ಗುಬ್ಬಿ | ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಒಂದು ಲಕ್ಷ ಮತದಾರರ ನೋಂದಣಿ ಗುರಿ : ವಸಂತಕುಮಾರ್

Date:

 ಬಿಜೆಪಿ ರಾಜ್ಯಾಧ್ಯಕ್ಷರ ಆದೇಶದಂತೆ ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡು ಬಿಜೆಪಿ ಕಾರ್ಯಕರ್ತರ ಸಭೆ ನಡೆಸಿ ಪದವೀಧರರಲ್ಲಿ ಜಾಗೃತಿ ಮೂಡಿಸಿ ಮತದಾರ ನೋಂದಣಿ ಮಾಡಿಸುವ ಕಾರ್ಯಕ್ಕೆ ಚಾಲನೆ ನೀಡಿದ್ದು ಆಗ್ನೇಯ ಕ್ಷೇತ್ರದಲ್ಲಿ ಒಂದು ಲಕ್ಷ ಮತದಾರರ ನೋಂದಣಿ ಮಾಡಿಸುವ ಗುರಿ ಹೊಂದಿದ್ದೇವೆ ಎಂದು ಬಿಜೆಪಿ ರಾಜ್ಯ ಕಾನೂನು ಪ್ರಕೋಷ್ಠ ಅಧ್ಯಕ್ಷ ವಸಂತಕುಮಾರ್ ತಿಳಿಸಿದರು.

ಗುಬ್ಬಿ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು 600 ಕಿಮೀ ವ್ಯಾಪ್ತಿಯ ಬೌಗೋಳಿಕ ಆಗ್ನೇಯ ಪದವೀಧರ ಕ್ಷೇತ್ರದಲ್ಲಿ 34 ವಿಧಾನಸಭಾ ಕ್ಷೇತ್ರ, 36 ತಾಲ್ಲೂಕು ಒಳಗೊಂಡಿದೆ. 2020 ರಲ್ಲಿ ನಡೆದ ಈ ಚುನಾವಣೆಯಲ್ಲಿ 1.15 ಲಕ್ಷ ಮತದಾರರು ಇದ್ದರು. 75 ಸಾವಿರ ಮತದಾನ ನಡೆದು ಬಿಜೆಪಿ ಅಭ್ಯರ್ಥಿ ಚಿದಾನಂದಗೌಡ ಅವರು 39 ಸಾವಿರಕ್ಕೂ ಅಧಿಕ ಬಹುಮತ ಪಡೆದು ಗೆಲುವು ಸಾಧಿಸಿದ್ದರು. ಇದೇ ಸಮಯ ನಾನು ಖುದ್ದು ಕ್ಷೇತ್ರ ಪ್ರವಾಸ ನಡೆಸಿ 20 ಸಾವಿರ ಹೊಸ ಮತದಾರರ ನೋಂದಣಿ ಮಾಡಿಸಿದ್ದೆವು. ಆದರೆ ಈ ಬಾರಿ ಒಂದು ಲಕ್ಷ ಮತದಾರರ ಸೇರ್ಪಡೆಗೆ ಸತತ ಪ್ರಯತ್ನ ಮಾಡುತ್ತೇವೆ ಎಂದರು. 

