ಗುಬ್ಬಿ | ನರೇಗಾ ಅನುದಾನ ದುರ್ಬಳಕೆ : ಹಾಗಲವಾಡಿ ಪಿಡಿಒ ಅಮಾನತು

Date:

ನಿಯಮ ಬಾಹಿರವಾಗಿ  ಪಾವತಿಸಿದ ಆರೋಪದ ಮೇಲೆ  ಗುಬ್ಬಿ ತಾಲ್ಲೂಕಿನ ಹಾಗಲವಾಡಿ ಗ್ರಾಪಂ ಪಿಡಿಒ ಎಚ್. ಸಿ  ಶಿವಕುಮಾರ್ ಅವರನ್ನು ಅಮಾನತು ಮಾಡಿ ತುಮಕೂರು ಜಿಲ್ಲಾ ಪಂಚಾಯಿತಿ ಸಿಇಒ ಜಿ. ಪ್ರಭು ಆದೇಶ ಹೊರಡಿಸಿದ್ದಾರೆ.

 ಹಾಗಲವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಕಾಮಗಾರಿ ಯೋಜನೆಯಡಿ ಜಲ್ಲಿ ರಸ್ತೆ ಕಾಮಗಾರಿ, ಅಮೃತ ಸರೋವರ ನಿರ್ಮಾಣ, ಕೆರೆ ಅಭಿವೃದ್ಧಿ ಕಾಮಗಾರಿ ಅನುಷ್ಠಾನಗೊಳಿಸದೆ ನಿಯಮಬಾಹಿರವಾಗಿ ಕಾಮಗಾರಿಯ ಕೂಲಿಯ ಮೊತ್ತವನ್ನು ಪಾವತಿಸಿ ಹಣ ದುರುಪಯೋಗ ಪಡಿಸಿಕೊಂಡು ಕರ್ತವ್ಯ ಲೋಪವೆಸಗಿರುವುವುದು ಮೇಲ್ನೋಟಕ್ಕೆ ಸಾಬೀತಾಗಿದ್ದು ಈ ಹಿನ್ನೆಲೆಯಲ್ಲಿ ಇಲಾಖೆ ನೌಕರರ ಸೇವೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುನಲ್ಲಿ ಇರಿಸಲಾಗಿದೆ.

ನರೇಗಾ ಯೋಜನೆಯಡಿ ನಿಯಮಬಹಿರವಾಗಿ ಮಾರ್ಗಸೂಚಿಗಳನ್ನು ಉಲ್ಲಂಘಿಸಿರುವ ಬಗ್ಗೆ ಗುಬ್ಬಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅಗತ್ಯ ದಾಖಲೆಗಳೊಂದಿಗೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಇದನ್ನು ಪರಿಶೀಲಿಸಿದಾಗ ಕರ್ತವ್ಯ ಲೋಪ ಕಂಡು ಬಂದಿದ್ದು ಅಮಾನತ್ತಿಗೆ ಆದೇಶಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...