ಗುಬ್ಬಿ | ನಿಂದಕರ ಮಧ್ಯೆ ಸಮಾಜಮುಖಿ ಯುವಕರು ಸಂಘಟಿತರಾಗಬೇಕು : ತೆವಡೇಹಳ್ಳಿ ಶ್ರೀಗಳ ಕರೆ

Date:

ಸಂಘ ಸಂಸ್ಥೆಗಳ ನಿರ್ವಹಣೆ ಮಾಡಿ ಸಮಾಜದ ಶ್ರೇಯೋಭಿವೃದ್ಧಿ ಕಾಯಕ ಮಾಡಲು ಅಡ್ಡಿಯಾಗುವ ನಿಂದಕರ ಮಧ್ಯೆ ಸಮಾಜಮುಖಿ ಯುವಕರು ತಮ್ಮ ಸಂಕಲ್ಪದಂತೆ ಸೇವೆ ಸಲ್ಲಿಸಬೇಕು ಎಂದು ತೆವಡೇಹಳ್ಳಿ ಶ್ರೀ ಚನ್ನಬಸವೇಶ್ವರ ಗದ್ದುಗೆ ಮಠದ ಶ್ರೀ ಗೋಸಲ ಚನ್ನಬಸವೇಶ್ವರ ಶಿವಾಚಾರ್ಯ ಸ್ವಾಮೀಜಿ ಕರೆ ನೀಡಿದರು.

ಗುಬ್ಬಿ ಪಟ್ಟಣದ ಶ್ರೀ ವೀರಶೈವ ಸಮಾಜದ ಸಭಾಂಗಣದಲ್ಲಿ ಆಯೋಜಿಸಿದ್ದ ಗುಬ್ಬಿ ನಗರ ವೀರಶೈವ ಯುವ ಸೇವಾ ಸಮಿತಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು ಗುಬ್ಬಿ ಪಟ್ಟಣಕ್ಕೆ ಸೀಮಿತವಾಗಿ ರಚಿತವಾದ ಸಂಘಟನೆ ಇಡೀ ತಾಲ್ಲೂಕಿನಲ್ಲಿ ಸಂಚಲನ ಮೂಡಿಸಬೇಕು. ತಾಲ್ಲೂಕು ಮಟ್ಟದ ಸಂಘಟನೆಗೆ ಯುವ ಶಕ್ತಿ ಮುಂದಾಗಿ ಲಿಂಗಾಯಿತ ವೀರಶೈವ ಸಮಾಜದ ಎಲ್ಲಾ ಯುವಶಕ್ತಿ ಒಗ್ಗೂಡಿಸಿಕೊಂಡು ಸಮುದಾಯದಲ್ಲಿ ಬಲಹೀನರಾದವರ ಪರ ನಿಂತು ಸಮಾಜ ಕಟ್ಟಬೇಕು ಎಂದು ಸಲಹೆ ನೀಡಿದರು.

ಉತ್ತಮ ಅಜಂಡಾ ರೂಪಿಸಿ ಕಾರ್ಯಗತವಾದ ಯುವ ಸಮಿತಿ ಮುನ್ನುಗ್ಗುವ ಹಾಗೂ ಹಿಡಿದ ಕೆಲಸ ಸಾಧಿಸುವ ಛಲ ಹೊಂದಿರಬೇಕು. ವೇದಿಕೆ ಕಾರ್ಯಕ್ರಮಕ್ಕೆ ಮೀಸಲಾಗದೆ ಸಮಾಜದಲ್ಲಿನ ಬಡವರ ಪರ ಕೆಲಸ ಮಾಡಬೇಕು ಎಂದ ಅವರು ಕಲ್ಯಾಣ ಮಂಟಪ ನಿರ್ಮಾಣ ಆಲೋಚನೆ ಜೊತೆ ಸಂಘಟನೆಗೆ ಅವಶ್ಯವಿರುವ ಆರ್ಥಿಕ ಸದೃಢತೆಗೆ ಮೊದಲು ಅಂಗಡಿ ಸಂಕೀರ್ಣ ನಿರ್ಮಾಣ ಮಾಡಲು ಮುಂದಾಗಿ ಅಲ್ಲಿನ ಆದಾಯದಲ್ಲಿ ಕಷ್ಟದ ಸಮಾಜದ ಮಂದಿಗೆ ಸಹಕಾರ ಮಾಡಿ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ಮುಖಂಡ ಎಸ್.ಡಿ.ದಿಲೀಪ್ ಕುಮಾರ್ ಮಾತನಾಡಿ ಅಸೂಯೆ ಗುಣ ನಮ್ಮ ಸಮಾಜದಲ್ಲಿ ಹೆಚ್ಚಾಗಿ ಕಾಣುತ್ತದೆ. ಏಳಿಗೆ ಸಹಿಸದ ಗುಣದಿಂದ ನಮ್ಮಲ್ಲಿ ಒಗ್ಗಟ್ಟು ಮೂಡುತ್ತಿಲ್ಲ. ನಮ್ಮಲ್ಲಿನ ಒಡಕು ಬಳಸಿಕೊಂಡು ರಾಜಕೀಯ ಶಕ್ತಿ ಬೆಳೆಸಿಕೊಳ್ಳುತ್ತಿರುವ ಮಂದಿಯೇ ಇಲ್ಲಿ ಹೆಚ್ಚಾಗಿದ್ದಾರೆ. ಈ ಕಾರಣ ಯುವಕರು ಸಂಘಟಿತರಾಗಿ ಸಮಾಜದವರಿಗೆ ಅನ್ಯಾಯ ಆದಲ್ಲಿ ಬೆನ್ನೆಲುಬಾಗಿ ನಿಲ್ಲಬೇಕು. ತಂದೆ ತಾಯಿ, ಗುರು ಹಿರಿಯರಿಗೆ ಗೌರವ ನೀಡಿ ಸಮಾಜದ ನಮ್ಮ ಪರಂಪರೆ ಎತ್ತಿ ಹಿಡಿಯಿರಿ. ಕಾಲು ಎಳೆಯುವ ಪ್ರವೃತ್ತಿಯ ಜನರಿಂದ ದೂರವಿದ್ದು ಅಜಂಡ ಪ್ರಕಾರ ಕೆಲಸ ಮಾಡಿ ಎಂದು ಕರೆ ನೀಡಿದರು.