ಪ್ರಸ್ತುತ ಚುನಾವಣೆಯಲ್ಲಿ ಆಗ್ನೇಯ ಪದವೀಧರ ಕ್ಷೇತ್ರ, ಬೆಂಗಳೂರು ಶಿಕ್ಷಕರ ಕ್ಷೇತ್ರ, ಗದಗ ಆಗ್ನೇಯ ಪದವೀಧರ ಕ್ಷೇತ್ರ ಹಾಗೂ ಗುಲ್ಬರ್ಗ ಈಶಾನ್ಯ ಶಿಕ್ಷಕರ ಕ್ಷೇತ್ರ ಸಿದ್ಧವಿದೆ. ಇಲ್ಲಿನ ಉಸ್ತುವಾರಿಗೆ ಬಿಜೆಪಿ ಸಮಿತಿ ರಚಿಸಿದೆ. ಸಿ.ಟಿ.ರವಿ, ಆರ್.ಅಶೋಕ್, ನಳಿನಕುಮಾರ ಕಟೀಲು, ಗೋವಿಂದ ಕಾರಜೋಳ ಹಾಗೂ ಶ್ರೀರಾಮಲು ಅವರ ತಂಡ ಸೂಕ್ತ ಅಭ್ಯರ್ಥಿ ಆಯ್ಕೆ ಮಾಡಲಿದ್ದಾರೆ. ಈಗಾಗಲೇ ಕೋಲಾರ ಜಿಲ್ಲೆಯ ಪ್ರವಾಸ ಮುಗಿಸಿ ತುಮಕೂರು ಜಿಲ್ಲೆಯಲ್ಲಿ ಸಿದ್ದಗಂಗಾ ಮಠ ಪೂಜೆ ಸಲ್ಲಿಸಿ ಪ್ರವಾಸ ಆರಂಭಿಸಿದ್ದೇವೆ. ಎಲ್ಲಾ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪದವೀಧರರನ್ನು ಜಾಗೃತಿಗೊಳಿಸಿ ನೋಂದಣಿ ಮಾಡಿಸಬೇಕು ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ಮುಖಂಡ ಎಸ್.ಡಿ.ದಿಲೀಪ್ ಕುಮಾರ್ ಮಾತನಾಡಿ ಪದವಿ ಮುಗಿಸಿ ಗ್ರಾಮೀಣ ಭಾಗದಲ್ಲಿ ಕೃಷಿಕ ಕೆಲಸ ಮಾಡುವ ಬಹಳ ಮಂದಿ ಈ ಚುನಾವಣೆ ಬಗ್ಗೆ ಆಸಕ್ತಿ ತೋರುವುದಿಲ್ಲ. ಆದ್ದರಿಂದ ಬಿಜೆಪಿ ಅಂತಹ ಪದವೀಧರರನ್ನು ಭೇಟಿ ಮಾಡಿ ನಮ್ಮ ಜವಾಬ್ದಾರಿ ಬಗ್ಗೆ ತಿಳಿಸಿ ನೋಂದಣಿ ಮಾಡಿಸಲು ಸಜ್ಜಾಗಿದೆ. ಗುಬ್ಬಿ ತಾಲ್ಲೂಕಿನಲ್ಲಿ ಸಹ ನೂರಾರು ಮಂದಿ ಮತದಾರರನ್ನು ಹುಡುಕುವ ಕೆಲಸ ಆರಂಭಿಸಿದ್ದೇವೆ ಎಂದ ಅವರು ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಯ ಈ ಆಗ್ನೇಯ ಪದವೀಧರ ಕ್ಷೇತ್ರ ಪ್ರವಾಸ ಮಾಡುತ್ತಿರುವ ರಾಜ್ಯ ತಂಡಕ್ಕೆ ಕಾರ್ಯಕರ್ತರು ಸಹಕಾರ ನೀಡಿಲಿದ್ದಾರೆ ಎಂದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಎಚ್.ಟಿ.ಭೈರಪ್ಪ ಮಾತನಾಡಿ ಚುನಾವಣೆಗೆ ಮುನ್ನವೇ ಓಡಾಟ ನಡೆಸುವ ಬಿಜೆಪಿ ಎಂದಿಗೂ ಪದವೀಧರರ ಮನಸ್ಸು ಗೆದ್ದಿದೆ. ಈ ಹಿಂದೆ ನಾಲ್ಕೈದು ಬಾರಿ ಬಿಜೆಪಿ ಗೆಲುವು ಸಾಧಿಸಿದೆ. ಈಚೆಗೆ ಕಾಂಗ್ರೆಸ್ ಪೈಪೋಟಿಗೆ ಬರುತ್ತಿದೆ. ಆದರೆ ಸುಶಿಕ್ಷಿತರು ಬಿಜೆಪಿಗೆ ಒಲವು ತೋರುತ್ತಾರೆ. ಪಕ್ಷದ ಮುಖಂಡರು ಕಾರ್ಯಕರ್ತರು ಬಿಜೆಪಿಗೆ ಮತಯಾಚನೆ ಮಾಡುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಪದವೀಧರ ಕ್ಷೇತ್ರದ ನೋಂದಣಿ ಅರ್ಜಿಯನ್ನು ಹಂಚಲಾಯಿತು.

ಸಭೆಯಲ್ಲಿ ಕಾನೂನು ಪ್ರಕೋಷ್ಠದ ವಕೀಲರಾದ ವಿಶ್ವನಾಥ್, ಸುಮನಾ, ಶಿವಪ್ರಸಾದ್, ಶಶಿಧರ್, ಎಚ್.ಎನ್.ಲೋಕೇಶ್, ಬಿ.ಲೋಕೇಶ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...