ಗುಬ್ಬಿ | ವಿಶೇಷ ಪೌಷ್ಟಿಕ ಆಹಾರ ವಿತರಣೆಯಲ್ಲಿ ಲೋಪ ಬರಬಾರದು : ಶಾಸಕ ಎಸ್.ಆರ್.ಶ್ರೀನಿವಾಸ್

Date:

 ಗಣಿಬಾದಿತ ಪ್ರದೇಶದ ಸರ್ಕಾರಿ ಶಾಲಾ ಮಕ್ಕಳಲ್ಲಿ ಕಾಣಿಸಿಕೊಂಡ ಅಪೌಷ್ಟಿಕತೆ ಹೋಗಲಾಡಿಸಲು ಸರ್ಕಾರ ವಿಶೇಷ ಪೌಷ್ಟಿಕ ಆಹಾರವನ್ನು ಬಿಸಿಯೂಟದ ಜೊತೆ ಸಂಜೆ ವೇಳೆ ನೀಡುವ ಯೋಜನೆ ರೂಪಿಸಿರುವುದು ಸ್ವಾಗತಾರ್ಹ. ಅರ್ಹ ಮಕ್ಕಳಿಗೆ ಈ ಆಹಾರ ಸಿಗಬೇಕು. ಯಾವುದೇ ಲೋಪ ಕಾಣದಂತೆ ಎಚ್ಚರಿಕೆ ವಹಿಸಿ ಎಂದು ಶಿಕ್ಷಕರಿಗೆ ಶಾಸಕ ಎಸ್.ಆರ್.ಶ್ರೀನಿವಾಸ್ ಸೂಚಿಸಿದರು.

ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಪಿಎಂಶ್ರಿ ಶಾಲೆಯಲ್ಲಿ ಆಯೋಜಿಸಿದ್ದ ಸಿಇಪಿಎಂಐಝಡ್ ಯೋಜನೆಯ ಮೂಲಕ ಮಕ್ಕಳಿಗೆ ವಿಶೇಷ ಪೂರಕ ಪೌಷ್ಟಿಕ ಆಹಾರ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಬಿಸಿಯೂಟವನ್ನು ರುಚಿ ಶುಚಿಯಾಗಿ ನೀಡಬೇಕು. ಇತ್ತೀಚಿಗೆ ದೂರುಗಳು ಬರುತ್ತಿವೆ. ಎಲ್ಲವನ್ನೂ ಸರಿಪಡಿಸಿ ಶಿಕ್ಷಕರು ನಿಮ್ಮ ಮಕ್ಕಳಂತೆ ವಿದ್ಯಾರ್ಥಿಗಳನ್ನು ಬೆಳೆಸಲು ಸಲಹೆ ನೀಡಿದರು.

ಗಣಿಬಾದಿತ ಪ್ರದೇಶದಲ್ಲಿ ಮಕ್ಕಳ ಶಿಕ್ಷಣಕ್ಕೆ ಕೊರತೆ ಆಗದಂತೆ ಸರ್ಕಾರ ವಿಶೇಷ ಅನುದಾನ ನೀಡಿ ಶಾಲೆ ವಾತಾವರಣ ಸರಿ ಪಡಿಸಿದೆ. ಜೊತೆಗೆ ಬಿಸಿಯೂಟ ಜೊತೆ ಸಂಜೆಯಲ್ಲಿ ಪೌಷ್ಟಿಕ ಆಹಾರ ಕಾಳು ಉಸಲಿ ನೀಡಲು ಯೋಜನೆ ರೂಪಿಸಿರುವುದು ಮೆಚ್ಚುವಂತಹದ್ದು. ಐಟಿಬಿಟಿ ಯುಗದಲ್ಲಿ ಮಕ್ಕಳು ಉತ್ತಮ ಶಿಕ್ಷಣ ಪಡೆಯುತ್ತಿದ್ದಾರೆ. 90 ರ ಮೇಲಿನ ಅಂಕ ಗಳಿಸಿದರೂ ಹಾಸ್ಟೆಲ್ ದಾಖಲು ಆಗುತ್ತಿಲ್ಲ. ಈ ಹಿನ್ನಲೆ ಉತ್ತಮ ಪಾಠ ಜೊತೆಗೆ ಆಹಾರ ನೀಡುವ ಸರ್ಕಾರಿ ಸವಲತ್ತು ಬಳಸಿಕೊಂಡು ಮಕ್ಕಳು ಉತ್ತಮ ಶಿಕ್ಷಣ ಪಡೆಯಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಿಡಿಪಿಐ ರಘುಚಂದ್ರ ಮಾತನಾಡಿ ಗಣಿಬಾದಿತ ನಾಲ್ಕು ಜಿಲ್ಲೆಗಳ ಪೈಕಿ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕು ಸೇರಿದೆ. ಒಟ್ಟು 15200 ಮಕ್ಕಳು ಈ ಯೋಜನೆಗೆ ಒಳಪಡುತ್ತಾರೆ. ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡುವ ವಿಶೇಷ ಯೋಜನೆಯಲ್ಲಿ ಪೌಷ್ಟಿಕಾಂಶ ಇರುವ ಕಾಳುಗಳ ಉಸಲಿ ವಿತರಣೆ ಮಾಡಲಾಗುತ್ತದೆ. ಬಿಸಿಯೂಟ ಜೊತೆಗೆ ಸಂಜೆ ವೇಳೆ ಈ ಆಹಾರ ನೀಡಲಾಗುತ್ತಿದೆ ಎಂದರು.

ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಜಗದೀಶ್ ಮಾತನಾಡಿ ಗಣಿಬಾದಿತ 4 ಜಿಲ್ಲೆಯ ಒಟ್ಟು 10 ತಾಲ್ಲೂಕಿನಲ್ಲಿ ಗುಬ್ಬಿ ತಾಲ್ಲೂಕು ಸೇರಿದ್ದು, ಶಾಲಾ ಅವಧಿಯ ನಂತರ ವಿಶೇಷ ಪೂರಕ ಪೌಷ್ಟಿಕ ಆಹಾರ ವಿತರಣೆ ಮಾಡಲು ಸೂಚಿಸಲಾಗಿದೆ. ಸಾಂಕೇತಿಕವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಪ್ರತಿನಿತ್ಯ ಮಕ್ಕಳಿಗೆ ನೀಡಿ ದೈಹಿಕ ಸದೃಢತೆ ಕಾಪಾಡಬೇಕಿದೆ. ಶಿಕ್ಷಕರು ಈ ಯೋಜನೆಯನ್ನು ಉತ್ತಮ ರೀತಿಯಲ್ಲಿ ನಡೆಸಿ ಮಕ್ಕಳ ಆರೋಗ್ಯ ಕಾಪಾಡಿ ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಆರತಿ.ಬಿ, ಡಿಡಿಪಿಐ (ಅಭಿವೃದ್ದಿ) ಮಂಜುನಾಥ್, ತಾಪಂ ಇಓ ರಂಗನಾಥ್, ಬಿಇಓ ನಟರಾಜ್, ಬಿಆರ್ ಸಿ ಮಧುಸೂದನ್, ಎಸ್ ಡಿಎಂಸಿ ಅಧ್ಯಕ್ಷ ಆನಂದ್, ಮುಖ್ಯ ಶಿಕ್ಷಕಿ ಮಂಜುಳಾ, ಶಿಕ್ಷಕರಾದ ನಟರಾಜ್, ಸುಮಿತ್ರಾ, ನಿತ್ಯಶ್ರೀ, ಶೋಭಾ, ಪುರುಷೋತ್ತಮ್, ಈರಮ್ಮ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...