ಗುಬ್ಬಿ | ದಾಸರಕಲ್ಲಹಳ್ಳಿ ಗ್ರಾಮದಲ್ಲಿ ಸ್ವಾಮಿ ವಿವೇಕಾನಂದ ವೃತ್ತ ಉದ್ಘಾಟನೆ

Date:

 ರಾಷ್ಟ್ರದ ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಮಹತ್ತರವಾದದ್ದು ಎಂದು ಕಾಂಗ್ರೆಸ್ ಮುಖಂಡ ಲಕ್ಷ್ಮಿ ನಾರಾಯಣಪ್ಪ ತಿಳಿಸಿದರು.

 ಗುಬ್ಬಿ  ತಾಲೂಕಿನ  ಕಡಬ ಹೋಬಳಿಯ ದಾಸರಕಲ್ಲಹಳ್ಳಿ ಗ್ರಾಮದಲ್ಲಿ ನಡೆದ ಸ್ವಾಮಿ ವಿವೇಕಾನಂದ‌‌ ಜಯಂತಿ ಹಾಗೂ ಸ್ವಾಮಿ ವಿವೇಕಾನಂದ‌‌ ವೃತ್ತ ಉದ್ಘಾಟಿಸಿ ಮಾತನಾಡಿದ ಅವರು, ಕಳೆದ ಅರಳು ವರ್ಷಗಳಿಂದ ದಾಸರಕಲ್ಲಹಳ್ಳಿ ಗ್ರಾಮದ ಯುವಕರು ಸ್ವಾಮಿ ವಿವೇಕಾನಂದರ ಹೆಸರಿನಲ್ಲಿ ಸಂಘ ಸ್ಥಾಪಿಸಿಕೊಂಡು ಅವರ ವಿಚಾರಧಾರೆಗಳನ್ನು ಯುವಕರಿಗೆ ತಿಳಿಸುತ್ತಾ ಬರುತ್ತಿದ್ದಾರೆ. ದಾಸರಕಲ್ಲಹಳ್ಳಿ ಗ್ರಾಮದ ಮುಖ್ಯ ರಸ್ತೆಗೆ ಸ್ವಾಮಿ ವಿವೇಕಾನಂದ ವೃತ್ತ ಎಂದು ನಾಮಕರಣ ಮಾಡಿರುವುದು ಶ್ಲಾಘನೀಯ. ಯುವಕರು ಸ್ವಾಮಿ ವಿವೇಕಾನಂದ ವಿಚಾರಧಾರೆ ಹಾಗೂ ಅಂಬೇಡ್ಕರ್ ವಿಚಾರಧಾರೆಗಳನ್ನು ಓದುವ ಮೂಲಕ ರಾಷ್ಟ್ರ ನಿರ್ಮಾಣದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದ ಅವರು ಮುಂದಿನ ದಿನಗಳಲ್ಲಿ ಯುವಕರ ಕಾರ್ಯ ಚಟುವಟಿಕೆಗಳಿಗಾಗಿ ಸ್ವಾಮಿ ವಿವೇಕಾನಂದರ ಹೆಸರಿನಲ್ಲಿ ಕಟ್ಟಡ ನಿರ್ಮಿಸಿ ಕೊಡುವುದಾಗಿ ಭರವಸೆಯನ್ನು ನೀಡಿದರು.

1000975934

ಸ್ವಾಮಿ ವಿವೇಕಾನಂದ ಸಂಘದ ಅಧ್ಯಕ್ಷ ಪ್ರದೀಪ್ ಕುಮಾರ್ ಮಾತನಾಡಿ ಸಂಘ ರಾಜಕೀಯ ಹೊರತಾಗಿರಬೇಕು. ಎಲ್ಲರೂ ಸಾಮಾಜಿಕ ಬದ್ಧತೆ ಬೆಳೆಸಿಕೊಳ್ಳಬೇಕೆಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯದರ್ಶಿ ಅಭಿಷೇಕ್ ಮಾತನಾಡಿ ಅಂಬೇಡ್ಕರ್ ಜಯಂತಿ ಹಾಗೂ ಸ್ವಾಮಿ ವಿವೇಕಾನಂದ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡುತ್ತಾ ಬರುತ್ತಿದ್ದು ಅಂಬೇಡ್ಕರ್, ಸ್ವಾಮಿ ವಿವೇಕಾನಂದರ ವಿಚಾರಧಾರೆಯನ್ನು ಯುವ ತಲೆಮಾರಿಗೆ ತಲುಪಿಸುವ ನಿಟ್ಟಿನಲ್ಲಿ ಸಂಘ ಕಾರ್ಯ ಪ್ರವೃತ್ತವಾಗಿದೆ ಎಂದು ತಿಳಿಸಿದರು.

ಯುವ ಮುಖಂಡ ಅನಂತ ನಾರಾಯಣ್ ಮಾತನಾಡಿ ಈಗಾಗಲೆ ಸಂಘಟನೆ, ಯುವಕರ ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಿದ್ದು ಕ್ರೀಡಾ ಸ್ಫೂರ್ತಿ ಬೆಳಸುತ್ತ ಬಂದಿದೆ. ಗ್ರಾಮದಲ್ಲಿ ಸ್ಥಳಾವಕಾಶವಿದ್ದು ಜನಪ್ರತಿನಿಧಿಗಳು ಕ್ರೀಡಾಂಗಣ ನಿರ್ಮಾಣ ಮಾಡಿ ಕೊಡಬೇಕೆಂದು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಸ್ವಾಮಿ ವಿವೇಕಾನಂದ ಸಂಘದ ಉಪಾದ್ಯಕ್ಷ ನಾರಾಯಣ್, ಖಜಾಂಚಿ ವಿಜಯ್ ಕುಮಾರ್,ಸದಸ್ಯರಾದ ನವೀನ್, ರಮೇಶ್, ಮಂಜುನಾಥ್, ಸಂತೋಷ್ ಡಿ ವಿ, ಯಶವಂತ, ನಯನ, ಶ್ರೀನಿವಾಸ, ಶಿವಕುಮಾರ್, ಆನಂದಮೂರ್ತಿ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...