ಪಪಂ ಸದಸ್ಯ ಜಿ.ಆರ್.ಶಿವಕುಮಾರ್ ಮಾತನಾಡಿ ರಾಜಕೀಯ ರಂಗದಲ್ಲಿ ಯುವಕರು ಹಿಂದುಳಿಯುತ್ತಿದ್ದಾರೆ. ರಾಜಕೀಯ ಇಚ್ಛಾಶಕ್ತಿ ಬೆಳೆಸಿಕೊಂಡರೆ ಮಾತ್ರ ಸಮಾಜದಲ್ಲಿ ಹಲವು ಕೆಲಸ ಸಾಧಿಸಲು ಸಾಧ್ಯ. ಸಂಘಟನೆ ಬಲಪಡಿಸಿ ಎಲ್ಲಾ ದಾನಿಗಳನ್ನು ಭೇಟಿ ಮಾಡಿ ಕಲ್ಯಾಣ ಮಂಟಪ ನಿರ್ಮಾಣ ಮಾಡಲು ಮುಂದಾಗಬೇಕು. ಇಡೀ ತಾಲ್ಲೂಕಿನಲ್ಲಿ ಯುವಕರನ್ನು ಸಂಘಟಿಸಿ ಸಮಾಜದ ಅಭಿವೃದ್ಧಿಗೆ ಉತ್ತಮ ಕಾರ್ಯಕ್ರಮ ರೂಪಿಸಿಕೊಳ್ಳಿ. ಈ ಕಾರ್ಯಕ್ಕೆ ಹಿರಿಯರ ಮಾರ್ಗದರ್ಶನ ಪಡೆದು ಯುವಕರು ಜವಾಬ್ದಾರಿಯುತ ಕೆಲಸ ಮಾಡಲಿ ಎಂದು ಆಶಿಸಿದರು.

ಇದೇ ಸಂದರ್ಭದಲ್ಲಿ ಗುಬ್ಬಿ ನಗರ ವೀರಶೈವ ಯುವ ಸೇವಾ ಸಮಿತಿ ಅಧ್ಯಕ್ಷರಾಗಿ ಅರ್ಜುನ್ ಆಯ್ಕೆಯಾದರು. ಉಪಾಧ್ಯಕ್ಷರಾಗಿ ನಾಗರಾಜ್, ವಿನಯ್ ನೇಮಕವಾಗಿದ್ದು ನಿರಂಜನ್ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದರು. ಸಹ ಕಾರ್ಯದರ್ಶಿಯಾಗಿ ಪ್ರೀತಂ, ಖಜಾಂಚಿಯಾಗಿ ನವೀನ್ ಆರಾಧ್ಯ ಸೇರಿದಂತೆ ಒಟ್ಟು 46 ಮಂದಿ ಸದಸ್ಯರ ಸಮಿತಿಯಲ್ಲಿ 20 ಮಂದಿ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಕಲ್ಯಾಣ ಮಂಟಪ ನಿರ್ಮಾಣ, ರುದ್ರಭೂಮಿ ಅಭಿವೃದ್ದಿ ಹಾಗೂ ಕೈಲಾಸರಥ ವಾಹನ ಬಗ್ಗೆ ಚರ್ಚೆ ಮಾಡಲಾಯಿತು.

ವೇದಿಕೆಯಲ್ಲಿ ಲಿಂಗಾಯಿತ ವೀರಶೈವ ಮಹಾಸಭಾದ ಅಧ್ಯಕ್ಷ ಮಂಜುನಾಥ್, ನಿಕಟ ಪೂರ್ವ ಅಧ್ಯಕ್ಷ ಗಂಗಾಧರ್, ಕಾರ್ಯದರ್ಶಿ ಬಸವರಾಜು, ಮುಖಂಡರಾದ ಕಾಯಿ ಸುರೇಶ್, ಅರುಣ್ ಸೇರಿದಂತೆ ವೀರಶೈವ ಮಹಿಳಾ ಸಮಾಜದ ಪದಾಧಿಕಾರಿಗಳು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...