ಗುಬ್ಬಿ | ಯುವಶಕ್ತಿ ಜನಪರ ವೇದಿಕೆಯಿಂದ ರೋಗಿಗಳಿಗೆ ಹಾಲು ಹಣ್ಣು ವಿತರಣೆ

Date:

 ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ವಿಶೇಷ ಗುರುತರ ಕೆಲಸ ಮಾಡಿದ ಬಾಲಾಜಿ ಸೇವಾ ಟ್ರಸ್ಟ್ ಅಧ್ಯಕ್ಷ ಡಾ.ಕೆ.ಬಾಲಾಜಿ ಕುಮಾರ್ ಅವರ 50 ನೇ ಹುಟ್ಟುಹಬ್ಬದ ಪ್ರಯುಕ್ತ ಯುವಶಕ್ತಿ ಜನಪರ ವೇದಿಕೆ ವತಿಯಿಂದ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಲು ಹಣ್ಣು ಬ್ರೆಡ್ ವಿತರಣೆ ಮಾಡುವ ಮೂಲಕ ಸರಳ ಹಾಗೂ ಸಾಮಾಜಿಕ ಬದ್ಧತೆಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪಟ್ಟಣದ ಸರ್ಕಾರಿ ಸಮುದಾಯ ಆಸ್ಪತ್ರೆಯ ಒಳ ಹಾಗೂ ಹೊರ ರೋಗಿಗಳಿಗೆ ಹಾಲು ಹಣ್ಣು ಬ್ರೆಡ್ ವಿತರಿಸಿದ ಕಾಂಗ್ರೆಸ್ ಮುಖಂಡ, ಜನಪರ ಯುವಶಕ್ತಿ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಜಿ.ಸಿ.ಶಿವಕುಮಾರ್ ಮಾತನಾಡಿ ಬಾಲಾಜಿ ಕುಮಾರ್ ಕಳೆದ 20 ವರ್ಷದಿಂದ ಗುಬ್ಬಿ ತಾಲ್ಲೂಕಿನಲ್ಲಿ ಸಮಾಜ ಸೇವಕ ಎಂದು ಗುರುತಿಸಿಕೊಂಡಿದ್ದಾರೆ. ಧಾರ್ಮಿಕ ಕ್ಷೇತ್ರದಲ್ಲಿ ವೈಶಿಷ್ಟ್ಯ ಹೊಂದಿ ತಾಲ್ಲೂಕಿನ ಹಲವು ದೇವಾಲಯಗಳ ಜೀರ್ಣೋದ್ಧಾರಕ್ಕೆ ಕೋಟಿ ಲೆಕ್ಕದಲ್ಲಿ ಹಣ ನೀಡಿದ್ದಾರೆ ಎಂದರು.

ಧಾರ್ಮಿಕ ಕ್ಷೇತ್ರ ಜೊತೆಗೆ ಸಾಮಾಜಿಕ ಸೇವೆಯಲ್ಲಿ ಸಹ ಸೈ ಎನಿಸಿಕೊಂಡು ಸರ್ಕಾರಿ ಶಾಲೆಗಳಿಗೆ ಕುಡಿಯುವ ನೀರಿನ ಘಟಕ, ಸಮವಸ್ತ್ರ, ಬಡ ವಿದ್ಯಾರ್ಥಿಗಳ ಶೈಕ್ಷಣಿಕ ವೆಚ್ಚ, ಆರೋಗ್ಯ ಶಿಬಿರಗಳು, ಬಡ ರೋಗಿಗಳ ಚಿಕಿತ್ಸಾ ವೆಚ್ಚ ಹೀಗೆ ಅನೇಕ ಸಹಾಯ ಮಾಡಿ ದಾನಿಗಳು ಎಂದು ಗುರುತಿಸಿಕೊಂಡಿದ್ದಾರೆ. ಅವರ ಹುಟ್ಟುಹಬ್ಬ ಅದ್ದೂರಿ ಮಾಡದೆ ಸಾಮಾಜಿಕ ಸೇವೆಯಲ್ಲೇ ಸರಳ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಬಾಲಾಜಿ ಕುಮಾರಣ್ಣ ಅವರಿಗೆ ಹೆಚ್ಚಿನ ಸೇವೆ ಮಾಡುವ ಶಕ್ತಿ ಸಿಗಲಿ ಎಂದು ಹಾರೈಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್ ಪರಿಶಿಷ್ಟ ಪಂಗಡ ಘಟಕದ ಜಿ.ಎಲ್.ರಂಗನಾಥ್ ಮಾತನಾಡಿ ಸಾಮಾಜಿಕ ಸೇವೆಯಲ್ಲಿ ಗುರುತಿಸಿಕೊಂಡ ಬಾಲಾಜಿ ಕುಮಾರಣ್ಣ ತಾಲ್ಲೂಕಿನ ಜನರಿಗೆ ತಿರುಪತಿ ತಿರುಮಲ ದೇವಸ್ಥಾನದಿಂದ ದೇವರು ಕರೆತಂದು ಅದ್ದೂರಿ ಕಲ್ಯಾಣೋತ್ಸವ ಕಾರ್ಯಕ್ರಮ ಮಾಡಿ ಲಕ್ಷಾಂತರ ಭಕ್ತರಿಗೆ ಉಚಿತ ತಿಮ್ಮಪ್ಪನ ದರ್ಶನ ಮಾಡಿಸುವ ಮೂಲಕ ಜನರಿಗೆ ಪರಿಚಿತರಾಗಿ ತದನಂತರ ಬಡವರ ಪಾಲಿಗೆ ದೈವ ಸ್ವರೂಪಿಗಳಾದರು. ಮನೆ ಕಟ್ಟುವ ಬಡವರಿಗೆ ಸಿಮೆಂಟ್, ಶೀಟ್, ಬಾಗಿಲು ಕಿಟಿಕಿ, ಇಟ್ಟಿಗೆ ಹೀಗೆ ಅನೇಕ ಸಲಕರಣೆ ದಾನ ನೀಡಿದ್ದಾರೆ. ಉನ್ನತ ವ್ಯಾಸಂಗ ಮಾಡುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶುಲ್ಕ, ಆರೋಗ್ಯ ಸಮಸ್ಯೆ ರೋಗಿಗಳಿಗೆ ಚಿಕಿತ್ಸಾ ವೆಚ್ಚ ಪಾವತಿಸಿದ್ದಾರೆ. ಹೀಗೆ ಅನೇಕ ಸತ್ಕಾರ್ಯ ಮಾಡಿದ ಕುಮಾರಣ್ಣ ಅವರಿಗೆ ಇನ್ನೂ ಹೆಚ್ಚಿನ ಆರೋಗ್ಯ ಆಯಸ್ಸು ಸಿಗಲಿ ಎಂದು ಹಾರೈಸಿದರು.

ರೇಣುಕಪ್ಪ, ನಾರಾಯಣಸ್ವಾಮಿ, ಮಂಜುನಾಥ, ಉಮೇಶ್, ರಾಕೇಶ್, ವಸಂತಮ್ಮ, ಗಿರಿಜಮ್ಮ, ಮಂಜುಳಾ, ಸುಮಾರಾಣಿ, ಲಕ್ಕಣ್ಣ ರಂಗಸ್ವಾಮಿ, ಕೃಷ್ಣಮೂರ್ತಿ, ಜನಪರ ಯುವಶಕ್ತಿ ವೇದಿಕೆಯ ಹಲವು ಸದಸ್ಯರು, ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...