ಗುಬ್ಬಿ | ಬಿಹಾರ್ ಚುನಾವಣೆ ವಿಜಯೋತ್ಸವ ಆಚರಿಸಿದ ಎನ್ ಡಿಎ ಮೈತ್ರಿಕೂಟ

Date:

 ಬಿಹಾರ್ ರಾಜ್ಯದಲ್ಲಿ ಬಿಜೆಪಿ ಮೈತ್ರಿ ಎನ್ ಡಿ ಎ ಕೂಟ ಸಾಧಿಸಿದ ಭರ್ಜರಿ ಗೆಲುವು ಹಿನ್ನಲೆ ಪಟ್ಟಣದ ಗುಬ್ಬಿ ವೀರಣ್ಣ ಸರ್ಕಲ್ ಬಳಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.

ಸಿಹಿ ಹಂಚಿದ ಜಿಪಂ ಮಾಜಿ ಸದಸ್ಯ ಪಿ.ಬಿ.ಚಂದ್ರಶೇಖರಬಾಬು ಮಾತನಾಡಿ ಮತ ಕಳ್ಳತನ ಎಂದು ಆರೋಪದ ಸುರಿಮಳೆ ಮಾಡುತ್ತಿದ್ದ ಕಾಂಗ್ರೆಸ್ ಪಕ್ಷ ಹಾಗೂ ಮಿತ್ರ ಪಕ್ಷಕ್ಕೆ ಬಿಹಾರ್ ಚುನಾವಣೆ ತಕ್ಕ ಪ್ರತ್ಯುತ್ತರ ನೀಡಿದೆ. 75 ರಷ್ಟು ಮತಗಳು ಎನ್ ಡಿ ಎ ಮೈತ್ರಿಕೂಟಕ್ಕೆ ಬಂದ ಹಿನ್ನಲೆ ಬಿಹಾರ್ ರಾಜ್ಯದಲ್ಲಿ ವಿರೋಧ ಪಕ್ಷ ಅಸ್ತಿತ್ವದಲ್ಲಿ ಇಲ್ಲವಾಗಿದೆ ಎಂದರು.

ಬಿಜೆಪಿ ತಾಲ್ಲೂಕು ಅಧ್ಯಕ್ಷ ಬಲರಾಮಯ್ಯ ಮಾತನಾಡಿ ಅಭೂತಪೂರ್ವ ಗೆಲುವು ನೀಡಿದ ಬಿಹಾರ್ ರಾಜ್ಯದ ಜನತೆಗೆ ಧನ್ಯವಾದ ಹೇಳಬೇಕಿದೆ. ಇಲ್ಲಸಲ್ಲದ ಆರೋಪ ಮಾಡುತ್ತಾ ಕಾಂಗ್ರೆಸ್ ಮೈತ್ರಿ ಘಟ ಬಂಧನ್ ಜನಾದೇಶಕ್ಕೆ ತಲೆ ಬಾಗಬೇಕಿದೆ. ಮುಂದಿನ ದಿನದಲ್ಲಿ ದೇಶದ ಎಲ್ಲಾ ರಾಜ್ಯದಲ್ಲೂ ಹೀಗೆಯೇ ಫಲಿತಾಂಶ ಬರಲಿದೆ. ಬಿಜೆಪಿ ಪಕ್ಷ ಹಾಗೂ ನರೇಂದ್ರ ಮೋದಿ ಅವರ ವರ್ಚಸ್ಸು ವಿರೋಧಪಕ್ಷಗಳು ಅರಿಯಬೇಕಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಪಂ ಸದಸ್ಯರಾದ ಜಿ.ಆರ್.ಶಿವಕುಮಾರ್, ಜಿ.ಎನ್.ಅಣ್ಣಪ್ಪಸ್ವಾಮಿ ಮಾತನಾಡಿ ಬಿಹಾರ್ ರಾಜ್ಯದಲ್ಲಿ ದೊರೆತ ಫಲಿತಾಂಶ ದೇಶದ ಜನರ ಮನಸ್ಸಿನಲ್ಲಿ ಮೋದಿ ಅವರ ಜನಪ್ರಿಯತೆಗೆ ಸಾಕ್ಷಿಯಾಗಿದೆ. ಮುಂದಿನ ದಿನಗಳಲ್ಲಿ ಹಲವು ರಾಜ್ಯದಲ್ಲಿ ಇದೇ ಮಾದರಿ ಫಲಿತಾಂಶ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಜಿ.ಆರ್.ಬಸವರಾಜು, ಕೃಷ್ಣಮೂರ್ತಿ, ಅನಿಲ್, ಸ್ವಾಮಿ, ಶರಣ್, ಮಲ್ಲಿಕ್, ಜೆಡಿಎಸ್ ಮುಖಂಡರಾದ ಕೆ.ಬಿ.ಕೃಷ್ಣಪ್ಪ, ಡಿ.ರಘು, ಮನೋಜ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...