ಗುಬ್ಬಿ | ನಿಶ್ಚಿತಾರ್ಥಕ್ಕೆ ತಂದ ಬಂಗಾರದ ಒಡವೆಗಳು, ನಗದನ್ನು ಹಾಡಹಗಲೇ ದೋಚಿದ ಖದೀಮರು

Date:

ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ಮಾರುತಿನಗರ ಬಡಾವಣೆಯಲ್ಲಿ ಹಾಡಹಗಲೇ ಕಳ್ಳತನ ನಡೆದಿದ್ದು, ಮಗಳ ನಿಶ್ಚಿತಾರ್ಥಕ್ಕೆಂದು ಮಾಡಿಸಿದ್ದ ಬಂಗಾರದ ಒಡವೆಗಳು ಹಾಗೂ ಹಣವನ್ನು ಖದೀಮರು ದೋಚಿರುವ ಘಟನೆ ನಾಗರಿಕರಲ್ಲಿ ಆತಂಕ ಮನೆಮಾಡಿದೆ.

ಪಟ್ಟಣದ ಮಾರುತಿ ನಗರ ಬಡಾವಣೆ ಒಂದನೇ ಕ್ರಾಸ್‌ನಲ್ಲಿನ ಸರ್ವೇಯರ್ ಜಗದೀಶ್ ಅವರ ಮನೆಗೆ ಹಾಡಹಗಲೇ ಕನ್ನ ಹಾಕಿರುವ ಕಳ್ಳರು ಅಂದಾಜು 30 ಲಕ್ಷ ರೂಪಾಯಿಗಳ ಚಿನ್ನಾಭರಣ ಹಾಗೂ 3.50 ಲಕ್ಷ ನಗದು ದೋಚಿದ್ದಾರೆ. ಸರ್ವೇಯರ್ ಜಗದೀಶ್ ಹಾಗೂ ಪತ್ನಿ ಶಿಕ್ಷಕಿ ಸುಜಾತ ಬೆಳಿಗ್ಗೆ ಕೆಲಸಕ್ಕೆಂದು ಹೋಗುವಾಗ ಮನೆಗೆ ಬೀಗ ಹಾಕಿಕೊಂಡು ತೆರಳಿದ್ದರು. ಕರ್ತವ್ಯ ಮುಗಿಸಿ ಸಂಜೆ ವೇಳೆ ಮನೆಗೆ ಬಂದಾಗ ಮನೆಯ ಬಾಗಿಲಿನ ಬೀಗ ಮುರಿದಿರುವುದು ಬೆಳಕಿಗೆ ಬಂದಿದೆ.

ಮನೆಯಲ್ಲಿದ್ದ 22 ಜೊತೆ ಓಲೆಗಳು, 5 ಸರಗಳು, 8 ಉಂಗುರಗಳು ಸೇರಿದಂತೆ 3.50 ಲಕ್ಷ ರೂಪಾಯಿ ಹಣವನ್ನು ದೋಚಿ ಪರಾರಿಯಾಗಿರುವ ಘಟನೆ ಬಡಾವಣೆಯ ನಾಗರಿಕರಲ್ಲಿ ಭಯ ಆವರಿಸಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯ ತಿಳಿದು ಮಾಡಿರುವ ಈ ಕೃತ್ಯ ಚಿನ್ನಾಭರಣ ಹಣ ಇರುವ ಬಗ್ಗೆ ಖಚಿತ ಮಾಹಿತಿ ಕಳ್ಳರಿಗೆ ಹೇಗೆ ತಿಳಿದಿದೆ ಎಂಬ ವಿಚಾರ ಸಾರ್ವಜನಿಕರಲ್ಲಿ ಚರ್ಚೆ ನಡೆದಿದೆ. ಪೊಲೀಸರು ಚುರುಕಿನ ತನಿಖೆ ನಡೆಸಬೇಕಿದೆ. ಹಾಡಹಗಲೇ ಇಂತಹ ಘಟನೆ ನಡೆದರೆ ಪೊಲೀಸರ ಮೇಲಿನ ನಂಬಿಕೆ ಸಾರ್ವಜನಿಕರಲ್ಲಿ ಇಲ್ಲವಾಗುತ್ತದೆ ಎಂದು ನಾಗರೀಕರು ಚರ್ಚೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಸಮುದ್ರ ಮೀನುಗಾರಿಕೆ ಪ್ರಾರಂಭ: 2 ತಿಂಗಳ ಬಳಿಕ ಕಡಲಿಗಿಳಿದ ಬೋಟುಗಳು

ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ್, ಡಿವೈಎಸ್‌ಪಿ ಶೇಖರ್, ಸಿಪಿಐ ರಾಘವೇಂದ್ರ ಹಾಗೂ ಪಿಎಸ್ಐ ಸುನೀಲ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿ ಖದೀಮರ ಸೆರೆಗೆ ಬಲೆ ಬೀಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...