ಗುಬ್ಬಿ | ಸಂಸ್ಕೃತದಲ್ಲಿ ಕನ್ನಡ ಪದ ನಮ್ಮ ಹೆಮ್ಮೆ : ಆನಂದ್

Date:

ಸಂಸ್ಕೃತ ಭಾಷೆಯ ಸುಮಾರು 60 ಕ್ಕೂ ಹೆಚ್ಚು ಪದಗಳು ಪ್ರಸ್ತುತ ಕನ್ನಡ ಭಾಷೆಯಲ್ಲಿ ಇರುವುದು ವಿಶೇಷ ಹೆಮ್ಮೆ ಎನಿಸಿದೆ ಎಂದು ಎಸ್ ಡಿಎಂಸಿ ಅಧ್ಯಕ್ಷ ಆನಂದ್ ತಿಳಿಸಿದರು.

ಗುಬ್ಬಿ ಪಟ್ಟಣದ ಸರ್ಕಾರಿ ಕನ್ನಡ ಬಾಲಕರ ಹಿರಿಯ ಪ್ರಾಥಮಿಕ ಶಾಲೆಯ ಸಂಸ್ಕೃತ ವಿಭಾಗ ಹಾಗೂ ಭಾರತಿ ಸಂಸ್ಕೃತ ವಿದ್ಯಾಲಯ ವತಿಯಿಂದ ಆಯೋಜಿಸಲಾಗಿದೆ ಆಸ್ಮಕಂ ಸಂಸ್ಕೃತಂ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿಶೇಷ ಅರ್ಥವನ್ನು ನೀಡುವ ಸಂಸ್ಕೃತ ಭಾಷೆಯ ಕಲಿಕೆಯು ಎಲ್ಲಾ ಮಕ್ಕಳಿಗೂ ಅನಿವಾರ್ಯವಾಗಿ ಬೇಕಾಗಿದೆ ಈ ನಿಟ್ಟಿನಲ್ಲಿ ಸಂಸ್ಕೃತ ಭಾಷೆಯ ಪರಿಚಯವನ್ನು ಪ್ರತಿಯೊಬ್ಬರು ತಿಳಿಯಬೇಕಿದೆ ಎಂದರು.

ಬೆಟ್ಟದಹಳ್ಳಿ ಮಠದ ಸಂಸ್ಕೃತಿ ಭಾಷೆಯ ಮುಖ್ಯ ಶಿಕ್ಷಕ ಸಿ.ಎಂ.ಭೋಜಯ್ಯ ಮಾತನಾಡಿ, ಭಾರತದ ಪ್ರಾಚೀನ ಕಾಲದಲ್ಲಿ ಗುರುಕುಲ ಪದ್ಧತಿಯಲ್ಲಿ ಮಕ್ಕಳಿಗೆ ಸಂಸ್ಕೃತಿ ಭಾಷೆಯ ಪಾಠವನ್ನು ಕಲಿಸಲಾಗುತ್ತಿತ್ತು. ಆಗಿನ ಸಂದರ್ಭದಲ್ಲಿ ಸಂಸ್ಕೃತ ಭಾಷೆಯನ್ನು ಸಂವಹನ ಭಾಷೆಯಾಗಿ ಬಳಕೆ ಮಾಡುತ್ತಿದ್ದರಿಂದ ಹೆಚ್ಚು ಮನ್ನಣೆಯನ್ನು ಗಳಿಸಿತ್ತು. ಇಂದಿಗೂ ಸಹ ಸಂಸ್ಕೃತಿ ಭಾಷೆಯು ವೈಜ್ಞಾನಿಕ ಭಾಷೆಯ ಸ್ಥಾನವನ್ನು ಪಡೆದಿದ್ದು ದೇಶದ ಹಿರಿಮೆ ಗರಿಮೆಯನ್ನು ಎತ್ತಿ ಹಿಡಿದ ಸಂಸ್ಕೃತ ಭಾಷೆಯು ನಮ್ಮ ಭಾರತದ ಹೆಮ್ಮೆಯ ಭಾಷೆಯಾಗಿದೆ ಎಂದ ಅವರು ಪ್ರಸ್ತುತ ಇರುವ ಎಲ್ಲಾ ಭಾಷೆಗಳಿಗೆ ಮೂಲ ಭಾಷೆಯಾಗಿ ತಾಯಿ ಭಾಷೆಯಾಗಿದೆ ಹಾಗೂ ಮಾನವನ ಸರ್ವಾಂಗಿನ ಅಭಿವೃದ್ಧಿಗೆ ಸಂಸ್ಕೃತ ಭಾಷೆಯು ಮೂಲವಾಗಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಸಿಆರ್ ಪಿ ನಾಗಭೂಷಣ್, ಮುಖ್ಯ ಶಿಕ್ಷಕಿ ಮಂಜುಳಾ, ಸಹ ಶಿಕ್ಷಕರಾದ ಸುಮಿತ್ರಾ , ಶೋಭಾ, ನಟರಾಜು, ಪುರುಷೋತ್ತಮ್, ಸಂಸ್ಕೃತ ಶಿಕ್ಷಕರಾದ ರಘುನಾಥ್, ಕವನ, ಕುಮಾರ್, ಭಾರತಿ ಸಂಸ್ಕೃತ ವಿದ್ಯಾಲಯ ಸಂಸ್ಥೆಯ ಕಾರ್ಯದರ್ಶಿ ರಾಜಮ್ಮ, ಸಹ ಶಿಕ್ಷಕರಾದ ಕೆಂಪರಾಜು, ನಂದಿನಿ, ಭಾಗ್ಯಮ್ಮ, ಪೋಷಕರು ಎಸ್ ಡಿ ಎಂ ಸಿ ಪದಾಧಿಕಾರಿಗಳು, ವಿದ್ಯಾರ್ಥಿಗಳು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...