ಗುಬ್ಬಿ | ಸ್ವಚ್ಛತೆ ಶುದ್ಧ ಜಲ ಜನಜಾಗೃತಿ ಅಭಿಯಾನಕ್ಕೆ ತಾಪಂ ಇಒ ಶಿವಪ್ರಕಾಶ್ ಚಾಲನೆ

Date:

ಹರ್ ಘರ್ ತಿರಂಗಾ ಸ್ವಾತಂತ್ರೋತ್ಸವ ಅಂಗವಾಗಿ ತಾಲ್ಲೂಕಿನ ಕಸಬ ಹೋಬಳಿ ಎಂ.ಎಚ್.ಪಟ್ಟಣ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣ ಸ್ವಚ್ಚಗೊಳಿಸುವ ಮೂಲಕ ಸ್ವಚ್ಛತೆ ಹಾಗೂ ಶುದ್ಧ ಜಲ ಜನ ಜಾಗೃತಿ ಅಭಿಯಾನಕ್ಕೆ ತಾಲ್ಲೂಕು ಪಂಚಾಯಿತಿ ಇಓ ಶಿವಪ್ರಕಾಶ್ ಚಾಲನೆ ನೀಡಿದರು.

ಎಂ.ಎಚ್.ಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಎಲ್ಲಾ ಗ್ರಾಮಗಳಲ್ಲಿ ಸ್ವಚ್ಛತಾ ಕಾರ್ಯಕ್ಕೆ ಸಾಂಕೇತಿಕ ಚಾಲನೆ ನೀಡಿದ ಇಓ ಶಿವಪ್ರಕಾಶ್ ಅವರು ಶಾಲಾ ಮಕ್ಕಳಿಗೆ ಸ್ವಚ್ಚತಾ ಅರಿವು ಮೂಡಿಸುವ ಪ್ರತಿಜ್ಞಾ ವಿಧಿ ಬೋಧಿಸಿದರು.

ನಂತರ ಕರಿಶೆಟ್ಟಿಹಳ್ಳಿ ಗ್ರಾಮದ ಬಳಿಯ ಕಸ ವಿಲೇವಾರಿ ಘಟಕ ಹತ್ತಿರ ಸ್ವಚ್ಚತಾ ಕಾರ್ಯ ನಡೆಸಿದ ಇಓ ಶಿವಪ್ರಕಾಶ್ ಅವರು ಸುದ್ದಿಗಾರರ ಜೊತೆ ಮಾತನಾಡಿ ಜಾಗತೀಕ ಯುಗದಲ್ಲಿ ಪರಿಸರ ಕಲುಷಿತಗೊಂಡಿದೆ. ಶುದ್ಧ ನೀರು ಗಾಳಿ ದೊರೆಯುವುದು ಕಷ್ಟಕರವಾಗುತ್ತಿದೆ. ಮುಂದಿನ ಪೀಳಿಗೆ ಉಳಿಸುವ ಸಲುವಾಗಿ ಪರಿಸರ ಸಂರಕ್ಷಣೆ ಜಾಗೃತಿ ಮೂಡಿಸುವ ಜವಾಬ್ದಾರಿ ಹೊತ್ತ ಸರ್ಕಾರ ಪ್ರತಿ ಹಳ್ಳಿಯಲ್ಲೂ ಸ್ವಚ್ಚತಾ ಅಭಿಯಾನ ಹಮ್ಮಿಕೊಂಡಿದೆ. ಈ ಕಾರ್ಯಕ್ಕೆ ಸಾರ್ವಜನಿಕರು ಹಾಗೂ ಜನ ಪ್ರತಿನಿಧಿಗಳ ಸಹಕಾರ ಅತ್ಯಗತ್ಯ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಂ.ಎಚ್.ಪಟ್ಟಣ ಗ್ರಾಪಂ ಪಿಡಿಓ ಶೇಖರ್ ಮಾತನಾಡಿ ಆರೋಗ್ಯ ಗ್ರಾಮ ನಿರ್ಮಾಣಕ್ಕೆ ಉತ್ತಮ ಪರಿಸರ ವ್ಯವಸ್ಥೆ ಅಗತ್ಯವಿದೆ. ಪ್ರತಿ ಗ್ರಾಮದಲ್ಲೂ ಚರಂಡಿ, ರಸ್ತೆ, ಕೆರೆಕಟ್ಟೆ ಸ್ವಚವಾಗಿ ಇಟ್ಟುಕೊಳ್ಳುವ ಜಾಗೃತಿ ಮೂಡಿಸಬೇಕಿದೆ. ಪಂಚಾಯಿತಿ ಮೂಲಕ ಕೂಡಾ ಸ್ವಚ್ಛತೆ ನಿರಂತರ ನಡೆಯಲಿದೆ. ನಮ್ಮ ಕಾರ್ಯಕ್ಕೆ ಸಾರ್ವಜನಿಕರು ಸಹಕಾರ ನೀಡಿದರೆ ಉತ್ತಮ ಪರಿಸರದ ಗ್ರಾಮ ನಿರ್ಮಾಣ ಆಗಲಿದೆ. ಈ ನಿಟ್ಟಿನಲ್ಲಿ ಮಕ್ಕಳಿಗೆ ಜಾಗೃತಿ ಮೂಡಿಸಿ ಮನೆಯ ಪರಿಸರ ಕಾಪಾಡಲು ತಿಳಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಸ್ವಚ್ಛ ಭಾರತ್ ಮಿಶನ್ ಜಿಲ್ಲಾ ಸಮಾಲೋಚಕಿ ವಿನುತಾ, ಐಇಸಿ ತಾಲ್ಲೂಕು ಸಂಯೋಜಕ ರಾಘವೇಂದ್ರ, ಪಂಚಾಯಿತಿ ಸಿಬ್ಬಂದಿಗಳಾದ ಗೀತಾ, ಪುನೀತ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...