ಗುಬ್ಬಿ | ಸಹೋದರರಂತೆ ನೀರು ಹಂಚಿಕೊಳ್ಳೋಣ : ಡಿಸಿಎಂ ಡಿ.ಕೆ.ಶಿವಕುಮಾರ್

Date:

ಅನ್ಯ ರಾಜ್ಯಗಳ ರೀತಿ ನೀರಿಗಾಗಿ ಕಿತ್ತಾಡದೇ ಹೇಮಾವತಿ ನೀರು ಎಲ್ಲಾ ರೈತರಿಗೂ ಹಂಚಬೇಕಿದೆ. ಸರ್ವರಿಗೂ ಸಮಪಾಲು ಸಮಬಾಳು ತತ್ವದಂತೆ ಸಹೋದರರಂತೆ ನೀರು ಹಂಚಿಕೊಂಡು ಕೃಷಿ ನಡೆಸಿ ಬದುಕು ನಡೆಸೋಣ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರ

ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿ ಸುಂಕಾಪುರ ಗೇಟ್ ಬಳಿ ನಡೆದಿರುವ ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದ ಅವರು ಎಲ್ಲಾ ಹೋರಾಟಗಾರರಲ್ಲಿ ಕೈ ಮುಗಿದು ಮನವಿ ಮಾಡುತ್ತೇನೆ. ಈಗಾಗಲೇ ಯೋಜನೆ ಕೆಲಸ ನಡೆದಿದೆ. ಯೋಜನೆಯ ಬದಲಾವಣೆ ಮಾಡಲು ಸಾಧ್ಯವಿಲ್ಲ. ಯಾರಿಗೂ ತೊಂದರೆ ಆಗದಂತೆ ನೀರು ಹಂಚುತ್ತೇವೆ. ಹೋರಾಟಗಾರರ ಜೊತೆ ಚರ್ಚಿಸಿ ಮನವೊಲಿಸಿ ಎಲ್ಲರ ಅನುಗ್ರಹ ಪಡೆದು ಕಾಮಗಾರಿ ಪೂರ್ಣ ಗೊಳಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

1002042246

ತುಮಕೂರು ಜಿಲ್ಲೆಯ ಎಲ್ಲಾ ಕ್ಷೇತ್ರದ ಹಿತ ಕಾಯುವ ಕೆಲಸ ನಮ್ಮದು. ನೀರಾವರಿ ಸಚಿವನಾಗಿ ಎಲ್ಲಾ ಬಿಜೆಪಿ ಜೆಡಿಎಸ್ ಶಾಸಕರು ಹಾಗೂ ಕೇಂದ್ರ ಸಚಿವ ಸೋಮಣ್ಣ ಅವರ ಜೊತೆ ಎರಡು ತಿಂಗಳ ಹಿಂದೆ ಮಾತನಾಡಿದಂತೆ ಸ್ಥಳ ಪರಿಶೀಲನೆ ಮಾಡಿದ್ದೇನೆ. ಒಂದು ಕ್ಷೇತ್ರಕ್ಕಾಗಿ ನಾನು ಬಂದಿಲ್ಲ. ಎಲ್ಲರಿಗೂ ಸಮಾನವಾಗಿ ನೀರು ಹಂಚುವ ಉದ್ದೇಶದಲ್ಲಿ ಈ ಕಾಮಗಾರಿ ಕೈಗೆತ್ತಿಕೊಂಡಿದ್ದೇವೆ. ಎರಡು ದಶಕದಿಂದ ಕೊನೆಯ ತಾಲ್ಲೂಕಿಗೆ ಹಂಚಿಕೆಯಷ್ಟು ನೀರು ಸಿಕ್ಕಿಲ್ಲ. ಹೇಮಾವತಿ ಹೋರಾಟಗಾರ ವೈ.ಕೆ.ರಾಮಯ್ಯ ಅವರ ಕನಸು ಕುಣಿಗಲ್ ತಾಲ್ಲೂಕಿಗೆ ನೀರು ತರುವುದು. ಅದನ್ನು ಈಗ ಪೂರ್ಣಗೊಳಿಸುತ್ತೇವೆ. ಈಗಾಗಲೇ 400 ಕೋಟಿ ಮಂಜೂರಾಗಿ ಪೈಪ್ ಖರೀದಿ ನಡೆದಿದೆ. ಕೆಲಸ ನಾಲ್ಕು ತಿಂಗಳಲ್ಲಿ ಮುಗಿಯಲಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿಂದೆ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ನಾನು ನೀರಾವರಿ ಸಚಿವನಾಗಿ 600 ಕೋಟಿಗೆ ಕಾಮಗಾರಿ ಮಂಜೂರಾತಿ ಪಡೆದಿತ್ತು. ನಂತರ ಯುಡಿಯೂರಪ್ಪ ಮುಖ್ಯಮಂತ್ರಿಯಾದಾಗ ಕಾಮಗಾರಿ ಸ್ಥಗಿತ ಗೊಳಿಸಲಾಗಿತ್ತು. ಈಗ ಸಾವಿರ ಕೋಟಿ ಯೋಜನೆಯಾಗಿ ಕೆಲಸ ನಡೆದಿದೆ. ಇಲ್ಲಿ ಯಾವುದೇ ತಾಲ್ಲೂಕಿಗೆ ಅನ್ಯಾಯ ಆಗುವುದಿಲ್ಲ ಎಂದು ಪುನರುಚ್ಚರಿಸಿದರು.

