ಗುಬ್ಬಿ | ರಾಷ್ಟ್ರ ಭಕ್ತಿ ಸಮರ್ಪಣೆಗೆ ಪ್ರತಿ ಮನೆ ಮೇಲೆ ರಾಷ್ಟ್ರ ಧ್ವಜ ಹಾರಿಸಿ : ಎಸ್ ಡಿ ದಿಲೀಪ್ ಕುಮಾರ್ ಕರೆ

Date:

ಸ್ವಾತಂತ್ರ್ಯೋತ್ಸವದ ಮುನ್ನ ದಿನ ಪ್ರತಿ ಮನೆ ಮನೆಗಳ ಮೇಲೆ ಭಾವೈಕ್ಯತೆ ಸಾರುವ ನಮ್ಮ ರಾಷ್ಟ್ರಧ್ವಜ ಹಾರಿಸುವ ಮೂಲಕ ಹರ್ ಘರ್ ತಿರಂಗ ಕಾರ್ಯಕ್ರಮಕ್ಕೆ ತಾಲೂಕಿನ ಜನತೆ ಕೈ ಜೋಡಿಸಬೇಕು ಎಂದು ಗುಬ್ಬಿ ಬಿಜೆಪಿ ಪಕ್ಷದ ಮುಖಂಡ ಎಸ್.ಡಿ.ದಿಲೀಪ್ ಕುಮಾರ್ ಕರೆ ನೀಡಿದರು.

ಗುಬ್ಬಿ ಪಟ್ಟಣದ ಬಿಜೆಪಿ ಪಕ್ಷದ ಕಚೇರಿಯಲ್ಲಿ ನಡೆದ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು ಬಿಜೆಪಿ ಪಕ್ಷದ ಮೂಲಕ ಹಮ್ಮಿಕೊಳ್ಳಲಾಗಿರುವ ಹರ್ ಘರ್ ತಿರಂಗ ಕಾರ್ಯಕ್ರಮಕ್ಕೆ ಪಕ್ಷದ ಕಾರ್ಯಕರ್ತರು ಪ್ರತಿ ಮನೆ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವ ಮೂಲಕ ಭಾವೈಕ್ಯತೆಯ ಸಂದೇಶ ಸಾರುವ ಕೆಲಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ರಾಷ್ಟ್ರ ಧ್ವಜವನ್ನು ಎಲ್ಲಾ ಕಾರ್ಯಕರ್ತರಿಗೆ ನೀಡಲಾಗಿದೆ ಎಂದರು.

ಬಿಜೆಪಿ ಮುಖಂಡ ಎಚ್.ಟಿ.ಭೈರಪ್ಪ ಮಾತನಾಡಿ ರಾಷ್ಟ್ರಧ್ವಜವನ್ನು ಮೊದಲಿಗೆ ಸರ್ಕಾರಿ ಶಾಲಾ ಮತ್ತು ಕಚೇರಿಗಳ ಮೇಲೆ ಹಾರಿಸಲಾಗುತ್ತಿತ್ತು. ನಂತರದ ದಿನಗಳಲ್ಲಿ ಸಂವಿಧಾನದ ಆಶಯದಂತೆ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿ ಮನೆ ಮನೆಗಳ ಮೇಲೆ ಹಾರಿಸುವ ಮೂಲಕ ಹರ್ ಘರ್ ತಿರಂಗ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಹಿನ್ನೆಲೆ ಇಡೀ ದೇಶದ ಜನತೆ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ಸ್ವಾತಂತ್ರ್ಯೋತ್ಸವದ ದಿನವನ್ನು ಹಬ್ಬದ ರೀತಿಯಲ್ಲಿ ಆಚರಣೆ ಮಾಡಬೇಕಿದೆ. ಅದರಂತೆ ನಮ್ಮ ತಾಲೂಕಿನಲ್ಲಿಯೂ ಗೌರವಯುತವಾಗಿ ಎಲ್ಲರೂ ರಾಷ್ಟ್ರಧ್ವಜ ಹಾರಿಸುವ ಕೆಲಸ ಮಾಡಬೇಕಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಟ್ಟಣ ಪಂಚಾಯಿತಿ ಸದಸ್ಯ ಜಿ. ಆರ್ ಶಿವಕುಮಾರ್ ಮಾತನಾಡಿ ದೇಶಭಕ್ತಿ ಅನಾವರಣಕ್ಕೆ ಪ್ರತಿ ಮನೆಯಲ್ಲಿ ರಾಷ್ಟ್ರ ಧ್ವಜ ಹಾರಿಸುವ ಅವಕಾಶ ಕೇಂದ್ರ ಸರ್ಕಾರ ನೀಡಿದೆ. ಅದರಂತೆ ಎಲ್ಲರೂ ಪ್ರತಿ ಮನೆಯ ಮೇಲೆ ರಾಷ್ಟ್ರ ಧ್ವಜ ನಿಯಮಾನುಸಾರ ಹಾರಿಸಿ ನಮ್ಮ ರಾಷ್ಟ್ರೀಯ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿ ಎಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷ ಜಿ.ಎನ್.ಅಣ್ಣಪ್ಪಸ್ವಾಮಿ, ಎಪಿಎಂಸಿ ಮಾಜಿ ಅಧ್ಯಕ್ಷ ಎನ್.ಲಕ್ಷ್ಮಿರಂಗಯ್ಯ, ಮುಖಂಡರಾದ ಬಿ.ಲೋಕೇಶ್, ವಿಶ್ವನಾಥ್, ಸಿದ್ದರಾಜು ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...