ಗುಬ್ಬಿ | ಎಸ್.ಕೊಡಗೀಹಳ್ಳಿ ಗ್ರಾಪಂ ಅಧ್ಯಕ್ಷರಾಗಿ ಕೆ.ಜಿ.ಅಶ್ವತ್ತೇಗೌಡ ಅವಿರೋಧ ಆಯ್ಕೆ

Date:

ಗುಬ್ಬಿ ತಾಲ್ಲೂಕಿನ ಕಸಬ ಹೋಬಳಿ ಎಸ್.ಕೊಡಗೀಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎಸ್. ಕೊಡಗೀಹಳ್ಳಿ ಪಾಳ್ಯ ಸದಸ್ಯ ಕೆ.ಜಿ.ಅಶ್ವತ್ತೇಗೌಡ ಅವಿರೋಧವಾಗಿ ಆಯ್ಕೆಯಾದರು.

ಪಂಚಾಯಿತಿ ಕಚೇರಿಯಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾಧಿಕಾರಿ ಗುರುಪ್ರಸಾದ್ ನಡೆಸಿಕೊಟ್ಟರು. ಈ ಹಿಂದೆ ಅಧ್ಯಕ್ಷರಾಗಿದ್ದ ಪ್ರೇಮಾ ದಿವಾಕರ್ ನೀಡಿದ ರಾಜೀನಾಮೆ ಹಿನ್ನಲೆ ನಡೆದ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸಿದ ಕೆ.ಜಿ.ಅಶ್ವತ್ತೇಗೌಡ ಅವರು ಏಕೈಕ ಅಭ್ಯರ್ಥಿಯಾದ ಕಾರಣ ಅವಿರೋಧ ಆಯ್ಕೆ ಘೋಷಣೆ ಮಾಡಲಾಯಿತು.

ನೂತನ ಅಧ್ಯಕ್ಷ ಕೆ.ಜಿ.ಅಶ್ವತ್ತೇಗೌಡ ಸುದ್ದಿಗಾರರ ಜೊತೆ ಮಾತನಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೂ ಅಗತ್ಯ ಮೂಲಭೂತ ಸೌಕರ್ಯ ಒದಗಿಸಲು ಬದ್ದನಾಗಿರುತ್ತೇನೆ. ಸರ್ಕಾರದ ಎಲ್ಲಾ ಕಾರ್ಯಕ್ರಮ ಅನುಷ್ಠಾನವನ್ನು ಎಲ್ಲಾ ಸದಸ್ಯರ ವಿಶ್ವಾಸ ಪಡೆದು ನಡೆಸಿಕೊಂಡು ಮಾದರಿ ಪಂಚಾಯಿತಿ ಎಂಬ ಹೆಗ್ಗಳಿಕೆ ಪಡೆಯಲು ದುಡಿಯುತ್ತೇನೆ. ಬೀದಿ ದೀಪ, ರಸ್ತೆ, ಕುಡಿಯುವ ನೀರು, ಶಾಲೆ ಸೇರಿದಂತೆ ಎಲ್ಲಾ ಸವಲತ್ತು ಒದಗಿಸಿ ಪ್ರಾಮಾಣಿಕವಾಗಿ ದುಡಿಯುತ್ತೇನೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ಸಂದರ್ಭದಲ್ಲಿ ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ಗ್ರಾಪಂ ಉಪಾಧ್ಯಕ್ಷ ರಂಗರಾಜು, ಸದಸ್ಯರಾದ ಪ್ರೇಮಾ, ಜಯಮ್ಮ, ತಿಮ್ಲಾಚಾರ್, ಗಂಗನರಸಮ್ಮ, ವೆಂಕಟಲಕ್ಷ್ಮಮ್ಮ, ತುಳಸಿದಾಸ್, ಆಂಬುಜಮ್ಮ, ನೀಲಮ್ಮ, ನಾಗರಾಜು, ಸೈಯದ್ ಖಲಂದರ್, ಧನಲಕ್ಷ್ಮಿ, ಮಂಜಮ್ಮ, ರಾಮೇಗೌಡ, ಅನಿತಾ, ಶ್ವೇತಾ, ಶಿವಣ್ಣ, ಭಾರತಿ, ಮಾಜಿ ಅಧ್ಯಕ್ಷ ಕೆ.ಜಿ.ಗಿರೀಶ್, ಮುಖಂಡರಾದ ದಿವಾಕರ್, ಪಾಂಡಣ್ಣ, ರೈತಸಂಘದ ಅಧ್ಯಕ್ಷ ವೆಂಕಟೇಗೌಡ, ಪಡಗುಡಿ ಚಂದ್ರಶೇಖರ್ ಇತರರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...