ಗುಬ್ಬಿ | ಜೆಜೆಎಂ ಕಾಮಗಾರಿ ಕಳಪೆ ಗುಣಮಟ್ಟಕ್ಕೆ ಸಬ್ ಕಾಂಟ್ರಾಕ್ಟ್ ಕಾರಣ : ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ನೇರ ಆರೋಪ.

Date:

ಅಸಹ್ಯ ಹುಟ್ಟಿಸಿದ ಕಾಂಗ್ರೆಸ್ ಸರ್ಕಾರದಲ್ಲಿ ಮೈಗೆಲ್ಲಾ ಎಣ್ಣೆ ಹಚ್ಚಿಕೊಂಡರೆ ಹೆಚ್ಚು. ಒಪ್ಪಂದ ಮಾಡಿಕೊಂಡ ಅಧಿಕಾರಿಗಳಿಂದ ಮುಖ್ಯ ಗುತ್ತಿಗೆದಾರ ಕಮಿಷನ್ ಗಾಗಿ ಸಬ್ ಕಾಂಟ್ರಾಕ್ಟ್ ನೀಡಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಜಲ ಜೀವನ್ ಮಿಷನ್ ಯೋಜನೆ ಸಂಪೂರ್ಣ ಕಳಪೆ ಕಾಮಗಾರಿ ಆಗಿದೆ ಎಂದು ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ ಮಾಡಿದರು.

ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರ ಹೋಬಳಿ ಚನ್ನೇನಹಳ್ಳಿ ಹುಲ್ಲೇಕೆರೆ ಗ್ರಾಮದಲ್ಲಿ ನಡೆದ ಜಲ ಜೀವನ್ ಮಿಷನ್ ಯೋಜನೆಯ 82 ಲಕ್ಷ ರೂಗಳ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು ಹೆಬ್ಭೂರಿನಲ್ಲಿ ಸೀರೆ ಮಾರಿಕೊಂಡು ಇದ್ದವರು ಮನೆಗೆ ನಳ ಸಂಪರ್ಕ ಕಾಮಗಾರಿ ಮಾಡುವ ಗುತ್ತಿಗೆದಾರರಾಗಿ ನಮ್ಮ ಹೋಬಳಿಯಲ್ಲಿ ಕಳಪೆ ಕೆಲಸ ಮಾಡಿದ್ದಾರೆ. ಈ ಬಗ್ಗೆ ವಿಧಾನಸಭಾ ಕಲಾಪದಲ್ಲಿ ಚರ್ಚಿಸುವ ಮಟ್ಟಕ್ಕೆ ಹೋಗಿದೆ. ವಿರೋಧ ಪಕ್ಷದ ಶಾಸಕರಾಗಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದರು.

ಇಚ್ಛಾಶಕ್ತಿ ಇಲ್ಲದ ಈಸರ್ಕಾರದಲ್ಲಿ ಯಾವ ಅಧಿಕಾರಿಗಳು ಜನ ಪ್ರತಿನಿಧಿಗಳ ಮಾತಿಗೆ ಬೆಲೆ ನೀಡುತ್ತಿಲ್ಲ. ಸಿ.ಎಸ್.ಪುರ ಗ್ರಾಮದಲ್ಲಿ ಒಂದು ವರ್ಷ ಕಳೆದರೂ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿಲ್ಲ. ಚೆನ್ನಾಗಿ ದುಡ್ಡು ಮಾಡಿಕೊಂಡ ಇಇ ಯೋಜನೆಯ ದಿಕ್ಕು ತಪ್ಪಿಸಿಬಿಟ್ಟಿದ್ದಾರೆ. ಅಧಿಕಾರಿಗಳ ವರ್ತನೆಗೆ ಈ ಘಟನೆಯೇ ಸಾಕ್ಷಿ. ಕಳಪೆ ಗುಣಮಟ್ಟದ ಜಲ ಜೀವನ್ ಕೆಲಸಗಳನ್ನು ಮತ್ತೊಮ್ಮೆ ಗುತ್ತಿಗೆ ಕರೆದು ಗುಣಮಟ್ಟ ಕೆಲಸ ಮಾಡಬೇಕು ಎಂದು ತಾಕೀತು ಮಾಡಿದ ಅವರು ಎಲ್ಲಿಯೂ ಕಳಪೆ ಕೆಲಸ ಮಾಡಲು ಬಿಡುವುದಿಲ್ಲ. ನನ್ನ ಕ್ಷೇತ್ರದಲ್ಲಿ ಕೇಂದ್ರ ಸರ್ಕಾರದ ದುಡ್ಡು ಪೋಲಾಗಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1000837815

ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಕಾಲಕ್ಕೆ ಕಾಂಗ್ರೆಸ್ ಮುಗೀತು. ಈಗ ಎಲ್ಲಾ ನಕಲಿ ಕಾಂಗ್ರೆಸ್ಸಿಗರು ಇದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ ಅವರು ಅವೈಜ್ಞಾನಿಕ ಕಾಮಗಾರಿ ಲಿಂಕ್ ಕೆನಾಲ್ ಕಾಮಗಾರಿ ಮಾಡಿಯೇ ತೀರುವ ಹಟಕ್ಕೆ ಕಾಂಗ್ರೆಸ್ ಸರ್ಕಾರ ಬಿದ್ದಿದೆ. ಈ ಹೇಮಾವತಿ ಇಡೀ ತುಮಕೂರು ಜಿಲ್ಲೆಯ 24 ಲಕ್ಷ ಜನರ ಜೀವನದಿಯಾಗಿದೆ. ಕಾಮಗಾರಿ ಯಾವುದೇ ಕಾರಣಕ್ಕೂ ಮಾಡಲು ರೈತರು ಬಿಡುವುದಿಲ್ಲ. ಕನಕಪುರ ಇದಲ್ಲ. ತುಮಕೂರು ರೈತರು ಸಿಡಿದರೆ ಕಾಮಗಾರಿ ಸಂಪೂರ್ಣ ಸ್ಥಗಿತ ಎಂದು ಗುಡುಗಿದರು.

ಈ ಸಂದರ್ಭದಲ್ಲಿ ಮುಖಂಡರಾದ ನಂಜೇಗೌಡ, ಚನ್ನೇನಹಳ್ಳಿ ಮೂರ್ತಣ್ಣ, ಬೋರಪ್ಪನಹಳ್ಳಿ ಕುಮಾರ್, ಜಗದೀಶ್, ತಮ್ಮಯ್ಯಣ್ಣ, ನರಸೇಗೌಡ, ನವೀನ್, ವೀರಣ್ಣಗುಡಿ ರಾಮು, ಸೋಮಣ್ಣ, ಮೂರ್ತಿ ಇತರರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...