಣಾ ಶಿಬಿರ

Date:

ಜೆಡಿಎಸ್ ಮುಖಂಡ ಬಿ.ಎಸ್.ನಾಗರಾಜು ಅವರ 50 ನೇ ಹುಟ್ಟುಹಬ್ಬದ ಪ್ರಯುಕ್ತ ಇದೇ ತಿಂಗಳ 10 ರಂದು ಗುಬ್ಬಿ ಪಟ್ಟಣದ ಬಂಗ್ಲೋಪಾಳ್ಯ ಶಾಲಾ ಮೈದಾನದಲ್ಲಿ ಹೃದಯ ತಪಾಸಣಾ ಶಿಬಿರವನ್ನು ಆಯೋಜಿಸಿ ಅರ್ಥಪೂರ್ಣ ಕಾರ್ಯಕ್ರಮ ಆಯೋಜನೆ ಸೇರಿದಂತೆ ಇತರೆ ಸಾಮಾಜಿಕ ಕಳಕಳಿಯ ಕೆಲಸ ಮಾಡುವ ನಾಗರಾಜು ಅಭಿಮಾನಿಗಳು ಹಾಗೂ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯ ಯೋಗಾನಂದಕುಮಾರ್ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚು ಮತಗಳಿಸಿ ಪರಾಭವಗೊಂಡ ನಾಗರಾಜು ಅವರು ತಾಲ್ಲೂಕಿನ ಮನೆ ಮಾತಾಗಿದ್ದಾರೆ. ಅವರ 50 ನೇ ಹುಟ್ಟುಹಬ್ಬ ಅದ್ದೂರಿ ಜೊತೆಗೆ ಸಮಾಜ ಸೇವಕಾರ್ಯದ ಮೂಲಕ ಗುರುತಿಸಿಕೊಳ್ಳಲು ಪ್ರಸ್ತುತ ಸಮಾಜದಲ್ಲಿ ಗಂಭೀರವಾದ ಹೃದಯಾಘಾತ ನಿದರ್ಶನಕ್ಕೆ ಸ್ಪಂದಿಸಿ ನಾಗರಾಜು ಅವರು ಸೂಚನೆ ಮೇರೆಗೆ ಹೃದಯ ತಪಾಸಣಾ ಶಿಬಿರ ಮೂಲಕ ಹುಟ್ಟುಹಬ್ಬ ಆಚರಿಸಲಾಗುತ್ತಿದೆ. ಈ ಶಿಬಿರಕ್ಕೆ ಹೆಸರಾಂತ ವೈದ್ಯರ ತಂಡ ಬರಲಿದೆ. ಜೊತೆಗೆ ಆರೋಗ್ಯ ಶಿಬಿರ ಹಾಗೂ ರಕ್ತದಾನ ಶಿಬಿರ ಕೂಡಾ ಜೆಡಿಎಸ್ ಕಾರ್ಯಕರ್ತರು ಆಯೋಜಿಸಿ ರಕ್ತದಾನ ಮಾಡಲಿದ್ದಾರೆ ಎಂದರು.

ಪಪಂ ಮಾಜಿ ಅಧ್ಯಕ್ಷ ಜಿ.ಡಿ.ಸುರೇಶಗೌಡ ಮಾತನಾಡಿ ಜೆಡಿಎಸ್ ಪಕ್ಷ ಸಂಘಟನೆಯ ಮೂಲಕ ತಾಲ್ಲೂಕಿನಲ್ಲಿ ತನ್ನದೇ ವರ್ಚಸ್ಸು ಬೆಳೆಸಿಕೊಂಡ ನಾಗರಾಜು ಅವರ ಹುಟ್ಟುಹಬ್ಬ ಅರ್ಥಪೂರ್ಣ ಆಚರಣೆಗೆ ಅವರ ಅಭಿಮಾನಿಗಳು ಸಕಲ ಸಿದ್ಧತೆ ನಡೆಸಿದ್ದಾರೆ. ಇದೇ ತಿಂಗಳ 10 ಗುರುವಾರ ಬೆಳಿಗ್ಗೆ ನಡೆಯುವ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಸೋಮಣ್ಣ ಸೇರಿದಂತೆ ಇನ್ನಿತರ ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಮೈತ್ರಿ ಹಿನ್ನಲೆ ಜೆಡಿಎಸ್ ಬಿಜೆಪಿ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜೆಡಿಎಸ್ ಮುಖಂಡ ಕಳ್ಳಿಪಾಳ್ಯ ಲೋಕೇಶ್ ಹಾಗೂ ಎಂ.ಜಿ.ಶಿವಲಿಂಗಯ್ಯ ಮಾತನಾಡಿ ಜೆಡಿಎಸ್ ವರಿಷ್ಟರಿಗೂ ಆಹ್ವಾನ ನೀಡಿದ್ದೇವೆ. ಕುಮಾರಣ್ಣ ಹಾಗೂ ನಿಖಿಲ್ ಕುಮಾರಸ್ವಾಮಿ ಬರುವ ಸಾಧ್ಯತೆ ಇದ್ದು ಎಲ್ಲಾ ರೀತಿಯಲ್ಲಿ ಜೆಡಿಎಸ್ ಕಾರ್ಯಕರ್ತರು ಸಜ್ಜಾಗಿದ್ದಾರೆ. ಸುಮಾರು 5 ಸಾವಿರ ಕಾರ್ಯಕರ್ತರ ನಡುವೆ ಹುಟ್ಟುಹಬ್ಬ ಆಚರಣೆ ಹಾಗೂ ರಕ್ತದಾನ ಮತ್ತು ಆರೋಗ್ಯ ಶಿಬಿರ ನಡೆಯಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಚನ್ನಬಸವಣ್ಣ, ವೆಂಕಟೇಶ್, ಪ್ರಕಾಶ್, ಜಿ.ಎಂ.ಶಿವಾನಂದ್, ಚಂದು ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...