ನನಗೆ ಪ್ರಿಯವಾದ ತುಮಕೂರು ಜಿಲ್ಲೆಗೆ ಅನ್ಯಾಯ ಮಾಡುವುದಿಲ್ಲ. ರೈತರಿಗೆ ಅನ್ಯಾಯ ಆದಾಗ ಸಚಿವನಾಗಿ ಬಗೆಹರಿಸುವ ಕೆಲಸ ಮಾಡಿದ್ದೇವೆ. 2 ಸಾವಿರ ಕೋಟಿ ವ್ಯಯ ಮಾಡಿದ ಎತ್ತಿನಹೊಳೆ ಯೋಜನೆ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗೆ ಕುಡಿಯುವ ನೀರು ಪೂರೈಸಲಿದೆ. ಈ ಯೋಜನೆಯಲ್ಲಿ ಮಾನವೀಯತೆ ದೃಷ್ಟಿಯಲ್ಲಿ ನೀರು ಕೇಳಿದಾಗ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ, ಮಧುಗಿರಿ, ಶಿರಾ, ಕೊರಟಗೆರೆ, ಪಾವಗಡ ತಾಲ್ಲೂಕುಗಳಿಗೆ ಕುಡಿಯುವ ನೀರಿಗಾಗಿ ಹಲವು ಕೆರೆಗೆ ನೀರು ಹರಿಸಲು ಅವಕಾಶ ಮಾಡಲಾಗಿದೆ. ಕುಣಿಗಲ್ ತಾಲ್ಲೂಕು ಸಹ ಹೇಮಾವತಿ ನೀರು ಹಂಚಿಕೆಗೆ ಒಳಪಟ್ಟಿದೆ. ಅಲ್ಲಿನ ರೈತರಿಗೆ ನಿಗದಿಯಷ್ಟು ನೀರು ಸರಬರಾಜು ಮಾಡಲಾಗುತ್ತದೆ ಅಷ್ಟೇ ಎಂದು ಹೇಳಿದರು.

1002042345

ತಮಿಳುನಾಡಿಗೆ ಕಾವೇರಿ ನೀರು 177 ಟಿಎಂಸಿ ಹರಿಸಬೇಕಿತ್ತು. ಕೆ.ಆರ್.ಎಸ್, ಕಬಿನಿ, ಹಾರಂಗಿ, ಹೇಮಾವತಿ ಮೂಲಕ ಈಗಾಗಲೇ 220 ಟಿಎಂಸಿ ಹರಿದಿದೆ. ಇನ್ನೂ ನಾಲ್ಕು ತಿಂಗಳು ಮಳೆ ನಿರೀಕ್ಷೆ ಇದ್ದು, ಸಮುದ್ರ ಸೇರುವ 200 ಟಿಎಂಸಿ ಹೆಚ್ಚುವರಿ ನೀರು ನಾವು ರೈತರಿಗೆ ನೀಡಬೇಕಿದೆ. ಈ ರೀತಿ ಅನುಕೂಲವಾದಾಗ ನೀರು ಹರಿಸಿಕೊಳ್ಳಲು ಈ ಲಿಂಕ್ ಕೆನಾಲ್ ಕಾಮಗಾರಿ ನಡೆಸಲಾಗಿದೆ. ಇದರಿಂದ ಯಾವ ತಾಲ್ಲೂಕಿಗೂ ಅನ್ಯಾಯ ಆಗುವುದಿಲ್ಲ ಎಂದ ಅವರು ಪೈಪ್ ಮೂಲಕ ನೀರು ಹರಿಸಲು ನಿಯಂತ್ರಣ ಅಳವಡಿಸಲಾಗಿದೆ. ಸಾರ್ವಜನಿಕರು ಗಮನಕ್ಕೆ ತಂದು ಮುಖ್ಯನಾಲೆ ಹಾಗೂ ಪೈಪ್ ಲೈನ್ ನಲ್ಲಿ ಸಮಾನವಾಗಿ ನೀರು ಹರಿಯಲಿದೆ. ಅಭಿವೃದ್ದಿ ಕೆಲಸದಲ್ಲಿ ರಾಜಕಾರಣ ಮಾಡುವುದು ಬೇಡ. ಎಲ್ಲರ ಒಪ್ಪಿಗೆ ಪಡೆದು ಕಾಮಗಾರಿ ಪೂರ್ಣ ಗೊಳಿಸುತ್ತೇವೆ ಎಂದು ಮತ್ತೊಮ್ಮೆ ವಿಶ್ವಾಸ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಶಾಸಕರಾದ ಎಸ್.ಆರ್.ಶ್ರೀನಿವಾಸ್, ಟಿ.ಬಿ.ಜಯಚಂದ್ರ, ಡಾ.ರಂಗನಾಥ್, ಹೇಮಾವತಿ ಮುಖ್ಯ ಎಂಜಿನಿಯರ್ ಜಯರಾಮ್, ಜಿಪಂ ಸಿಇಓ ಜಿ.ಪ್ರಭು, ತಾಪಂ ಇಓ ಎಸ್.ಶಿವಪ್ರಕಾಶ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ ಸೇರಿದಂತೆ ಹಲವು ಮುಖಂಡರು, ಹೇಮಾವತಿ, ಕಂದಾಯ ಇಲಾಖೆಯ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...