ಗುಬ್ಬಿ | ನಾನು ಯಾವ ಬಣವೂ ಅಲ್ಲ ; ಸಿಎಂ, ಡಿಸಿಎಂ ಇಬ್ಬರೂ ನಮ್ಮ ನಾಯಕರೇ : ಶಾಸಕ ಎಸ್.ಆರ್.ಶ್ರೀನಿವಾಸ್

Date:

 ಕುಣಿಗಲ್ ಶಾಸಕ ರಂಗನಾಥ್ ಅವರೊಟ್ಟಿಗೆ ಖಾಸಗಿ ವಿಚಾರವಾಗಿ ದೆಹಲಿಗೆ ತೆರಳಿದ್ದಕ್ಕೆ ಮಾಧ್ಯಮದಲ್ಲಿ ಬೇರೆ ರೀತಿ ಬಿಂಬಿತವಾಗಿದೆ. ನಾವಿಬ್ಬರೇ ಮುಖ್ಯಮಂತ್ರಿ ಬದಲಿಸುವಷ್ಟು ಶಕ್ತಿ ಇದೆಯೇ. ಊಹಾಪೋಹಕ್ಕೆ ಕಿವಿಕೊಡುವ ಅಗತ್ಯವಿಲ್ಲ. ನಾನು ಯಾಾವ ಬಣವೂ ಅಲ್ಲ. ಕಾಂಗ್ರೆಸ್ ಬಣ ಅಷ್ಟೇ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ಸ್ಪಷ್ಟನೆ ನೀಡಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಮಹರ್ಷಿ ವಾಲ್ಮೀಕಿ ಅಭಿವೃದ್ದಿ ನಿಗಮ ಮೂಲಕ ಗಂಗಾ ಕಲ್ಯಾಣ ಯೋಜನೆ ಪಂಪು ಮೋಟಾರ್ ವಿತರಣೆ ಮಾಡಿ ಮಾತನಾಡಿದ ಅವರು ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಇಬ್ಬರೂ ನಮಗೆ ನಾಯಕರೇ. ಸಚಿವ ಸಂಪುಟ ಪುನರ್ ರಚನೆ ಆಗುವುದಾದಲ್ಲಿ ನನಗೆ ಸಚಿವ ಸ್ಥಾನಕ್ಕೆ ನೀಡಲು ಶಾಸಕ ರಂಗನಾಥ್ ಮನವಿ ಮಾಡಿದ್ದಾರೆ ಎಂಬುದಷ್ಟೇ ನನಗೂ ಗೊತ್ತಿರುವುದು. ಮತ್ಯಾವ ವಿಚಾರ ದೆಹಲಿ ಪ್ರವಾಸದಲ್ಲಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟ ಪಡಿಸಿದರು.

ಶಾಸಕರ ಸಹಿ ಸಂಗ್ರಹ ಬಗ್ಗೆ ನನಗೇನೂ ತಿಳಿದಿಲ್ಲ. ನನ್ನ ಸಹಿ ಯಾರು ಕೇಳಿಲ್ಲ. ಡಿ.ಕೆ.ಶಿವಕುಮಾರ್ ಅವರನ್ನು ನೋಡಿ ಎರಡು ತಿಂಗಳಾಗಿದೆ. ಏನೇನೂ ವದಂತಿಗಳು ಮಾಧ್ಯಮದಲ್ಲಿ ನಾನು ನೋಡುತ್ತಿದ್ದೇನೆ. ಯಾವುದಕ್ಕೂ ಸಾಕ್ಷ್ಯಾಧಾರವಿಲ್ಲ ಎಂದ ಅವರು ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಹಿನ್ನಲೆ ಯಾವ ಯೋಜನೆ ಜಾರಿಯಾಗಿರಲಿಲ್ಲ. ಈಗ ಗಂಗಾ ಕಲ್ಯಾಣ ಯೋಜನೆ ಮೂಲಕ ಪಂಪು ಮೋಟಾರ್ ವಿತರಣೆ ಮಾಡಲಾಗುತ್ತಿದೆ. ಒಟ್ಟು 73 ಫಲಾನುಭವಿಗಳ ಪೈಕಿ 43 ಜನಕ್ಕೆ ವಿತರಣೆ ಮಾಡಲಾಗಿದೆ. ಉಳಿದ 30 ವಾರದೊಳಗೆ ವಿತರಣೆ ಮಾಡಲಾಗುವುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್, ಮುಖಂಡರಾದ ಗುರು ರೇಣುಕರಾಧ್ಯ, ರಮೇಶ್, ರಂಗನಾಥ್, ಶಿವಾಜಿರಾವ್, ಮಹರ್ಷಿ ವಾಲ್ಮೀಕಿ ನಿಗಮದ ವ್ಯವಸ್ಥಾಪಕಿ ಬಾಗಿರಥಮ್ಮ, ಮೋಹನ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...