ಗುಬ್ಬಿ | ಸ್ನೇಹಿತನ ಜತೆಗೆ ಪತ್ನಿ ಪರಾರಿ; ಸೆಲ್ಫಿ ವಿಡಿಯೊ ಫೇಸ್‌ಬುಕ್‌ಗೆ ಹರಿಬಿಟ್ಟ ಪತಿ ನೇಣಿಗೆ ಶರಣು

Date:

ಪ್ರೀತಿಸಿ ಮದುವೆಯಾಗಿದ್ದ ದಂಪತಿ ಮಧ್ಯೆ ಬಂದ ಸ್ನೇಹಿತ ಪತ್ನಿಯನ್ನು ಮೋಹಿಸಿ ಕರೆದೊಯ್ದ ವಿಚಾರಕ್ಕೆ ಮನನೊಂದ ಪತಿ ಸೆಲ್ಫಿ ವಿಡಿಯೊ ಮೂಲಕ ನನ್ನ ಸಾವಿಗೆ ಓಡಿ ಹೋದ ಪತ್ನಿ ಹಾಗೂ ಸ್ನೇಹಿತ ಕಾರಣ. ನ್ಯಾಯ ಕೊಡಿಸಿ ಎಂದು ಸ್ನೇಹಿತರಲ್ಲಿ ಮನವಿ ಮಾಡಿದ ವಿಡಿಯೊವನ್ನು ಫೇಸ್‌ಬುಕ್‌ಗೆ ಅಪ್ಲೋಡ್ ಮಾಡಿ ನೇಣಿಗೆ ಶರಣಾದ ದಾರುಣ ಘಟನೆ ಮಂಗಳವಾರ ಗುಬ್ಬಿ ಪಟ್ಟಣದ ಗಟ್ಟಿ ಲೇಔಟ್ ಬಡಾವಣೆಯಲ್ಲಿ ನಡೆದಿದೆ.

ನಾಗೇಶ್(35) ನೇಣಿಗೆ ಶರಣಾದ ದುರ್ದೈವಿ. ಕಳೆದ 12 ವರ್ಷದ ಹಿಂದೆ ರಂಜಿತಾ ಎಂಬ ಯುವತಿಯನ್ನು ಪ್ರೀತಿಸಿ ಮದುವೆ ಆಗಿದ್ದ ನಾಗೇಶ್ ಈಚೆಗೆ ಸ್ವಂತ ಮನೆ ಮಾರಾಟ ಮಾಡಿ ಗಟ್ಟಿ ಲೇಔಟ್ ಬಡಾವಣೆಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಈಚೆಗೆ ಈ ದಂಪತಿಗಳ ಮಧ್ಯೆ ಬಿರುಗಾಳಿಯಂತೆ ಬಂದ ಸ್ನೇಹಿತ ಭರತ್ ಎಂಬಾತ ರಂಜಿತಾಳನ್ನು ಮೋಹಕ್ಕೆ ಸಿಲುಕಿಸಿಕೊಂಡು ಓಡಿ ಹೋದ ಘಟನೆ ನಡೆದಿದೆ.

1001069669

ತೀವ್ರ ಮನನೊಂದ ನಾಗೇಶ್ ಜಿಗುಪ್ಸೆಯಲ್ಲಿ ಎರಡು ಮಕ್ಕಳನ್ನು ಬಿಟ್ಟು ಮಂಗಳವಾರ ಮನೆಯಲ್ಲಿ ಸೆಲ್ಫಿ ವಿಡಿಯೋ ಮಾಡಿ ತನ್ನ ಸಂಸಾರದಲ್ಲಿ ಬಂದ ಸ್ನೇಹಿತ ಭರತ್ ತನ್ನ ಪತ್ನಿ ರಂಜಿತಾ ಜೊತೆ ಅನೈತಿಕ ಸಂಬಂಧ ಹೊಂದಿದ್ದು, ಈಚೆಗೆ ಇಬ್ಬರು ಪರಾರಿಯಾದ ಘಟನೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ. ನನ್ನ ಸಾವಿಗೆ ಪತ್ನಿ ರಂಜಿತಾ ಹಾಗೂ ಸ್ನೇಹಿತ ಭರತ್ ಕಾರಣ ಎಂದು ಹೇಳಿ ವಿಡಿಯೊವನ್ನು ಫೇಸ್ ಬುಕ್‌ಗೆ ಅಪ್ಲೋಡ್ ಮಾಡಿ ನೇಣಿಗೆ ಶರಣಾಗಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001069668

ವಿಡಿಯೋ ನೋಡಿದ ಹಲವು ಸ್ನೇಹಿತರು ಮನೆಯತ್ತ ಬರುವ ವೇಳೆಗೆ ನಾಗೇಶ್ ಪ್ರಾಣಪಕ್ಷಿ ಹಾರಿ ಹೋಗಿತ್ತು. ಗುಬ್ಬಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಆತ್ಮಹತ್ಯೆ ಪರಿಹಾರವಲ್ಲ 10
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...