ಮಾತೃಭಾಷೆ ಕನ್ನಡ ಅಭಿಮಾನ ಗ್ರಾಮೀಣ ಭಾಗದಲ್ಲಿ ಹೆಚ್ಚು ಅಡಗಿದೆ. ಈ ಹಿನ್ನಲೆ 70 ನೇ ಕನ್ನಡ ರಾಜ್ಯೋತ್ಸವವನ್ನು ತಾಲ್ಲೂಕಿನ ಕಸಬ ಹೋಬಳಿ ಎಂ.ಎಚ್.ಪಟ್ಟಣ ಗ್ರಾಮ ಪಂಚಾಯಿತಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಧ್ವಜಾರೋಹಣ ನಂತರ ಪಿಡಿಓ ಕೆ.ಎಂ.ಶೇಖರ್ ಮಾತನಾಡಿ ನಮ್ಮ ಮಾತೃಭಾಷೆ ಕನ್ನಡ ಆಡಳಿತ ಭಾಷೆಯಾಗಿ ಸರ್ಕಾರಿ ಕಚೇರಿಯಲ್ಲಿ ಅಳವಡಿಕೆಯಾಗಿದೆ. ಆದರೆ ಖಾಸಗಿ ವಲಯದಲ್ಲಿ ಮಾತ್ರ ಆಂಗ್ಲ ಭಾಷೆಗೆ ಮನ್ನಣೆ ಸಿಗುತ್ತಿದೆ. ಉದ್ಯೋಗಕ್ಕಾಗಿ ಆಂಗ್ಲ ಭಾಷೆಗೆ ಅನಿವಾರ್ಯ ಮೊರೆ ಹೋಗಿದ್ದಾರೆ. ಈ ಹಿನ್ನಲೆ ಕನ್ನಡ ಉದ್ಯೋಗ ಭಾಷೆಯಾಗಿ ಅನ್ನ ಮಾರ್ಯವಾಗಬೇಕು. ಈ ನಿಟ್ಟಿನಲ್ಲಿ ನಮ್ಮ ಕನ್ನಡ ಗ್ರಾಮೀಣ ಭಾಗವಲ್ಲದೆ ನಗರ ಪ್ರದೇಶದಲ್ಲಿ ವೈಭವಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ಕೆಲ ಗಣ್ಯರಿಗೆ ಸನ್ಮಾನಿಸಿ ಗೌರವಿಸಲಾಯಿತು. ಶಾಲಾ ಮಕ್ಕಳಿಗೆ ಸಿಹಿ ವಿತರಣೆ ಮಾಡಲಾಯಿತು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಗ್ರಾಪಂ ಸದಸ್ಯರಾದ ಪದ್ಮ, ಗಂಗಾಧರಯ್ಯ, ಗೋಪಿನಾಥ್, ಸಿ.ಎಲ್.ಚಂದ್ರಶೇಖರ್ ಸೇರಿದಂತೆ ಪಂಚಾಯಿತಿಯ ಎಲ್ಲಾ ಸಿಬ್ಬಂದಿಗಳು ಇದ್ದರು.





